2020 ಮತ್ತು 2021 ಸಾಲಿನ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರಕಟ

2008 ರಲ್ಲಿ ಇವರಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ. 

Team Udayavani, Sep 29, 2021, 4:22 PM IST

2020 ಮತ್ತು 2021 ಸಾಲಿನ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರಕಟ

ಬೆಂಗಳೂರು: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವನ್ನಾಗಿ ರಾಜ್ಯಾದ್ಯಂತ ಅರ್ಥಪೂರ್ಣವಾಗಿ ಆಚರಿಸಲು  ಗಾಂಧೀ ತತ್ವಾದರ್ಶಗಳನ್ನು ಆಧರಿಸಿಕೊಂಡು ಸಮಾಜದಲ್ಲಿ ಗಣನೀಯ ಸೇವೆ ಮಾಡಿದ ಗಣ್ಯರನ್ನು ಗುರುತಿಸಿ ಗೌರವಿಸಲು ಕರ್ನಾಟಕ ಸರ್ಕಾರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ನೀಡುವ “ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ” 2020 ಮತ್ತು 2021 ನೇ ಸಾಲಿಗೆ ಪ್ರಕಟಿಸಿದೆ.

ಕೋವಿಡ್- 19ರ ಹಿನ್ನಲೆಯಲ್ಲಿ ಕಳೆದ ವರ್ಷದ ಪ್ರಶಸ್ತಿಯನ್ನು ಸರ್ಕಾರ ಪ್ರಕಟಿಸಿರಲಿಲ್ಲ, ಈ ವರ್ಷ ಕೋವಿಡ್ ಪ್ರಕರಣ ಕಡಿಮೆಯಾಗುತ್ತಾ ಬಂದಿರುವ ಹಿನ್ನೆಲೆಯಲ್ಲಿ, ಸದರಿ ಪ್ರಶಸ್ತಿಗಳನ್ನು ಪ್ರದಾನ ಮಾಡಲು ಇಚ್ಚಿಸಿದ್ದು, ಪ್ರಶಸ್ತಿಗೆ ಅರ್ಹರನ್ನು ಆಯ್ಕೆ ಮಾಡಲು ಕರ್ನಾಟಕ ಉಚ್ಛ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಶ್ರೀ ಅಶೋಕ್ ಬಂಗಾರೆಪ್ಪ್ಪಾ ಹಿಂಚಿಗೇರಿ ಇವರ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿಯನ್ನು ರಚಿಸಲಾಗಿತ್ತು. ಆಯ್ಕೆ ಸಮಿತಿಯು 2020 ರ ಸಾಲಿಗೆ ಬಾಗಲಕೋಟೆ ಜಿಲ್ಲೆಯ ಸ್ವಾತಂತ್ರ್ಯ ಹೋರಾಟಗಾರರಾದ “ಶ್ರೀಮತಿ ಮೀರಾಬಾಯಿ ಕೊಪ್ಪಿಕರ್” ಮತ್ತು 2021 ನೇ ಸಾಲಿಗೆ  “ಶ್ರೀ ಸಿದ್ಧಗಂಗಾ ಶಿಕ್ಷಣ ಸಂಸ್ಥೆ ಹಾಗೂ ಶ್ರೀ ಸಿದ್ಧಗಂಗಾ ಮಠ”ವನ್ನು ಪ್ರಶಸ್ತಿಗೆ ಆಯ್ಕೆಮಾಡಿರುತ್ತದೆ.

ಇದನ್ನೂ ಓದಿ:ದೇವಸ್ಥಾನಕ್ಕೆ ಶ್ರೀಕೃಷ್ಣನ ವರ್ಣಚಿತ್ರ ಉಡುಗೊರೆ | ಮುಸ್ಲಿಂ ಯುವತಿಯ ಕನಸು ನನಸು

ಅಕ್ಟೋಬರ್ 2 ರಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿಯಂದು ಬೆಂಗಳೂರಿನ ಗಾಂಧಿಭವನದಲ್ಲಿ ಹಮ್ಮಿಕೊಳ್ಳುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪುರಸ್ಕೃತರಿಗೆ ತಲಾ ಐದು ಲಕ್ಷ ರೂ. ಹಾಗೂ ಸ್ಮರಣಿಕೆಯನ್ನು ನೀಡಿ ಗೌರವಿಸಲಾಗುವುದು.

ಶ್ರೀ ಸಿದ್ದಗಂಗಾ ಶಿಕ್ಷಣ ಸಂಸ್ಥೆ ಹಾಗೂ ಶ್ರೀ ಸಿದ್ದಗಂಗಾ ಮಠ:

“ನಡೆದಾಡುವ ದೇವರು” ಎಂದೇ ಖ್ಯಾತರಾದ ಪರಮಪೂಜ್ಯ ಡಾ: ಶಿವಕುಮಾರ ಸ್ವಾಮೀಜಿಯವರ ಮಹದಾಶಯದಂತೆ ಸತತವಾಗಿ 80 ವರ್ಷಗಳ ಕಾಲ ಅನ್ನದಾಸೋಹ ಹಾಗೂ ಅಕ್ಷರ ದಾಸೋಹದ ತವರಾಗಿ ಜಾತಿ-ಧರ್ಮ ಬೇಧವಿಲ್ಲದೇ, ಪ್ರಾಂತ್ಯ-ಪ್ರದೇಶ ತಾರತಮ್ಯ ಮಾಡದೇ ಲಕ್ಷಾಂತರ ಮಕ್ಕಳಿಗೆ ಅನ್ನ, ಆಶ್ರಯ ಮತ್ತು ವಿದ್ಯೆಯನ್ನು ದಾನ ಮಾಡಿದ, ರಾಷ್ಟ್ರದಲ್ಲೇ ಪ್ರತಿಷ್ಠಿತ ಸಂಸ್ಥೆ ಎಂದು ಹೆಸರಾದ ಶ್ರೀ ಸಿದ್ದಗಂಗಾ ಶಿಕ್ಷಣ ಸಂಸ್ಥೆ ಹಾಗೂ ಶ್ರೀ ಸಿದ್ದಗಂಗಾ ಮಠ, ಕ್ಯಾತಸಂದ್ರ, ತುಮಕೂರು, ಸಾಧನೆಗಳ ತವರು.

ಮೀರಾಬಾಯಿ ಕೊಪ್ಪಿಕರ್:

ಮೀರಾಬಾಯಿ ಕೊಪ್ಪಿಕರ್, ಹುಬ್ಬಳ್ಳಿಯ ಅತ್ಯಂತ ಶ್ರೀಮಂತರಾಗಿದ್ದ ಕೊಪ್ಪಿಕರ ವಂಶದ ಕುಡಿ.  ಇವರಿಗೆ 96 ವರ್ಷ.  ಸದ್ಯ ಮುಧೋಳದಲ್ಲಿರುವ ವಾತ್ಸಲ್ಯ ಧಾಮದಲ್ಲಿ ವಾಸ್ತವ್ಯ ಮಾಡುತ್ತಿದ್ದಾರೆ.  ಪಕ್ಕಾ ಗಾಂಧಿವಾದಿಯಾಗಿದ್ದ ಇವರು ಇತ್ತೀಚಿನವರೆಗೂ ತಾವೇ ನೂಲು ನೇಯ್ದು ಅದರಲ್ಲಿ ವಸ್ತ್ರವನ್ನು ಮಾಡಿಕೊಳ್ಳುತ್ತಿದ್ದರು.  ಈಗ ವಯಸ್ಸಾದ ನಿಮಿತ್ತ ನೇಯ್ಗೆ ಮಾಡುತ್ತಿಲ್ಲ.

ಗಾಂಧಿವಾದಿಗಳಾಗಿದ್ದ ಶ್ರೀಮತಿ ಮೀರಾಬಾಯಿ ಕೊಪ್ಪಿಕರ್ ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡಿದ್ದರು.  ಸಬರಮತಿ ಆಶ್ರಮದಲ್ಲಿ ಇದ್ದರು. ವಿನೋಬಾ ಭಾವೆಯವರ ಜೊತೆಗೂಡಿ ಭೂದಾನ ಚಳವಳಿಯಲ್ಲಿ ಪಾಲ್ಗೊಂಡು, ಕರ್ನಾಟಕದಿಂದ ಒಟ್ಟು 40 ಸಾವಿರ ಎಕರೆ ಭೂಮಿಯನ್ನು ದಾನ ಮಾಡಿಸುವಲ್ಲಿ ಯಶಸ್ವಿಯಾದವರು.

ಯಾರಿಂದಲೂ ಏನನ್ನೂ ಅಪೇಕ್ಷೆ ಇಲ್ಲ. ಇವರ ಮೂಲ ಧ್ಯೇಯ “ಸಮಾಜಕ್ಕೆ ಏನನ್ನಾದರೂ ಕೊಡಬೇಕು.  ಏನನ್ನೂ ಬಯಸಬಾರದು” ಎಂಬುದು.  ಸಾವಯವ ಕೃಷಿ ಮಾಡುತ್ತಿದ್ದ ಇವರು ತಾವೇ ಬೆಳೆದ ವಸ್ತುಗಳನ್ನು ಮಾರಿ ಅದರಲ್ಲಿ ಬಂದ ಆದಾಯದಿಂದ ಜೀವನ ಮಾಡುತ್ತಿದ್ದಾರೆ.

“ವಾತ್ಸಲ್ಯ ಧಾಮ” ವಿನೋಬಾ ಭಾವೆಯವರ ತಾಯಿ ಮೂಲ ಜಮಖಂಡಿಯವರಾದ ರುಕ್ಮಿಣಿ ಭಾವೆಯವರದ್ದು.  ಮುಧೋಳದಲ್ಲಿ ಅವರು 2.5 ಎಕರೆ ಜಾಗವನ್ನು ಕೊಂಡು ಅದರಲ್ಲಿ ಆಶ್ರಮ ನಿರ್ಮಿಸಲಾಗಿದೆ.  ಆರಂಭದಲ್ಲಿ 20 ಜನರಿದ್ದರು.  ಈಗ ಮೂರು ಜನರಷ್ಟೇ ವಾಸ ಮಾಡುತ್ತಾರೆ.   ಮೀರಾಬಾಯಿ ಕೊಪ್ಪಿಕರ್ ಅವರನ್ನು ಸಂದರ್ಶಿಸಲು ಅತಿಥಿಗಳು ಆಗಾಗ್ಗೆ ಬರುತ್ತಿರುತ್ತಾರೆ.  ಜಾತ್ಯಾತೀತ ಮನೋಭಾವದವರಾಗಿದ್ದಾರೆ.

2008 ರಲ್ಲಿ ಇವರಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.  ಪ್ರಶಸ್ತಿಯನ್ನು ಇವರಿಗೆ ಕೊಡಲು ಆಗಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರೇ ಆಶ್ರಮಕ್ಕೆ ಆಗಮಿಸಿ, ಚೆಕ್ ಹಾಗೂ ಮೂರು ಗ್ರಾಂ ಬಂಗಾರದ ಪದಕವನ್ನು ಕೊಟ್ಟಿದ್ದರು.  ಅವರು ನೀಡಿ ಚೆಕ್ ಹಣ ಇನ್ನೂ ಬ್ಯಾಂಕ್‍ನಲ್ಲಿದ್ದು, ಅದನ್ನು ಜನತೆಯ ಕಲ್ಯಾಣಕ್ಕೆ ಬಳಸಲು ಹೇಳಿದ್ದಾರೆ.  ಬಂಗಾರದ ಪದಕವನ್ನು ಬಡವರಿಗೆ ದಾನ ಮಾಡಿದ್ದಾರೆ.

ಟಾಪ್ ನ್ಯೂಸ್

v-narayanan

ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

5-one-plus

OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

3-naxal

Naxalites ಶರಣಾಗತಿಯಲ್ಲಿ ಟ್ವಿಸ್ಟ್‌; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ

2-belagavi

Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ

sunil kumar

Naxalites; ಶರಣಾಗತಿ ಪ್ಯಾಕೇಜ್ ಬೆಚ್ಚಿಬೀಳಿಸಿದೆ: ಸುನಿಲ್ ಕುಮಾರ್ ತೀವ್ರ ಆಕ್ರೋಶ

1-raichur

Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

v-narayanan

ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

5-one-plus

OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.