Madikeri: ಜು.1 ರಿಂದ ಭಾರಿ ವಾಹನಗಳ ಸಂಚಾರ ನಿಷೇಧ

Team Udayavani, Jun 30, 2024, 2:17 PM IST

7-kodagu

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆ ಹೆಚ್ಚಾಗುವ ದಿನಗಳಲ್ಲಿ ರಸ್ತೆಯ ಪರಿಸ್ಥಿತಿ ಹದಗೆಡುತ್ತಿದೆಯಲ್ಲದೆ ಅಧಿಕ ಭಾರ ತುಂಬಿದ ಸರಕು ಸಾಗಾಣೆ ವಾಹನಗಳು ದಿನನಿತ್ಯ ಸಂಚರಿಸುವುದರಿಂದ ರಸ್ತೆಬದಿಗಳ ಮಣ್ಣು ಕುಸಿತದಿಂದಾಗಿ ರಸ್ತೆಯ ಮೇಲೆ ಮಣ್ಣು ಬಿದ್ದು, ರಸ್ತೆ ಸಂಚಾರಕ್ಕೆ ತೊಂದರೆಯಾಗಿ ಸಾಕಷ್ಟು ಅಪಘಾತಗಳಿಗೆ ಕಾರಣವಾಗುತ್ತಿರುತ್ತದೆ.

ವಾಹನದ ನೋಂದಣಿ ತೂಕ 18,500 ಕೆ.ಜಿ.ಗಿಂತ ಹೆಚ್ಚಿನ ತೂಕದ ಸರಕು ಸಾಗಾಣಿಕೆ ವಾಹನ, ಮಲ್ಟಿ ಆಕ್ಸಿಲ್ ಟ್ರಕ್‍ಗಳ ಸಂಚಾರ ಮತ್ತು ಭಾರೀ ವಾಹನಗಳಾದ ಬುಲೆಟ್ ಟ್ಯಾಂಕರ್ಸ್, ಶಿಪ್ ಕಾರ್ಗೋ ಕಂಟೈನರ್ಸ್, ಲಾಂಗ್ ಚಾಸಿಸ್(ಮಲ್ಟಿ ಆಕ್ಸಿಲ್), ಆರ್ಟಿಕ್ಯೂಲೇಟೆಡ್ ವಾಹನಗಳು ಮತ್ತು ಮರಳು ಸಾಗಾಣಿಕೆ, ಮರದ ದಿಮ್ಮಿಗಳನ್ನು ಸಾಗಿಸುವ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ಕೊಡಗು ಜಿಲ್ಲೆಯಲ್ಲಿ ಮಳೆಗಾಲ ಮುಗಿಯುವವರೆಗೆ ನಿರ್ಬಂಧಿಸಲಾಗಿದೆ.

ಕರ್ನಾಟಕ ಪೊಲೀಸ್ ಕಾಯ್ದೆ 1961 ರ ವಿಧಿ 11 ಡಿಸಾಸ್ಟರ್ ಮ್ಯಾನೇಜ್‍ಮೆಂಟ್ ಆಕ್ಟ್ 2005ರ ಕಲಂ 33, ಮೋಟಾರು ವಾಹನಗಳ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮಗಳು 1989 ರ (ತಿದ್ದುಪಡಿ ನಿಯಮಾವಳಿ 1990) ನಿಯಮ 221-ಎ(5) ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144 ರಡಿ ದತ್ತವಾದ ಅಧಿಕಾರದಂತೆ ಸ್ಥಳೀಯರು ವಾಹನ ಸವಾರರ ಹಾಗೂ ಸಾರ್ವಜನಿಕರ ಆಸ್ತಿಪಾಸ್ತಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ಕೊಡಗು ಜಿಲ್ಲೆಯಾದ್ಯಂತ ಜುಲೈ 1 ರಿಂದ ಜುಲೈ 30 ರವರೆಗೆ ಸಂಚಾರ ವ್ಯವಸ್ಥೆಯನ್ನು ನಿರ್ವಹಿಸಲು ಜಿಲ್ಲಾ ದಂಡಾಧಿಕಾರಿ ಮತ್ತು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರಾದ ವೆಂಕಟ್ ರಾಜಾ ಆದೇಶಿಸಿದ್ದಾರೆ.

ನಿರ್ಬಂಧಿತ ವಾಹನಗಳು: ಎಲ್ಲಾ ರೀತಿಯ ಮರದ ದಿಮ್ಮಿ ಮತ್ತು ಮರಳು ಸಾಗಾಣಿಕೆ ವಾಹನಗಳು, ವಾಹನದ ನೋಂದಣಿ ತೂಕ 18,500 ಕೆ.ಜಿ.ಗಿಂತ ಹೆಚ್ಚಿನ ಸರಕು ಸಾಗಾಣೆ ಮಾಡುವ ಸರಕು ಸಾಗಾಣಿಕೆ ವಾಹನಗಳು, ಭಾರೀ ವಾಹನಗಳಾದ ಬುಲೆಟ್ ಟ್ಯಾಂಕರ್ಸ್, ಶಿಪ್ ಕಾರ್ಗೋ ಕಂಟೈನರ್ಸ್, ಲಾಂಗ್ ಚಾಸಿಸ್ (ಮಲ್ಟಿ ಆಕ್ಸಿಲ್) ವಾಹನಗಳು/ ಆರ್ಟಿಕ್ಯೂಲೇಟೆಡ್ ವಾಹನಗಳು.

ನಿರ್ಬಂಧದಿಂದ ವಿನಾಯಿತಿ ನೀಡಿದ ವಾಹನಗಳು: ಅಡುಗೆ ಅನಿಲ ಮತ್ತು ಇಂಧನ ಪೂರೈಕೆ ವಾಹನಗಳು, ಹಾಲು ಪೂರೈಕೆ ವಾಹನಗಳು, ಸರ್ಕಾರಿ ಕೆಲಸದ ನಿಮಿತ್ತ ಉಪಯೋಗಿಸಲ್ಪಡುವ ವಾಹನಗಳು, ಶಾಲಾ ಕಾಲೇಜು ಮತ್ತು ಸಾರ್ವಜನಿಕ ಪ್ರಯಾಣಿಕರ ವಾಹನಗಳು(ಮಲ್ಟಿ ಆಕ್ಸಿಲ್ ಬಸ್‍ಗಳು ಸೇರಿದಂತೆ).

ಈ ಬಗ್ಗೆ ಮೋಟಾರು ವಾಹನ ಕಾಯ್ದೆ 1988 ರ ಕಲಂ 116 ರಂದು ಅವಶ್ಯವಿರುವ ಸಂಜ್ಞೆ/ ಸೂಚನಾ ಫಲಕಗಳನ್ನು ಅಳವಡಿಸಲು ಕೊಡಗು ಜಿಲ್ಲೆಯ ಮಡಿಕೇರಿಯ  ಜಿಲ್ಲಾ ಪೊಲೀಸ್ ಅಧೀಕ್ಷಕರು ಅನುಮತಿಸಿದ್ದಾರೆ.

ಕೊಡಗು ಜಿಲ್ಲೆಯ ಮುಖಾಂತರ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 275ರ ಜಿಲ್ಲೆಯ ಗಡಿಭಾಗಗಳಾದ ಕುಶಾಲನಗರ ಮತ್ತು ಸಂಪಾಜೆಯಲ್ಲಿ ವ್ಯವಸ್ಥಿತ ಚೆಕ್‍ಪೋಸ್ಟ್ ನಿರ್ಮಿಸಿ ದಿನದ 24 ಗಂಟೆಯೂ ನಿಗಾ ವಹಿಸಲು ಸಿಬ್ಬಂದಿಗಳನ್ನು ನಿಯೋಜಿಸಲು, ಮೊಬೈಲ್ ಪ್ಯಾಟ್ರೋಲಿಂಗ್ ನಡೆಸಲು ಹಾಗೂ ಈ ಆದೇಶ ಉಲ್ಲಂಘನೆಯಾಗದಂತೆ ಮತ್ತು ಆದೇಶ ಉಲ್ಲಂಘಿಸಿದವರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಪೊಲೀಸ್ ಹಾಗೂ ಸಾರಿಗೆ ಇಲಾಖೆಗೆ ಸೂಚಿಸಿದೆ ಎಂದು ಜಿಲ್ಲಾ ದಂಡಾಧಿಕಾರಿ ಹಾಗೂ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Kiccha Sudeep: ಶೀಘ್ರದಲ್ಲಿ ʼMaxʼ ಮೆಗಾ ಅಪ್ಡೇಟ್..‌ ಆ.15ಕ್ಕೆ ರಿಲೀಸ್‌ ಆಗೋದು ಪಕ್ಕಾ?

Kiccha Sudeep: ಶೀಘ್ರದಲ್ಲಿ ʼMaxʼ ಮೆಗಾ ಅಪ್ಡೇಟ್..‌ ಆ.15ಕ್ಕೆ ರಿಲೀಸ್‌ ಆಗೋದು ಪಕ್ಕಾ?

Siruguppa: ಐತಿಹಾಸಿಕ ಬೂದಿ ದಿಬ್ಬ ಗುಡ್ಡಕ್ಕೆ ಅಧಿಕಾರಿಗಳ ಭೇಟಿ… ಪರಿಶೀಲನೆ

Siruguppa: ಐತಿಹಾಸಿಕ ಬೂದಿ ದಿಬ್ಬ ಗುಡ್ಡಕ್ಕೆ ಅಧಿಕಾರಿಗಳ ಭೇಟಿ… ಪರಿಶೀಲನೆ

krishne-bhyre-gowda

ಸರಕಾರಿ ಕಾರ್ಯಕ್ರಮಕ್ಕೆ ಬಂದು ಸ್ವಾಮೀಜಿ ರಾಜಕೀಯ ಮಾತಾಡಿದರೆ ಹೇಗೆ?: ಕೃಷ್ಣಭೈರೇಗೌಡ ಅಸಮಾಧಾನ

Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!

Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!

Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?

Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?

Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್…  25 ಲಕ್ಷಕ್ಕೆ ಡೀಲ್

Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್

Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು

Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siruguppa: ಐತಿಹಾಸಿಕ ಬೂದಿ ದಿಬ್ಬ ಗುಡ್ಡಕ್ಕೆ ಅಧಿಕಾರಿಗಳ ಭೇಟಿ… ಪರಿಶೀಲನೆ

Siruguppa: ಐತಿಹಾಸಿಕ ಬೂದಿ ದಿಬ್ಬ ಗುಡ್ಡಕ್ಕೆ ಅಧಿಕಾರಿಗಳ ಭೇಟಿ… ಪರಿಶೀಲನೆ

krishne-bhyre-gowda

ಸರಕಾರಿ ಕಾರ್ಯಕ್ರಮಕ್ಕೆ ಬಂದು ಸ್ವಾಮೀಜಿ ರಾಜಕೀಯ ಮಾತಾಡಿದರೆ ಹೇಗೆ?: ಕೃಷ್ಣಭೈರೇಗೌಡ ಅಸಮಾಧಾನ

Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು

Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು

Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ

Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ

Government ಹೊಸ ಅಪರಾಧ ಸಂಹಿತೆಗೆ ರಾಜ್ಯದಲ್ಲಿ ತಿದ್ದುಪಡಿ

Government ಹೊಸ ಅಪರಾಧ ಸಂಹಿತೆಗೆ ರಾಜ್ಯದಲ್ಲಿ ತಿದ್ದುಪಡಿ

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

Kiccha Sudeep: ಶೀಘ್ರದಲ್ಲಿ ʼMaxʼ ಮೆಗಾ ಅಪ್ಡೇಟ್..‌ ಆ.15ಕ್ಕೆ ರಿಲೀಸ್‌ ಆಗೋದು ಪಕ್ಕಾ?

Kiccha Sudeep: ಶೀಘ್ರದಲ್ಲಿ ʼMaxʼ ಮೆಗಾ ಅಪ್ಡೇಟ್..‌ ಆ.15ಕ್ಕೆ ರಿಲೀಸ್‌ ಆಗೋದು ಪಕ್ಕಾ?

Siruguppa: ಐತಿಹಾಸಿಕ ಬೂದಿ ದಿಬ್ಬ ಗುಡ್ಡಕ್ಕೆ ಅಧಿಕಾರಿಗಳ ಭೇಟಿ… ಪರಿಶೀಲನೆ

Siruguppa: ಐತಿಹಾಸಿಕ ಬೂದಿ ದಿಬ್ಬ ಗುಡ್ಡಕ್ಕೆ ಅಧಿಕಾರಿಗಳ ಭೇಟಿ… ಪರಿಶೀಲನೆ

krishne-bhyre-gowda

ಸರಕಾರಿ ಕಾರ್ಯಕ್ರಮಕ್ಕೆ ಬಂದು ಸ್ವಾಮೀಜಿ ರಾಜಕೀಯ ಮಾತಾಡಿದರೆ ಹೇಗೆ?: ಕೃಷ್ಣಭೈರೇಗೌಡ ಅಸಮಾಧಾನ

Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!

Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!

12

Chowkidar Movie: ಚೌಕಿದಾರ್‌ಗೆ ಮುಹೂರ್ತ ಇಟ್ರಾ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.