ಮಹಾ ಗಡಿ ವಿಚಾರವನ್ನು ಕೇಂದ್ರ ಗೃಹ ಸಚಿವರ ಗಮನಕ್ಕೆ ತರಲಾಗುವುದು: ಸಿಎಂ ಬೊಮ್ಮಾಯಿ
Team Udayavani, Mar 16, 2023, 11:46 AM IST
ಬೆಂಗಳೂರು: ಗಡಿ ಕನ್ನಡಿಗರಿಗೆ ಆರೋಗ್ಯ ವಿಮೆ ಯೋಜನೆಯ ಮಹಾರಾಷ್ಟ್ರ ಸಚಿವ ಸಂಪುಟದ ನಿರ್ಣಯವನ್ನು ತೀವ್ರವಾಗಿ ಖಂಡಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಕರ್ನಾಟಕ ಗಡಿ ಭಾಗದ ಜನರಿಗೆ ಆರೋಗ್ಯ ಯೋಜನೆ ವಿಮೆ ಯೋಜನೆಯನ್ನು ಮಹಾರಾಷ್ಟ್ರದ ಸಂಪುಟ ನಿರ್ಣಯ ಘೋಷಿಸಿರುವುದು ಅಕ್ಷಮ್ಯ ಅಪರಾಧ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಮಾತನಾಡಿದಾಗ ಸುಪ್ರೀಂ ಕೋರ್ಟ್ ಆದೇಶ ಬರುವವರೆಗೆ ಕಾಯಬೇಕು. ಯಾವುದೇ ಪ್ರಚೋದನೆಯಾಗಬಾರದೆಂದು ಒಪ್ಪಲಾಗಿತ್ತು. ಈಗ ಅದರ ಉಲ್ಲಂಘನೆಯಾಗಿದೆ. ಕೂಡಲೇ ಆಜ್ಞೆಯನ್ನು ಹಿಂದೆಗೆದುಕೊಳ್ಳಬೇಕು. ಈ ವಿಚಾರವನ್ನು ಗೃಹ ಸಚಿವರ ಗಮನಕ್ಕೂ ತರಲಾಗುವುದು ಎಂದರು.
ಈ ರೀತಿಯ ಯೋಜನೆಗಳನ್ನು ನಾವೂ ಕೂಡ ಪ್ರಕಟಿಸಬಹುದು. ಹಲವಾರು ತಾಲ್ಲೂಕುಗಳು, ಗ್ರಾಮ ಪಂಚಾಯಿತಿ ಗಳು ಮಹಾರಾಷ್ಟ್ರದಲ್ಲಿ ನಮಗೆ ನ್ಯಾಯ ಸಿಗುತ್ತಿಲ್ಲ, ಕರ್ನಾಟಕಕ್ಕೆ ಸೇರಬೇಕು ಎಂದು ಈಗಾಗಲೇ ನಿರ್ಣಯ ಮಾಡಿದ್ದಾರೆ. ಇಂಥ ಪರಿಸ್ಥಿತಿಯಲ್ಲಿ ಇದ್ದಾಗ ಮಹಾರಾಷ್ಟ್ರದ ಸರ್ಕಾರ ಬಹಳ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು ಎಂದರು.
ಇದನ್ನೂ ಓದಿ:ನಕಲಿ ವೈದ್ಯನಿಂದ ಸರ್ಜರಿ…ಕೊನೆಯುಸಿರೆಳೆದ ಎರಡೂವರೆ ವರ್ಷದ ಮಗು; FIR ದಾಖಲು
ಕೆ.ಪಿ.ಟಿ.ಸಿ.ಎಲ್ ನೌಕರರು ವೇತನ ಪರಿಷ್ಕರಣೆಗೆ ಬೇಡಿಕೆ ಇಟ್ಟಿದ್ದರು. ನಮ್ಮ ಮಂತ್ರಿಗಳು ಸುದೀರ್ಘವಾಗಿ ಚರ್ಚಿಸಿ ಶೇ 20 ರಷ್ಟು ವೇತನ ಪರಿಷ್ಕರಣೆಗೆ ಒಪ್ಪಿದ್ದು ಇಂದು ಆದೇಶ ಹೊರಡಿಸಲಾಗುವುದು ಎಂದರು.
ಸಾರಿಗೆ ಇಲಾಖೆ ನೌಕರರಿಗೆ ಶೇ 15 ರಷ್ಟು ವೇತನ ಪರಿಷ್ಕರಣೆ ಮಾಡಲು ತೀರ್ಮಾನ ಮಾಡಲಾಗಿದೆ. ಈ ಎರಡೂ ಆಜ್ಞೆ ಇಂದು ಹೊರಡಿಸಲಾಗುವುದು ಎಂದರು.
ಕಾಡ್ಗಿಚ್ಚು ನಿಯಂತ್ರಣಕ್ಕೆ ಕ್ರಮ: ಬೇಸಿಗೆ ಕಾಲದಲ್ಲಿ ಅಲ್ಲಲ್ಲಿ ಕಾಡ್ಗಿಚ್ಚು ಆಗುತ್ತಿದೆ. ಸಾಧ್ಯತೆಯಿರುವೆಡೆಯಲ್ಲಿ ಪೂರ್ವಭಾವಿ ತಾಂತ್ರಿಕ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಲಾಗಿದೆ. ಪ್ರಸ್ತುತ ಕಾಡ್ಗಿಚ್ಚನ್ನು ನಂದಿಸುವಲ್ಲಿ ಅರಣ್ಯಾಧಿಕಾರಿಗಳು ಯಶಸ್ವಿಯಾಗಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.