ಮಡಿಕೇರಿ: ಗುಡ್ಡ ಕುಸಿತ; ನಾಲ್ವರು ಸಮಾಧಿ,ರಕ್ಷಣೆಗೆ ಹೆಲಿಕ್ಯಾಪ್ಟರ್
Team Udayavani, Aug 16, 2018, 11:43 AM IST
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕುಂಭ ದ್ರೋಣ ಮಳೆ ಸುರಿಯುತ್ತಿದ್ದು ತಗ್ಗು ಪ್ರದೇಶಗಳು ಸಂಪೂರ್ಣ ಜಲಾವೃತವಾಗಿದ್ದು, ಜನರು ಆತಂಕದಲ್ಲಿ ಕಾಲ ಕಳೆಯುವ ಸ್ಥಿತಿ ನಿರ್ಮಾಣವಾಗಿದೆ. ಬುಧವಾರ ಹೆಮ್ಮೆತ್ತಾಳು ಗ್ರಾಮದಲ್ಲಿ ಗುಡ್ಡ ಕುಸಿದು ಒಂದೇ ಕುಟುಂಬದ ನಾಲ್ವರು ಮನೆ ಸಮೇತ ಕೊಚ್ಚಿ ಹೋಗಿರುವ ಬಗ್ಗೆ ವರದಿಯಾಗಿದೆ.
ಗುಡ್ಡ ಕುಸಿತವಾಗಿ ಅಪಾಯಕ್ಕೆ ಸಿಲುಕಿದ್ದ 20 ಜನರನ್ನು ರಕ್ಷಿಸಿರುವ ಬಗ್ಗೆ ವರಿದಿಯಾಗಿದೆ. ಹೆಮ್ಮೆತ್ತಾಳು , ಮೇಘತ್ತಾಳು ಗ್ರಾಮದಲ್ಲಿ ಭಾರೀ ಭೂಕುಸಿತ ಸಂಭವಿಸುತ್ತಿರುವ ಬಗ್ಗೆ ವರದಿಯಾಗಿದೆ.
ಬದಿಗೆರೆಯಲ್ಲಿ 200 ಮಂದಿ ಆತಂಕದಲ್ಲಿ
ಮಡಿಕೇರಿಯ ಬದಿಗೆರೆಯಲ್ಲಿ ಗ್ರಾಮ ಜಲಾವೃತವಾಗಿರುವ ಹಿನ್ನಲೆಯಲ್ಲಿ 200 ಕ್ಕೂ ಹೆಚ್ಚು ಜನರು ನಿರಾಶ್ರಿತರಾಗಿ ಗುಡ್ಡ ಏರಿ ಕುಳಿತಿದ್ದಾರೆ. ಗುಡ್ಡವೂ ಕುಸಿಯುತ್ತಿದ್ದು ಜನರು ರಕ್ಷಣೆಗಾಗಿ ಮೊರೆ ಇಟ್ಟಿದ್ದಾರೆ. ಜಿಲ್ಲಾಡಳಿತ ಹೆಲಿಕ್ಯಾಪ್ಟರ್ ಮೂಲಕ ರಕ್ಷಣಾ ಕಾರ್ಯ ನಡೆಸಲು ಮುಂದಾಗಿರುವ ಬಗ್ಗೆ ವರದಿಯಾಗಿದೆ.
ಸೇನಾ ಹೆಲಿಕ್ಯಾಪ್ಟರ್ಗಳನ್ನು ರಕ್ಷಣಾ ಕಾರ್ಯಕ್ಕಾಗಿ ಕೊಡಗಿಗೆ ತರಿಸಿಕೊಳ್ಳಲಾಗುತ್ತಿರುವ ಬಗ್ಗೆ ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ
Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?
Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್ ಭೇಟಿ ಸಾಧ್ಯತೆ
DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ
DK Shivakumar: ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Pakistan: ಇಮ್ರಾನ್ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ
Madikeri: ಲಾರಿ ಡಿಕ್ಕಿಯಾಗಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿ ಸಾವು
Mumbai Cricket: ಸಚಿನ್ ತೆಂಡೂಲ್ಕರ್ ಸಲಹೆಯನ್ನೂ ನಿರ್ಲಕ್ಷಿಸಿದರಾ ಪೃಥ್ವಿ ಶಾ..
Teacher: ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.