ಈಗ “ಮಲೆನಾಡು ಕರ್ನಾಟಕ’ದ ಕೂಗು


Team Udayavani, Apr 4, 2022, 6:30 AM IST

ಈಗ “ಮಲೆನಾಡು ಕರ್ನಾಟಕ’ದ ಕೂಗು

ಸಾಂದರ್ಭಿಕ ಚಿತ್ರ

ಬೆಂಗಳೂರು: ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕದ ಬಳಿಕ ಈಗ ಮಲೆನಾಡು ಕರ್ನಾಟಕ ಘೋಷಣೆಯ ಕೂಗು ಎದ್ದಿದ್ದು,  ಪಕ್ಷಾತೀತ ಹೋರಾಟಕ್ಕೆ  ಜನಪ್ರತಿನಿಧಿಗಳು ಸಜ್ಜಾಗುತ್ತಿದ್ದಾರೆ.

ಅಖಂಡ ಭಾರತ, ಸಮಗ್ರ ಕರ್ನಾಟಕದ ಭಾಗವಾಗಿರುವ ನಮ್ಮ ಭಾಗದ ಅಭಿವೃದ್ಧಿಗೆ ಆದ್ಯತೆ ನೀಡಬೇಕು. ಇಲ್ಲಿನ ಸಮಸ್ಯೆಗಳೇ ಬೇರೆಯಾಗಿದ್ದು, ಇದಕ್ಕಾಗಿ ವಿಶೇಷ ಅನುದಾನ ನಿಗದಿಗೊಳಿಸಬೇಕು ಎಂಬುದು ಮಲೆನಾಡು ಕರ್ನಾಟಕ ಹೋರಾಟದ ಪ್ರಮುಖ ಬೇಡಿಕೆ. ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಚಾಮರಾಜನಗರ ಜಿಲ್ಲೆಗಳನ್ನೊಳಗೊಂಡು ಮಲೆನಾಡು ಕರ್ನಾಟಕ ಎಂದು ಘೋಷಿಸಬೇಕು ಎಂಬುದು ಆಗ್ರಹ.

ನಮ್ಮದು ಪ್ರತ್ಯೇಕತೆ ಬಯಸುವ ಹೋರಾಟವಲ್ಲ. ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ, ಕರಾವಳಿ ಕರ್ನಾಟಕ ಮಾದರಿಯಲ್ಲಿ ಅಭಿವೃದ್ಧಿಗೆ ಹೆಚ್ಚು ಒತ್ತು ಸಿಗಬೇಕು. ಮಲೆನಾಡು ಅಭಿವೃದ್ಧಿ ಮಂಡಳಿ ಕೇವಲ ಹೆಸರಿಗೆ ಮಾತ್ರ ಇದ್ದು, ಅದರಿಂದ ಅಭಿವೃದ್ಧಿ ಸಾಧ್ಯವಿಲ್ಲ ಎಂಬುದು ಜನಪ್ರತಿನಿಧಿಗಳ ವಾದ.  ಸದ್ಯದಲ್ಲೇ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ಅಧಿಕೃತ ಬೇಡಿಕೆ ಮುಂದಿಡಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.

ನ್ಯಾಯಯುತ ಬೇಡಿಕೆ :

ನಮ್ಮ ಬೇಡಿಕೆ ನ್ಯಾಯಯುತವಾಗಿದೆ. ರಾಜ್ಯದ ಪಾಕೃತಿಕ ಸಂಪತ್ತು, ವನ್ಯ ಜೀವಿ ಸಂಪತ್ತು, ಜಲಾಶಯಗಳ ಮೂಲಕ ಮಳೆ ನೀರು ಹಿಡಿದಿಟ್ಟುಕೊಂಡು ಹಳೆ ಮೈಸೂರು, ಬಯಲುಸೀಮೆ ಪ್ರದೇಶಕ್ಕೆ ಕೊಡುತ್ತೇವೆ. ಮಳೆ, ಪ್ರವಾಹದಿಂದ ನಮ್ಮ ಭೂಮಿ ಕಳೆದುಕೊಳ್ಳುತ್ತಿದ್ದೇವೆ. ಪ್ರಾಣಿ -ಮಾನವರ ಸಂಘರ್ಷದಿಂದ ಸಮಸ್ಯೆಯಾಗುತ್ತಿದೆ. ರಸ್ತೆ-ಸೇತುವೆಗಳು ಕೊಚ್ಚಿ ಹೋಗುವುದು ಸಾಮಾನ್ಯ. ಇಂತಹ ಪರಿಸ್ಥಿತಿಯಲ್ಲಿ ನಮಗೆ ವಿಶೇಷ ಅನುದಾನ ಬೇಕೇ ಬೇಡವೇ ಎಂಬುದಷ್ಟೇ ನಮ್ಮ ಪ್ರಶ್ನೆ ಎನ್ನುತ್ತಾರೆ ಜೆಡಿಎಸ್‌ ರಾಜ್ಯಾಧ್ಯಕ್ಷರೂ ಆಗಿರುವ ಸಕಲೇಶಪುರದ ಶಾಸಕ ಎಚ್‌.ಕೆ.ಕುಮಾರಸ್ವಾಮಿ.

ಮಲೆನಾಡು ಭಾಗದಿಂದ ಪ್ರತಿವರ್ಷ 5 ಸಾವಿರ ಕೋಟಿ ರೂ. ಮೊತ್ತದ ವಹಿವಾಟು ರಫ್ತು ಸೇರಿ ಇತರ ಬಾಬ್ತುಗಳಿಂದ ಆಗುತ್ತದೆ. ಸರಕಾರಕ್ಕೆ ತೆರಿಗೆ ರೂಪದಲ್ಲಿ ಸಾಕಷ್ಟು ಆದಾಯವೂ ಬರುತ್ತದೆ. ಆದರೆ, ನಮ್ಮ ಭಾಗದ ಅಭಿವೃದ್ಧಿಗೆ ನಿರೀಕ್ಷಿತ ಪ್ರಮಾಣದಲ್ಲಿ ಹಣ ಸಿಗುತ್ತಿಲ್ಲ. ನಾವು ಸವಕಳಿಯಿಂದ ಭೂಮಿ ಕಳೆದುಕೊಳ್ಳುತ್ತಿದ್ದೇವೆ. ಸಾಕಷ್ಟು ನಷ್ಟ ಅನುಭವಿಸುತ್ತಿದ್ದೇವೆ. ಡಾ| ಡಿ.ಎಂ.ನಂಜುಂಡಪ್ಪ ವರದಿ ಪ್ರಕಾರ ಹಿಂದುಳಿದ ಪ್ರದೇಶಗಳಿಗೆ ಸಾಕಷ್ಟು ಅನುದಾನ ಸಿಕ್ಕಿದೆ. ಆದರೆ, ಮಲೆನಾಡು ಭಾಗಕ್ಕೆ ಆದ್ಯತೆ ಸಿಕ್ಕಿಲ್ಲ ಎನ್ನುತ್ತಾರೆ ಮೂಡಿಗೆರೆಯ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ.

ಪ್ರತ್ಯೇಕತೆಯಲ್ಲ :

ನಮ್ಮ ಧ್ವನಿ ಮತ್ತು ಹೋರಾಟ ಪ್ರತ್ಯೇಕತೆಯಲ್ಲ. ಸಮಗ್ರ ಕರ್ನಾಟಕ ಅಭಿವೃದ್ಧಿಯ ಕಲ್ಪನೆಯೊಂದಿಗೆ ಮಲೆನಾಡು ಕರ್ನಾಟಕಕ್ಕೆ ಆದ್ಯತೆ ಕೊಡಿ. ಅಭಿವೃದ್ದಿ ದೃಷ್ಟಿಯಿಂದ ನೋಡಿ ಎಂಬುದಷ್ಟೇ ನಮ್ಮ ಮನವಿ. ಕಾಫಿ, ಟೀ, ಏಲಕ್ಕಿ, ಮೆಣಸು ಹೀಗೆ ನಮ್ಮ ಭಾಗದಿಂದ ಸಾಕಷ್ಟು ವಾಣಿಜ್ಯ ವಹಿವಾಟು ನಡೆಯುತ್ತವೆ. ಅಭಿವೃದ್ಧಿಗೆ ಯಾಕೆ ಅನುದಾನ ಸಿಗುತ್ತಿಲ್ಲ ಎಂದು ಶೃಂಗೇರಿ ಶಾಸಕ ಕಾಂಗ್ರೆಸ್‌ನ ಟಿ.ಡಿ.ರಾಜೇಗೌಡ ಕೇಳುತ್ತಾರೆ.

ಮಲೆನಾಡಿನ ಸಮಸ್ಯೆ ರಾಜ್ಯದ ಇತರ ಭಾಗಕ್ಕಿಂತ ಭಿನ್ನ. ಇತರ ಜಿಲ್ಲೆಗಳಿಗೆ ಕೊಟ್ಟಂತೆ ಇಲ್ಲೂ ಅನುದಾನ ನಿಗದಿ ಮಾಡಿದರೆ ಸಮಸ್ಯೆ ಬಗೆಹರಿಯುವುದಿಲ್ಲ. ಹೀಗಾಗಿ, ನಾವು ಮಲೆನಾಡು ಕರ್ನಾಟಕ ಎಂದು ಘೋಷಿಸಿ ವಿಶೇಷ ಯೋಜನೆ ರೂಪಿಸಿ ಅಭಿವೃದ್ಧಿಗೆ ಒತ್ತು ನೀಡಿ ಎಂಬ ಬೇಡಿಕೆ ಇಟ್ಟಿದ್ದೇವೆ. ಬೇರೆ ಯಾವುದೇ ಉದ್ದೇಶ ಇಲ್ಲ.-ಎಚ್‌.ಕೆ.ಕುಮಾರಸ್ವಾಮಿ,  ಸಕಲೇಶಪುರ ಶಾಸಕ

ನಾವು ಕೂಡ ಅಖಂಡ ಕರ್ನಾಟಕದ ಭಾಗ. ಇದರಲ್ಲಿ ಎಳ್ಳಷ್ಟೂ ಬೇರೆ ಮಾತಿಲ್ಲ. ಆದರೆ, ಇಲ್ಲಿನ ಪರಿಸ್ಥಿತಿಗೆ ತಕ್ಕಂತೆ ಅಭಿವೃದ್ಧಿಗೆ ವಿಶೇಷ ಕ್ರಿಯಾಯೋಜನೆ ರೂಪಿಸಬೇಕು. ಪ್ರಾಣಿ-ಮಾನವ ಸಂಘರ್ಷ ತಪ್ಪಿಸಬೇಕು, ರಸ್ತೆ-ಸೇತುವೆ ಸೇರಿ ಮೂಲಸೌಕರ್ಯ ಕಲ್ಪಿಸಬೇಕು. ಕೆಲ ವಿಚಾರಗಳಲ್ಲಿ ಶಾಶ್ವತ ಪರಿಹಾರಕ್ಕೆ ಯೋಜನೆ ರೂಪಿಸಬೇಕು.-ಟಿ.ಡಿ.ರಾಜೇಗೌಡ,  ಶೃಂಗೇರಿ ಶಾಸಕ

ಆಗುಂಬೆ, ಕೊಟ್ಟಿಗೆಹಾರ, ಭಾಗಮಂಡಲ ಹೀಗೆ ಅತಿ ಹೆಚ್ಚು ಮಳೆ ಬೀಳುವ ಪ್ರದೇಶ ಇರುವುದು ಮಲೆನಾಡಿನಲ್ಲಿ. ಇದರಿಂದ ಬೆಳೆ ಹಾನಿಯಾಗುತ್ತಿದೆ. ಜಮೀನು ಕಳೆದುಕೊಳ್ಳುತ್ತಿದ್ದೇವೆ. ರಸ್ತೆ ಸಂಪರ್ಕ ಇಲ್ಲ. ಹೀಗಾಗಿ, ಮಲೆನಾಡು ಕರ್ನಾಟಕ ಎಂದು ಘೋಷಿಸಿ ಅಭಿವೃದ್ಧಿಗೆ ಒತ್ತು ನೀಡಬೇಕು. ಇದನ್ನು ಪ್ರತ್ಯೇಕತೆ ಧ್ವನಿ ಎಂದು  ಭಾವಿಸಬಾರದು.  -ಎಂ.ಪಿ.ಕುಮಾರಸ್ವಾಮಿ, ಮೂಡಿಗೆರೆ ಶಾಸಕ

 

-ಎಸ್‌.ಲಕ್ಷ್ಮೀ ನಾರಾಯಣ

ಟಾಪ್ ನ್ಯೂಸ್

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

naksal (2)

Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು

3-naxal

Naxalites ಶರಣಾಗತಿಯಲ್ಲಿ ಟ್ವಿಸ್ಟ್‌; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

3-naxal

Naxalites ಶರಣಾಗತಿಯಲ್ಲಿ ಟ್ವಿಸ್ಟ್‌; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ

2-belagavi

Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ

sunil kumar

Naxalites; ಶರಣಾಗತಿ ಪ್ಯಾಕೇಜ್ ಬೆಚ್ಚಿಬೀಳಿಸಿದೆ: ಸುನಿಲ್ ಕುಮಾರ್ ತೀವ್ರ ಆಕ್ರೋಶ

1-raichur

Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

4-dandeli

Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.