ಖರ್ಗೆ, ವಿನಯ್, ಅಂಗಡಿ ನಾಮಪತ್ರ
Team Udayavani, Apr 5, 2019, 6:00 AM IST
ಹುಬ್ಬಳ್ಳಿ: ಎರಡನೇ ಹಂತದ ಚುನಾವಣೆ ಕಣ ರಂಗೇರಿದ್ದು ನಾಮ ಪತ್ರ ಸಲ್ಲಿಕೆಯ ಕೊನೆಯ ದಿನವಾದ ಗುರುವಾರ ಮಲ್ಲಿಕಾರ್ಜುನ ಖರ್ಗೆ, ಆನಂದ ಅಸ್ನೋಟಿಕರ್, ಸುರೇಶ ಅಂಗಡಿ, ವಿನಯ ಕುಲಕರ್ಣಿ ಸೇರಿದಂತೆ ಘಟಾನುಘಟಿ ನಾಯಕರು ತಮ್ಮ ಉಮೇದುವಾರಿಕೆ ಸಲ್ಲಿಕೆ ಮಾಡಿದ್ದಾರೆ.
ಕಲಬುರಗಿಯಲ್ಲಿ ಹಾಲಿ ಸಂಸದ, ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಬೃಹತ್ ಮೆರವಣಿಗೆ ನಡೆಸಿ ನಾಮಪತ್ರ ಸಲ್ಲಿಸಿದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಬೀದರ್ ಲೋಕಸಭೆ ಅಭ್ಯರ್ಥಿ ಈಶ್ವರ ಖಂಡ್ರೆ,
ಶಾಸಕರಾದ ಎಂ.ವೈ. ಪಾಟೀಲ, ಖನೀಜ್ ಫಾತೀಮಾ ಸಾಥ್
ನೀಡಿದರು. ರಾಜ್ಯ ನಾಯಕರ ಗೈರು ಎದ್ದು ಕಾಣುತ್ತಿತ್ತು. ಮಾಜಿ ಸಿಎಂ ಸಿದ್ದರಾಮಯ್ಯ ಕೊಪ್ಪಳದಲ್ಲಿದ್ದರೂ ಕಲಬುರಗಿಗೆ ಹೋಗದಿರುವುದು ಅನುಮಾನಕ್ಕೆಡೆ ಮಾಡಿ ಕೊಟ್ಟಿದೆ.
ಧಾರವಾಡದಲ್ಲಿ ಕೊನೆ ಗಳಿಗೆಯಲ್ಲಿ ಗುದ್ದಾಡಿ ಟಿಕೆಟ್ ಪಡೆದಿರುವ ವಿನಯ ಕುಲಕರ್ಣಿ ಶಕ್ತಿ ಪ್ರದರ್ಶನದ ಮೂಲಕ ನಾಮಪತ್ರ ಸಲ್ಲಿಕೆ ಮಾಡಿದ್ದು, ಉಸ್ತುವಾರಿ ಸಚಿವ ಆರ್ .ವಿ.ದೇಶಪಾಂಡೆ, ಸಿಎಂ ಸಂಸದೀಯ ಕಾರ್ಯದರ್ಶಿ ಎನ್.ಎಚ್. ಕೋನರಡ್ಡಿ ಒಗ್ಗಟ್ಟು ಪ್ರದರ್ಶಿಸಿದರು.
ಕೆನರಾ ಲೋಕಸಭೆ ಕ್ಷೇತ್ರಕ್ಕೆ ಮೈತ್ರಿ ಅಭ್ಯರ್ಥಿಯಾಗಿ ಆನಂದ ಅಸ್ನೋಟಿಕರ್ ಉಮೇದುವಾರಿಕೆ ಸಲ್ಲಿಕೆ ವೇಳೆ ಖುದ್ದು ಸಿಎಂ
ಕುಮಾರಸ್ವಾಮಿ ಹಾಜರಿದ್ದು ಬಲ ನೀಡಿದರು. ಬಿಜೆಪಿ ಅಭ್ಯರ್ಥಿ ಅನಂತಕುಮಾರ ಹೆಗಡೆ ವಿರುದ್ಧ ವಾಗ್ಧಾಳಿ ನಡೆಸಿ, ಮೈತ್ರಿ ಅಭ್ಯರ್ಥಿ ಬೆಂಬಲಿಸುವಂತೆ ಮನವಿ ಮಾಡಿದರು. ಬೆಳಗಾವಿಯಲ್ಲಿ ನಾಲ್ಕನೇ ಬಾರಿ ಗೆಲುವಿಗೆ ಹಾಲಿ ಸಂಸದ ಸುರೇಶ ಅಂಗಡಿಗೆ ಮಾಜಿ ಸಿಎಂ ಜಗದೀಶ ಶೆಟ್ಟರ್ ಸಾಥ್ ನೀಡಿದರೆ, ಹಾವೇರಿಯಲ್ಲಿ ಬಿಜೆಪಿಯಿಂದ ಹಾಲಿ ಸಂಸದ ಶಿವಕುಮಾರ ಉದಾಸಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಬೃಹತ್ ಮೆರವಣಿಗೆ ನಡೆಸಿ ಮತಯಾಚನೆ ಮಾಡಿದರು. ದಾವಣಗೆರೆಯಲ್ಲಿ ಬಿಜೆಪಿಯಿಂದ ಹಾಲಿ ಸಂಸದ ಜಿ.ಎಂ.ಸಿದ್ದೇಶ್ವರ, ಮೈತ್ರಿ ಅಭ್ಯರ್ಥಿಯಾಗಿ ಮಂಜಪ್ಪ ನಾಮಪತ್ರಸಲ್ಲಿಸಿದರು.
ಒಂಭತ್ತು ಸಲ ವಿಧಾನಸಭೆಗೆ ಹಾಗೂ ಎರಡು ಸಲ ಲೋಕಸಭೆ ಚುನಾವಣೆಯಲ್ಲಿ ನನ್ನ ಗೆಲುವಿನಲ್ಲೇ ಜನರು ತಮ್ಮ ಗೆಲುವು ಕಂಡುಕೊಂಡಿದ್ದಾರೆ. ಜನರ ಗೆಲುವಿನಲ್ಲೇ ನನ್ನ ಗೆಲುವು ಕಂಡುಕೊಂಡಿದ್ದೇನೆ. ಈ ಚುನಾವಣೆಯಲ್ಲಿಯೂ ಜನರೇ ಗೆಲ್ಲುತ್ತಾರೆ ಹಾಗೂ ಗೆಲ್ಲಿಸುತ್ತಾರೆ. ಗಲ್ಲಿಯಿಂದ ಹಿಡಿದು ದಿಲ್ಲಿವರೆಗೂ ಸೋಲಿಸಲು ನಿಂತವರಿಗೆ ನಿರಾಶೆಯಾಗಲಿದೆ.
ಮಲ್ಲಿಕಾರ್ಜುನ ಖರ್ಗೆ, ಸಂಸದರು
ದುಡ್ಡು ಇದ್ದರೆ ಮಾತ್ರ ಚುನಾವಣೆ ಗೆಲ್ಲುತ್ತೇವೆ ಎಂಬುದೆಲ್ಲ ಸುಳ್ಳು. ಚುನಾವಣೆಯಲ್ಲಿ ಎಲ್ಲವೂ ದುಡ್ಡಿನಿಂದ ನಡೆಯಲ್ಲ. ಹಾಗಿದ್ದರೆ ದುಡ್ಡು ಇದ್ದವರೆಲ್ಲಾ ಈ ದೇಶದ ಪ್ರಧಾನಿ ಆಗುತ್ತಿದ್ದರು. ಜನರ ಪ್ರೀತಿ, ಕಾರ್ಯಕರ್ತರ ಹಾರೈಕೆ ಎಲ್ಲವೂ ಬೇಕಾಗುತ್ತದೆ. ಅದು ಈ
ಬಾರಿ ಕಾಂಗ್ರೆಸ್ ಪಕ್ಷಕ್ಕೆ ಲಭಿಸಿದ್ದು, ಗೆಲುವು ನಮ್ಮದೇ.
ವಿನಯ ಕುಲಕರ್ಣಿ, ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
Minimum Temperature: ಬೆಂಗಳೂರಿನಲ್ಲಿ ಶೀಘ್ರ 11 ಡಿಗ್ರಿ ತಾಪ?: 12 ವರ್ಷದಲ್ಲೇ ದಾಖಲೆ
Report: ಐಸಿಯು ಗಲೀಜು, ಟ್ಯಾಂಕ್‌ನಲ್ಲಿ ಪಾಚಿ: ಸರಕಾರಿ ಆಸ್ಪತ್ರೆಗಳ ದುಃಸ್ಥಿತಿ!
JDS: ಆಂತರಿಕ ಚುನಾವಣೆ ಮೂಲಕವೇ ರಾಜ್ಯಾಧ್ಯಕ್ಷರ ಆಯ್ಕೆ: ಎಚ್.ಡಿ.ಕುಮಾರಸ್ವಾಮಿ
Contracter Case: ಗುತ್ತಿಗೆದಾರ ಆತ್ಮಹತ್ಯೆ: ಸಚಿವ ಪ್ರಿಯಾಂಕ್ ರಾಜೀನಾಮೆಗೆ ಬಿಜೆಪಿ ಆಗ್ರಹ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
Daily Horoscope: ಅವಿವಾಹಿತರಿಗೆ ವಿವಾಹ ಯೋಗ, ವಸ್ತ್ರ ಆಭರಣ ವ್ಯಾಪಾರಿಗಳಿಗೆ ಅಧಿಕ ಲಾಭ
Minimum Temperature: ಬೆಂಗಳೂರಿನಲ್ಲಿ ಶೀಘ್ರ 11 ಡಿಗ್ರಿ ತಾಪ?: 12 ವರ್ಷದಲ್ಲೇ ದಾಖಲೆ
Report: ಐಸಿಯು ಗಲೀಜು, ಟ್ಯಾಂಕ್‌ನಲ್ಲಿ ಪಾಚಿ: ಸರಕಾರಿ ಆಸ್ಪತ್ರೆಗಳ ದುಃಸ್ಥಿತಿ!
JDS: ಆಂತರಿಕ ಚುನಾವಣೆ ಮೂಲಕವೇ ರಾಜ್ಯಾಧ್ಯಕ್ಷರ ಆಯ್ಕೆ: ಎಚ್.ಡಿ.ಕುಮಾರಸ್ವಾಮಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.