ಯಾರೋ ಸೋತವರು ದೆಹಲಿಗೆ ಹೋದ ತಕ್ಷಣ ಮುಖ್ಯಮಂತ್ರಿ ಬದಲಾವಣೆ ಮಾಡಲ್ಲ: ರೇಣುಕಾಚಾರ್ಯ
Team Udayavani, May 13, 2021, 2:53 PM IST
ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ ಮಾಡುವುದು ಅಪಪ್ರಚಾರ, ಹಸಿ ಸುಳ್ಳು ಮತ್ತು ಊಹಾಪೋಹ. ಬಿ.ಎಸ್.ಯಡಿಯೂರಪ್ಪ ಅವರೇ ನಮ್ಮ ಪ್ರಶ್ನಾತೀತ ನಾಯಕ. 2023ರ ಚುನಾವಣೆಗೂ ಅವರ ಮಾರ್ಗದರ್ಶನದಲ್ಲೇ ಸಂಘಟನೆ ಮಾಡುತ್ತೇವೆ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಯಾರೋ ಒಬ್ಬರು ಸೋತವರು ದೆಹಲಿಗೆ ಹೋಗಿ ಲಾಬಿ ಮಾಡಿದ ತಕ್ಷಣ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಮಾಡಲ್ಲ. ಅವರನ್ನು ಮಂತ್ರಿ ಮಾಡಿದ್ದಕ್ಕೆ ಇದೇ ಕೊಡುಗೆ. ಅವರ ಕ್ಷೇತ್ರಕ್ಕೂ ಇಲ್ಲ ಜನಪರ ಕೆಲಸ ಮಾಡಲ್ಲ. ಕೋವಿಡ್ ಬಂದಾಗ ಒಬ್ಬ ಮಂತ್ರಿಯಾಗಿ ಜನರ ಪರ ಕೆಲಸ ಮಾಡುವುದು ಬಿಟ್ಟು ದೆಹಲಿಯಲ್ಲಿ ಲಾಬಿ ಮಾಡುತ್ತಿಯಲ್ಲೊ ಪುಣ್ಯಾತ್ಮ ಎಂದು ಸಚಿವ ಸಿ.ಪಿ. ಯೋಗೇಶ್ವರ್ ಗೆ ಪರೋಕ್ಷವಾಗಿ ಟಾಂಗ್ ನೀಡಿದರು.
ಇದನ್ನೂ ಓದಿ:ಭಾರತ್ ಬಯೋಟೆಕ್ ನ 50 ಉದ್ಯೋಗಿಗಳಿಗೆ ಕೋವಿಡ್!; ಜಾಲತಾಣದಲ್ಲಿ ಪರ, ವಿರೋಧ ಚರ್ಚೆ
ಜನರು ಸಾವು ಬದುಕಿನ ನಡುವೆ ಹೋರಾಡುವಾಗ ನಾವು ರಾಜಕಾರಣ ಮಾಡಬಾರದು. ಈಗಾಗಲೇ ನಮ್ಮ ರಾಷ್ಟ್ರೀಯ ನಾಯಕರು ಮತ್ತು ರಾಜ್ಯಾಧ್ಯಕ್ಷರು ಅನೇಕಬಾರಿ ಸ್ಪಷ್ಟಪಡಿಸಿದ್ದಾರೆ. ಈ ಅವಧಿ ಸಂಪೂರ್ಣವಾಗಿ ಬಿ.ಎಸ್. ಯಡಿಯೂರಪ್ಪ ಅವರೇ ಮುಖ್ಯಮಂತ್ರಿ ಆಗಿರುತ್ತಾರೆ ಎಂದು ರೇಣುಕಾಚಾರ್ಯ ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.