Karnataka ಕಾನೂನು ಸುವ್ಯವಸ್ಥೆ ಕಾಪಾಡಿ: ಡಿಜಿಪಿಗೆ ಬಿಜೆಪಿ ಆಗ್ರಹ
Team Udayavani, May 18, 2024, 11:22 PM IST
ಬೆಂಗಳೂರು: ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದ್ದು ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿದೆ.
ಮಹಿಳೆಯರ ಮೇಲಿನ ದೌರ್ಜನ್ಯಗಳು ದಿನೇ ದಿನೇ ಅಧಿಕವಾಗುತ್ತಿದ್ದು ಕಠಿನ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ನೇತೃತ್ವದ ಬಿಜೆಪಿ ನಿಯೋಗ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಮನವಿ ಸಲ್ಲಿಸಿದೆ.
ಡಿಜಿಪಿ ಅಲೋಕ್ ಮೋಹನ್ ಅವರನ್ನು ಭೇಟಿಯಾದ ನಿಯೋಗ, ಕೆಲ ಹೊತ್ತು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ಬಗ್ಗೆ ಚರ್ಚಿಸಿತು. ಬಳಿಕ ಕಳೆದ ಒಂದು ವರ್ಷದಲ್ಲಿ ರಾಜ್ಯದಲ್ಲಿ ನಡೆದಿರುವ ಪ್ರಮುಖ ಪ್ರಕರಣಗಳನ್ನು ಉಲ್ಲೇಖೀಸಿ, ಸಾರ್ವಜನಿಕರು, ಮಹಿಳೆಯರಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಮನವಿ ಪತ್ರ ನೀಡಿ, ಕ್ರಮಕ್ಕೆ ಆಗ್ರಹಿಸಿದೆ.
ಹೇಳಿಕೆ ಕೊಟ್ಟು ತನಿಖೆ ಹಾದಿ ತಪ್ಪಿಸೋದಿಲ್ಲ: ಸದಾನಂದ ಗೌಡ
ಹಾಸನದ ಪೆನ್‌ಡ್ರೈವ್ ಪ್ರಕರಣ ಹಾಗೂ ಬಿಜೆಪಿ ಮುಖಂಡ ದೇವರಾಜೇಗೌಡ ಆರೋಪ ವಿಚಾರ ಕುರಿತು ಪ್ರತಿಕ್ರಿಯೆ ನೀಡಿದ ಸದಾನಂದ ಗೌಡ, ಎಸ್‌ಐಟಿ ಪ್ರಕರಣದ ತನಿಖೆ ನಡೆಸುತ್ತಿದೆ. ಈಗ ಹೇಳಿಕೆ ಕೊಟ್ಟು ತನಿಖೆ ಹಾದಿ ತಪ್ಪಿಸಬಾರದು. ಆ ಕೆಲಸ ನಾನು ಮಾಡೋದಿಲ್ಲ. ದೇವರಾಜೇಗೌಡ ಹೇಳಿಕೆ ವಿಚಾರದಲ್ಲಿ ನಾನಾಗಲಿ, ಪಕ್ಷವಾಗಲಿ ಮಧ್ಯ ಪ್ರವೇಶ ಮಾಡೋದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ
Puttur: ಸ್ಕೂಲ್ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Kasaragod: ಫ್ಯಾಶನ್ ಗೋಲ್ಡ್ ವಂಚನೆ ಪ್ರಕರಣ: ಪೂಕೋಯ ತಂಙಳ್ ಮತ್ತೆ ಬಂಧನ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.