Malayalam; ಪುರುಷನ ಮೇಲೆ ಲೈಂಗಿ*ಕ ದೌರ್ಜನ್ಯ!: ನಿರ್ದೇಶಕ ರಂಜಿತ್ ಮೇಲೆ ಪ್ರಕರಣ ದಾಖಲು
ಪಂಚತಾರಾ ಹೋಟೆಲ್ ನಲ್ಲಿ ಕೃತ್ಯ... ಆರೋಪದ ಮೇಲೆ ಬೆಂಗಳೂರಿನಲ್ಲಿ ಪ್ರಕರಣ...
Team Udayavani, Oct 28, 2024, 7:33 PM IST
ಬೆಂಗಳೂರು: ಇಲ್ಲಿನ ಪಂಚತಾರಾ ಹೋಟೆಲ್‌ನಲ್ಲಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಿ 31 ವರ್ಷದ ವ್ಯಕ್ತಿಯೊಬ್ಬರು ನೀಡಿದ ದೂರಿನ ಮೇರೆಗೆ ಖ್ಯಾತ ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಸೋಮವಾರ(ಅ28) ತಿಳಿಸಿದ್ದಾರೆ.
ಎಫ್‌ಐಆರ್‌ನ ಪ್ರಕಾರ, ನಿರ್ದೇಶಕರು ತನ್ನ ಫೋನ್ ನಂಬರ್ ಪಡೆಯುವಲ್ಲಿ ಯಶಸ್ವಿಯಾದರು ಮತ್ತು ಡಿಸೆಂಬರ್ 2012 ರಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ಹೋಟೆಲ್‌ಗೆ ಆಹ್ವಾನಿಸಿ ಅಲ್ಲಿ ನನಗೆ ಮದ್ಯ ನೀಡಿ ಲೈಂಗಿಕ ದೌರ್ಜನ್ಯ ಎಸಗಿದ್ದರು ಎಂದು ಆರೋಪಿಸಿದ್ದಾರೆ.
“ಮೊದಲು ಕೇರಳದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು ಆದರೆ ಇಲ್ಲಿನ ಪಂಚತಾರಾ ಹೋಟೆಲ್‌ನಲ್ಲಿ ಲೈಂಗಿಕ ದೌರ್ಜನ್ಯದ ಘಟನೆ ನಡೆದಿರುವ ಕಾರಣ ಪ್ರಕರಣವನ್ನು ಬೆಂಗಳೂರಿಗೆ ವರ್ಗಾಯಿಸಿ ಎಫ್‌ಐಆರ್ ದಾಖಲಿಸಲಾಗಿದೆ” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಘಟನೆ 2012 ರಲ್ಲಿ ನಡೆದಿದ್ದು, ಮಲಯಾಳಂ ಚಲನಚಿತ್ರೋದ್ಯಮದ ಅನೇಕ ಕಲಾವಿದರು ಲೈಂಗಿಕ ಕಿರುಕುಳದ ಆರೋಪಗಳ ಸರಣಿಯ ಹಿನ್ನೆಲೆಯಲ್ಲಿ ದೂರುದಾರ ವಿಚಾರ ಬಹಿರಂಗ ಪಡಿಸಿದ್ದು, ದೂರು ದಾಖಲಿಸಲು ಧೈರ್ಯ ತೋರಿರುವುದಾಗಿ ಹೇಳಿರಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ದೂರಿನ ಆಧಾರದ ಮೇಲೆ ಅಕ್ಟೋಬರ್ 26 ರಂದು ಬಿಐಎಎಲ್ (ಬೆಂಗಳೂರು ಇಂಟರ್ನ್ಯಾಷನಲ್ ಏರ್ಪೋರ್ಟ್ ಲಿಮಿಟೆಡ್) ಪೊಲೀಸ್ ಠಾಣೆಯಲ್ಲಿ ನಿರ್ದೇಶಕರ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 377 (ಅಸ್ವಾಭಾವಿಕ ಅಪರಾಧಗಳು) ಮತ್ತು 66 ಇ (ಗೌಪ್ಯತೆಯ ಉಲ್ಲಂಘನೆ) ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ,’’ ಎಂದು ಹೇಳಿದ್ದಾರೆ.
ನಟಿಯೊಂದಿಗೆ ಅಸಭ್ಯ ವರ್ತನೆ ಆರೋಪ ಕೇಳಿಬಂದ ಹಿನ್ನೆಲೆ ರಂಜಿತ್ ಅವರು ರಾಜ್ಯ ಸರಕಾರ ನಡೆಸುವ ಕೇರಳ ಚಲಚಿತ್ರ (Kerala Chalachitra Academy) ಅಕಾಡೆಮಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.