ಕೆಎಸ್ ಡಿಎಲ್ ಅಧ್ಯಕ್ಷ ಸ್ಥಾನಕ್ಕೆ ಮಾಡಾಳ್ ವಿರೂಪಾಕ್ಷಪ್ಪ ರಾಜೀನಾಮೆ
Team Udayavani, Mar 3, 2023, 1:06 PM IST
ಬೆಂಗಳೂರು: ಪುತ್ರ ಮಾಡಾಳ್ ಪ್ರಶಾಂತ್ ಮನೆಗೆ ಲೋಕಾಯುಕ್ತ ದಾಳಿಯಾಗಿ ಬಂಧಿಸಿರುವ ಹಿನ್ನೆಲೆಯಲ್ಲಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರು ಕೆಎಸ್ ಡಿಎಲ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಈ ಬಗ್ಗೆ ಮುಖ್ಯಮಂತ್ರಿಗಳಿಗೆ ರಾಜೀನಾಮೆ ಪತ್ರ ಬರೆದಿರುವ ಅವರು, ಲೋಕಾಯುಕ್ತ ದಾಳಿಗೂ ನನಗೂ ಯಾವುದೇ ಸಂಬಂಧವಿಲ್ಲ. ಇದು ನನ್ನ ಹಾಗೂ ಕುಟುಂಬದ ವಿರುದ್ಧ ಮಾಡಿದ ಷಡ್ಯಂತ್ರವಾಗಿದೆ. ಅದಾಗ್ಯೂ ನನ್ನ ಮೇಲೆ ಆಪಾದನೆ ಬಂದಿರುವ ಕಾರಣದಿಂದ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುತ್ತಿದ್ದೇನೆ ಎಂದಿದ್ದಾರೆ.
ದಾವಣಗೆರೆ ಜಿಲ್ಲೆಯ ಚನ್ನಗಿರಿಯ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರು ಮೈಸೂರು ಸ್ಯಾಂಡಲ್ ಸೋಪ್ ತಯಾರಿಸುವ ಸರ್ಕಾರಿ ಸ್ವಾಮ್ಯದ ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್ಡಿಎಲ್) ಅಧ್ಯಕ್ಷರಾಗಿದ್ದರು. ಅವರ ಮಗ ಪ್ರಶಾಂತ್ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ (ಬಿಡಬ್ಲ್ಯೂಎಸ್ಎಸ್ ಬಿ) ಮುಖ್ಯ ಅಕೌಂಟೆಂಟ್ ಆಗಿದ್ದಾರೆ.
ಇದನ್ನೂ ಓದಿ:ಇಂದೋರ್ ಟೆಸ್ಟ್ ಗೆಲುವಿನೊಂದಿಗೆ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ತಲುಪಿದ ಆಸೀಸ್
ಗುತ್ತಿಗೆದಾರನೊಬ್ಬನ ಬಳಿ 80 ಲಕ್ಷ ರೂ.ಗೂ ಹೆಚ್ಚು ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಕ್ರೆಸೆಂಟ್ ರಸ್ತೆಯಲ್ಲಿರುವ ಕಚೇರಿಯಲ್ಲಿ ಮುಂಗಡವಾಗಿ 40 ಲಕ್ಷ ರೂ. ಹಣ ಪಡೆದುಕೊಳ್ಳುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಬಿದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.