ಕರ್ನಾಟಕದ ವಿರುದ್ಧ ಗೋವಾ ನಿರ್ಣಯ?
Team Udayavani, Jan 30, 2018, 1:15 PM IST
ಪಣಜಿ: ಮಹದಾಯಿ ವಿಚಾರದಲ್ಲಿ ಕರ್ನಾಟಕದ ವಿರುದ್ಧ ಕೆಂಡ ಕಾರುತ್ತಲೇ ಇರುವ ಗೋವಾ ಸರ್ಕಾರವು ಇದೀಗ ರಾಜ್ಯದ ವಿರುದ್ಧ ನಿರ್ಣಯ ಅಂಗೀಕರಿಸಲು ಮುಂದಾಗಿದೆ. ಕರ್ನಾಟಕವು ಮಹದಾಯಿ ನೀರನ್ನು ಮಲಪ್ರಭಾ ಜಲಾನಯನ ಪ್ರದೇಶ ದತ್ತ ತಿರುಗಿಸುತ್ತಿದ್ದು, ಬಜೆಟ್ ಅಧಿವೇಶ ನದಲ್ಲಿ ಕರ್ನಾಟಕ ರಾಜ್ಯದ ವಿರುದ್ಧ ನಿರ್ಣಯ ಅಂಗೀಕರಿಸಲು ಚಿಂತನೆ ನಡೆಸ ಲಾಗಿದೆ ಎಂದು ಗೋವಾ ವಿಧಾನಸಭೆ ಉಪ ಸಭಾಪತಿ ಮೈಕಲ್ ಲೋಬೊ ಹೇಳಿದ್ದಾರೆ.
ಅಷ್ಟೇ ಅಲ್ಲ, ಕರ್ನಾಟಕ ಕೋರ್ಟ್ ಆದೇಶ ಉಲ್ಲಂಘಿಸಿ ಮಹದಾಯಿ ನದಿ ನೀರನ್ನು ತಿರುಗಿಸಿಕೊಂಡು ಕಾಮಗಾರಿ ಕೈಗೆತ್ತಿಕೊಂಡಿದೆ. ಇದರ ವಿರುದ್ಧ ಪ್ರತ್ಯೇಕ ರಿಟ್ ಅರ್ಜಿ ಸಲ್ಲಿಸಲಾಗುವುದು ಎಂದೂ ಅವರು ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕವು ಕಳಸಾ ಬಂಡೂರಿ ನಾಲೆ ನಿರ್ಮಾಣಗೊಳಿಸಲು ನಿಯಮಗಳನ್ನು ಉಲ್ಲಂಘನೆ ಮಾಡಿದೆ. ನಾಲೆಯ ನಿರ್ಮಾಣ ಕಾರ್ಯವನ್ನು ಕರ್ನಾಟಕವು ಶೇ.90ರಷ್ಟು ಪೂರ್ಣಗೊಳಿಸಿದ್ದು, ಶೇ.10ರಷ್ಟು ಮಾತ್ರ ಕಾಮಗಾರಿ ಬಾಕಿ ಉಳಿದಿದೆ. ಗೋವಾದ ಹಿಂದಿನ ಜಲಸಂಪನ್ಮೂಲ ಸಚಿವರು ಹಾಗೂ ಅಧಿಕಾರಿಗಳು ಮಹದಾಯಿ ವಿಷಯವನ್ನು ಅಲಕ್ಷಿಸಿದ್ದರು ಎಂದೂ ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
Minimum Temperature: ಬೆಂಗಳೂರಿನಲ್ಲಿ ಶೀಘ್ರ 11 ಡಿಗ್ರಿ ತಾಪ?: 12 ವರ್ಷದಲ್ಲೇ ದಾಖಲೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.