ದೇವೇಗೌಡರಂತೆ ಮಾತೃಭೂಮಿ ಪ್ರೀತಿಸಿ: ಸುತ್ತೂರಿನಲ್ಲಿ ಉಪರಾಷ್ಟ್ರಪತಿ
Team Udayavani, Aug 28, 2018, 12:49 PM IST
ಮೈಸೂರು: ಯಾವತ್ತೂ ಮಾತೃಭೂಮಿ, ಮಾತೃಭಾಷೆಯನ್ನು ಮರೆಯಬಾರದು. ದೇವೇಗೌಡರು ದೆಹಲಿಗೆ ಹೋದರೂ ತಾಯ್ನಾಡಾದ ಹಾಸನವನ್ನು ಮರೆತಿಲ್ಲ ಎಂದು ಉಪ ರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ಅವರು ಮಾಜಿ ಪ್ರಧಾನಿ ಎಚ್‌ಡಿಡಿ ಅವರನ್ನು ಹಾಡಿ ಹೋಗಳಿದರು.
ಅವರು ಮಂಗಳವಾರ ಸುತ್ತೂರಿನಲ್ಲಿ ಡಾ.ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳ 103ನೇ ಜಯಂತಿ ಮಹೋತ್ಸವ ಹಾಗೂ ಶ್ರೀ ಚನ್ನವೀರ ದೇಶಿಕೇಂದ್ರ ಗುರುಕುಲ ಉದ್ಘಾಟನಾ ಸಮಾರಂಭವನ್ನು ನೆರವೇರಿಸಿ ಮಾತನಾಡಿದರು.
ಯುವ ಜನತೆ ನಮ್ಮ ಮಾತೃ ಭೂಮಿಯನ್ನು ಪ್ರೀತಿಸಬೇಕು. ಸ್ಥಳೀಯ ಭಾಷೆಗಳು ಬೆಳೆಯಬೇಕು. ನಮ್ಮ ಮಾತೃ ಭಾಷೆ ಕಣ್ಣಿದ್ದಂತೆ. ಇತರ ಭಾಷೆ ಕನ್ನಡಕ ವಿದ್ದಂತೆ. ಕಣ್ಣು ಬಹಳ ಮುಖ್ಯವಾದುದ್ದು ಎಂದು ಉಪರಾಷ್ಟ್ರಪತಿಗಳು ಸಲಹೆ ನೀಡಿದರು.
ಸಮಾರಂಭದಲ್ಲಿ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿ ಗಳು, ಸುತ್ತೂರು ಮತ್ತು ಶ್ರೀಕ್ಷೇತ್ರ ಸಿದ್ಧಗಂಗಾದ ಸಿದ್ಧಲಿಂಗ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಸಚಿವರಾದ ಜಿ.ಟಿ.ದೇವೇಗೌಡ, ಸಾ.ರಾ.ಮಹೇಶ್, ಸಿ.ಎಸ್.ಪುಟ್ಟರಾಜು, ಡಾ.ಯತೀಂದ್ರ ಸಿದ್ದರಾಮಯ್ಯ ಮೊದಲಾದವರು ಉಪಸ್ಥಿತರಿದ್ದರು.
ಅಕ್ಕ ಪಕ್ಕದ ಸೀಟ್‌ನಲ್ಲಿ ಹಾಲಿ- ಮಾಜಿ ಸಿಎಂ
ಸಮಾರಂಭದ ವೇದಿಕೆಯಲ್ಲಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಮತ್ತು ಮಾಜಿ ಸಿಎಂ ಯಡಿಯೂರಪ್ಪ ಅವರು ಅಕ್ಕ ಪಕ್ಕದ ಸೀಟ್‌ನಲ್ಲಿ ಕುಳಿತಿದ್ದರು. ಪರಸ್ಪರ ಹಸ್ತಲಾಘವ ಮಾಡಿಕೊಂಡರು.
ಸಂತ್ರಸ್ತರ ನಿಧಿಗೆ 50 ಲಕ್ಷ ರೂ
ನೆರೆ ಸಂಕಷ್ಟಕ್ಕೆ ಒಳಗಾಗಿರುವ ಜನರ ಪುನಶ್ಚೇತನಕ್ಕಾಗಿ ಸುತ್ತೂರು ಶ್ರೀವೀರಸಿಂಹಾಸನ ಮಹಾಸಂಸ್ಥಾನ ಮಠದ ವತಿಯಿಂದ 50ಲಕ್ಷ ರೂ. ದೇಣಿಗೆಯನ್ನು ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ ನೀಡಲಾಯಿತು.
ಶ್ರೀಕ್ಷೇತ್ರದ ಜಗದ್ಗುರು ಶ್ರೀ ದೇಶೀಕೇಂದ್ರ ಮಹಾಸ್ವಾಮಿಗಳು ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಚೆಕ್ ಹಸ್ತಾಂತರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt.: ಅನರ್ಹ “ಬಿಪಿಎಲ್’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ
“ಕಾಂಗ್ರೆಸ್‌ನಲ್ಲಿ ದಲಿತ ಸಚಿವರಿಗೆ ಊಟದ ಸ್ವಾತಂತ್ರ್ಯವೂ ಇಲ್ಲ’
BJP: ಭಿನ್ನರನ್ನು ನಿಯಂತ್ರಿಸದಿದ್ದರೆ ಕಷ್ಟ: ಎಸ್.ಟಿ. ಸೋಮಶೇಖರ್
Karnataka: ಸರಕಾರ ಉತ್ತರಿಸಬೇಕಾದ ಪ್ರಶ್ನೆಗಳಿವೆ: ಬಿ.ಎಲ್. ಸಂತೋಷ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.