“MAHE ಬೆಂಗಳೂರು ಓಪನ್‌ ಹೌಸ್‌’: ಉತ್ತಮ ಸ್ಪಂದನೆ; ಸಾವಿರಾರು ವಿದ್ಯಾರ್ಥಿಗಳು, ಪಾಲಕರು ಭಾಗಿ

ಶಿಕ್ಷಣ ಸಂಸ್ಥೆಗಳ ವಿಶೇಷತೆ ಕಂಡು ಹರ್ಷ

Team Udayavani, Apr 6, 2024, 11:58 PM IST

“MAHE ಬೆಂಗಳೂರು ಓಪನ್‌ ಹೌಸ್‌’: ಉತ್ತಮ ಸ್ಪಂದನೆ; ಸಾವಿರಾರು ವಿದ್ಯಾರ್ಥಿಗಳು, ಪಾಲಕರು ಭಾಗಿ

ಬೆಂಗಳೂರು: ದೇಶದ ಪ್ರಸಿದ್ಧ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಯಲಹಂಕದ “ಮಾಹೆ ಬೆಂಗಳೂರು ಕ್ಯಾಂಪಸ್‌’ನಲ್ಲಿ ಶನಿವಾರ ಹಮ್ಮಿಕೊಂಡಿದ್ದ “ಮಾಹೆ ಬೆಂಗಳೂರು ಓಪನ್‌ ಹೌಸ್‌’ ಕಾರ್ಯಕ್ರಮಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. 2 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು, ಪೋಷಕರು ಭಾಗವಹಿಸಿ ಶಿಕ್ಷಣ ಸಂಸ್ಥೆಗಳ ವಿಶೇಷತೆ ಕಂಡು ಹರ್ಷಗೊಂಡರು.

ಮಾಹೆ ಬೆಂಗಳೂರು ಕ್ಯಾಂಪಸ್‌ನ 8 ಶಿಕ್ಷಣ ಸಂಸ್ಥೆಗಳಲ್ಲಿ ಲಭ್ಯವಿರುವ ಎಂಜಿನಿಯರಿಂಗ್‌, ಕಾನೂನು, ಮುಕ್ತಕಲೆ, ಕಾಮರ್ಸ್‌, ಮ್ಯಾನೇಜ್‌ಮೆಂಟ್‌, ರೀ ಜನರೇಟಿವ್‌ ಮೆಡಿಸಿನ್‌, ಆರ್ಟ್‌ ಆ್ಯಂಡ್‌ ಡಿಸೈನ್‌, ಪಬ್ಲಿಕ್‌ ಪಾಲಿಸಿ ಈ ವಿಷಯಗಳಲ್ಲಿ ಲಭ್ಯವಿರುವ ಸ್ನಾತಕ ಮತ್ತು ಸ್ನಾತಕೋತ್ತರ ಪದವಿಗಳ ಬಗ್ಗೆ ವಿದ್ಯಾರ್ಥಿಗಳು ಹಾಗೂ ಪಾಲಕರು ಮಾಹಿತಿ ಪಡೆದರು. ಬೆಳಗ್ಗೆ 9.30ರಿಂದ ಸಂಜೆ 4 ಗಂಟೆಯ ವರೆಗೆ ನಡೆದ “ಓಪನ್‌ ಹೌಸ್‌’ನಲ್ಲಿ ಕ್ಯಾಂಪಸ್‌ನ ಸಮಗ್ರ ಪರಿಚಯವನ್ನು ನೀಡಲು ಏರ್ಪಡಿಸಿದ್ದ ಕ್ಯಾಂಪಸ್‌ ಟೂರ್‌ನಲ್ಲಿ ಭಾಗಿಯಾಗಿ ಮಾಹೆ ಬೆಂಗಳೂರು ಕ್ಯಾಂಪಸ್‌ನ ತರಗತಿ ಕೊಠಡಿಗಳು, ಪ್ರಯೋಗಾಲಯ (ಲ್ಯಾಬ್‌), ಫುಡ್‌ಕೋರ್ಟ್‌ ಸೌಲಭ್ಯ, ಕ್ರಿಕೆಟ್‌, ಫುಟ್‌ಬಾಲ್‌ ಮೈದಾನಗಳು, ವಾಲಿಬಾಲ್‌, ಟೆನಿಸ್‌, ಬಾಸ್ಕೇಟ್‌ ಬಾಲ್‌ ಕೋರ್ಟ್‌ಗಳು ಸಹಿತ ಹೊರಾಂಗಣ ಕ್ರೀಡಾಂಗಣಗಳನ್ನು ವೀಕ್ಷಿಸಿದರು. ಕೆಲವು ವಿದ್ಯಾರ್ಥಿಗಳು ಅಧ್ಯಾಪಕ ವೃಂದದವರ ಜತೆಗೆ ಸಂವಹನ ನಡೆಸಿ ಸೂಕ್ತ ಮಾರ್ಗದರ್ಶನ ಪಡೆದುಕೊಂಡರು. ಸಂಸ್ಥೆಯ ಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾದ ವಿದ್ಯಾರ್ಥಿಗಳು
ವಿವಿಧ ಓಪನ್‌ ಹೌಸ್‌ ಚಟುವಟಿಕೆಗಳಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳು ಮನೋರಂಜನೆ ಪಡೆದರು. ಇದರಲ್ಲಿ ಗೇಮಿಂಗ್‌, ಸೈನ್ಸ್‌ ಕ್ವಿಜ್‌, ಪಾಲಿಸಿ ಹ್ಯಾಕಥಾನ್‌, ಕೆರಿಯರ್‌ ಅಸೆಸ್‌ಮೆಂಟ್‌ ಟೆಸ್ಟ್‌, ವಿವಿಧ ಸ್ಫರ್ಧೆಗಳು ವಿಶೇಷವಾಗಿತ್ತು. ಫುಡ್‌ ಆ್ಯಂಡ್‌ ಫ‌ನ್‌ ಕಾರ್ಯಕ್ರಮದಲ್ಲಿ ಆಹಾರ ಮಳಿಗೆಗಳು, ವಿದ್ಯಾರ್ಥಿಗಳು ನೃತ್ಯ ರೂಪಕಗಳು ಆಕರ್ಷಕವಾಗಿದ್ದವು. ಪ್ರಸಿದ್ದ ಕಲಾವಿದ ಕೆನ್ನಿ ಸೆಬಾಸ್ಟಿನ್‌ ಅವರಿಂದ ಸ್ಟಾಂಡ್‌ಅಪ್‌ ಕಾಮಿಡಿ ಕಾರ್ಯಕ್ರಮ ನಡೆಸಿಕೊಟ್ಟು ವೀಕ್ಷಕರನ್ನು ನಗೆಗಡಲಿನಲ್ಲಿ ತೇಲಿಸಿದರು.

ಮಾಹೆ ಬೆಂಗಳೂರಿನಲ್ಲಿ ಸುಸಜ್ಜಿತ ಸೌಲಭ್ಯ
ಮಾಹೆ ಬೆಂಗಳೂರಿನ ಸಹ ಉಪಕುಲಪತಿ ಡಾ| ಮಧು ವೀರರಾಘವನ್‌ ಮಾತನಾಡಿ, ನಗರದ ಅತಿದೊಡ್ಡ ಓಪನ್‌ ಹೌಸ್‌ ಕಾರ್ಯಕ್ರಮವನ್ನು ಆಯೋಜಿಸಲು ನಾವು ಹೆಮ್ಮೆಪಡುತ್ತೇವೆ. ಮಾಹೆ ಬೆಂಗಳೂರು ಶಿಕ್ಷಣ ಸಂಸ್ಥೆಯು ಸುಸಜ್ಜಿತ ಸೌಲಭ್ಯಗಳನ್ನು ಹೊಂದಿದೆ. ವಿದ್ಯಾರ್ಥಿಗಳಿಗೆ ವ್ಯಾಸಂಗ ಮಾಡಲು ಪೂರಕ ವಾತಾವರಣ ಇಲ್ಲಿದೆ ಎಂದು ವಿವರಿಸಿದರು. ಕ್ಯಾಂಪಸ್‌ನ ಡೆಪ್ಯೂಟಿ ಡೈರೆಕ್ಟರ್‌ ಆಫ್ ಅಡ್ಮಿಷನ್‌ ಗೌರವ್‌ ಯಾದವ್‌ ವಿದ್ಯಾರ್ಥಿಗಳು ಹಾಗೂ ಪಾಲಕರ ಜತೆಗೆ ಸಂವಾದ ನಡೆಸಿ ಇಲ್ಲಿನ ಸೌಲಭ್ಯಗಳನ್ನು ವಿವರಿಸಿದರು.

ಟಾಪ್ ನ್ಯೂಸ್

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ

Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ

Kollywood: ಧನುಷ್‌ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು

Kollywood: ಧನುಷ್‌ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು

ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್‌ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ

BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್‌ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ

MUST WATCH

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

ಹೊಸ ಸೇರ್ಪಡೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

KMC: New Medical Oncology Outpatient, Chemotherapy Day Care Center inaugurated

KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.