25 ವರ್ಷಗಳ ನಂತರ ಜೆಡಿಎಸ್‌ಗೆ ಒಲಿದ ಕೇಂದ್ರ ಮಂತ್ರಿ ಭಾಗ್ಯ
Team Udayavani, Jun 10, 2024, 6:40 AM IST
ನವದೆಹಲಿ: ನರೇಂದ್ರ ಮೋದಿ ಅವರ 3ನೇ ಅಧಿಕಾ ರಾವಧಿಯಲ್ಲಿ ಕರ್ನಾಟಕದ ಮಾಜಿ ಸಿಎಂ ಹಾಗೂ ಮಂಡ್ಯ ಸಂಸದ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಸಂಪುಟ ಸಚಿವ ಸ್ಥಾನ ದೊರೆತಿದೆ. ಈ ಮೂಲಕ 25 ವರ್ಷಗಳ ಬಳಿಕ ಜೆಡಿಎಸ್ ನಾಯಕರೊಬ್ಬರಿಗೆ ಕೇಂದ್ರ ಸಚಿವ ಸ್ಥಾನ ಒಲಿದಂತಾಗಿದೆ.
ಜೆಡಿಎಸ್ ರಾಷ್ಟ್ರಾಧ್ಯಕ್ಷ, ಸಂಸದ ಎಚ್.ಡಿ. ದೇವೆಗೌಡ ಅವರು 1996-97ರ ಅವಧಿಯಲ್ಲಿ ಪ್ರಧಾನಮಂತ್ರಿಗಳಾಗಿದ್ದರು. ಈ ಸಂದರ್ಭದಲ್ಲಿ ಕೆಲ ಕಾಲ ಗೃಹ ಖಾತೆಯನ್ನೂ ತಮ್ಮ ಬಳಿ ಇರಿಸಿಕೊಂಡು, ಕಾರ್ಯನಿರ್ವಹಿಸಿದ್ದರು. ಅದೇ ರೀತಿ ಕರ್ನಾಟಕದ ಮಾಜಿ ಸಿಎಂ ಹಾಗೂ ಜೆಡಿಎಸ್ ನಾಯಕ ಎಸ್.ಆರ್. ಬೊಮ್ಮಾಯಿ, ಸಿ.ಎಂ.ಇಬ್ರಾಹಿಂ ದೇವೇಗೌಡ ಪ್ರಧಾನಿಯಾದ ಸಂದರ್ಭದಲ್ಲಿ ಕೇಂದ್ರದಲ್ಲಿ ಸಚಿವರಾಗಿದ್ದರು. ನಂತರದ ವರ್ಷಗಳಲ್ಲಿ ಜೆಡಿಎಸ್‌ನಿಂದ ಲೋಕಸಭೆಗೆ ಆಯ್ಕೆಯಾಗಿದ್ದರೂ ಯಾರಿಗೂ ಸಚಿವ ಸ್ಥಾನ ಲಭಿಸಿರಲಿಲ್ಲ.
ಪ್ರಸಕ್ತ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿ ಮಾಡಿಕೊಂಡಿತ್ತು. 3 ಸ್ಥಾನಗಳಲ್ಲಿ ಸ್ಪರ್ಧಿಸಿದ್ದ ಜೆಡಿಎಸ್ 2ರಲ್ಲಿ ಜಯಸಾಧಿಸಿದೆ. ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದ ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ಮೋದಿ ಸಂಪುಟದಲ್ಲಿ ಸ್ಥಾನ ಲಭಿಸಿದೆ. ಜೆಡಿಎಸ್ ಎನ್‌ಡಿಎ ಒಕ್ಕೂಟದ ಪ್ರಮುಖ ಮಿತ್ರಪಕ್ಷವಾಗಿದ್ದು, ಸಚಿವ ಸ್ಥಾನ ದೊರೆಯುವ ಮೂಲಕ ಬರೊಬ್ಬರಿ 25 ವರ್ಷಗಳ ನಂತರ ಜೆಡಿಎಸ್‌ಗೆ ಈ ಭಾಗ್ಯ ಒಲಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
RSS: ಮೋಹನ್ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್ ಪತ್ರಿಕೆ ಆಕ್ಷೇಪ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.