Mallikarjun kharge; ಹೇಳಿಕೆಯಿಂದ ಗ್ಯಾರಂಟಿ ಚುನಾವಣೆಗಾಗಿ ಎನ್ನುವುದು ಸ್ಪಷ್ಟ : ಜೋಶಿ
ಮಹಾರಾಷ್ಟ್ರ, ಜಾರ್ಖಂಡ್ ಚುನಾವಣೆ ನಂತರ ಗ್ಯಾರಂಟಿ ರದ್ದು ಮಾಡಿ ಎನ್ನುವ ಮಾನಸಿಕತೆ..
Team Udayavani, Nov 1, 2024, 5:42 PM IST
ಹುಬ್ಬಳ್ಳಿ: ”ಚುನಾವಣೆ ದೃಷ್ಟಿಯಿಂದ ಗ್ಯಾರಂಟಿ ಕೊಡ್ತಾರೆ ಅನ್ನೋದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಮಾತಿಂದ ಸ್ಪಷ್ಟ ಆಗುತ್ತದೆ. ಮಹಾರಾಷ್ಟ್ರ ಹಾಗೂ ಜಾರ್ಖಂಡ್ ಚುನಾವಣೆ ನಂತರ ಗ್ಯಾರಂಟಿಗಳನ್ನು ಬೇಕಾದರೆ ರದ್ದು ಮಾಡಿ ಎನ್ನುವ ಮಾನಸಿಕತೆ ತೋರುತ್ತಿದೆ” ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಶುಕ್ರವಾರ (ನ1ರಂದು) ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್ ಪಕ್ಷ ಇಡೀ ದೇಶದಲ್ಲಿ ಸುಳ್ಳು ಆಶ್ವಾಸನೆ ಕೊಟ್ಟಿದೆ. ಇಂತಹ ಆಶ್ವಾಸನೆಗಳಿಂದ ಇಡೀ ರಾಜ್ಯವನ್ನ ದಿವಾಳಿಯತ್ತ ನೂಕುವ ಪ್ರಯತ್ನ ಮಾಡಿದೆ. ಚುನಾವಣೆ ವೇಳೆ ಜನರಿಗೆ ಮಂಕು ಬೂದಿ ಎರಚಿ, ನಂತರ ರದ್ದು ಮಾಡುವ ಮೂಲಕ ಮೋಸ ಮಾಡುತ್ತಿದೆ. ಐದು ಗ್ಯಾರಂಟಿಗಳನ್ನು ನಾವು ಪೂರೈಸಿದ್ದೇವೆ ಅಂತಾರೆ, ಎಲ್ಲಿ ಪೂರೈಸಿದ್ದಾರೆ? 2023-24ರಲ್ಲಿ ಪದವಿ ಮುಗಿಸಿದ ಯಾವ ಯುವಕರಿಗೆ ಯುವಶಕ್ತಿ ಬಂದಿದೆ. ಗೃಹಲಕ್ಷ್ಮಿ, ಶಕ್ತಿ ಯೋಜನೆ ಅಷ್ಟೇ ಆರಂಭ ಮಾಡಿದ್ದಾರೆ ಎಂದರು.
5 ಕೆಜಿ ಅಕ್ಕಿ ನಾವು ಕೊಡುತ್ತಿದ್ದೇವೆ. ಅನ್ನಭಾಗ್ಯ ಅಂತ ಇವರು ಬರೆದುಕೊಳ್ಳುತ್ತಿದ್ದಾರೆ. ಕಾಂಗ್ರೆಸ್ ಪಕ್ಷದಂತಹ ಕಳ್ಳರು ಜಗತ್ತಿನಲ್ಲಿ ಬುತ್ತಿ ಕಟ್ಟಿಕೊಂಡು ಹುಡುಕಾಡಿದರೂ ಸಿಗುವುದಿಲ್ಲ. ಬರ ಇರುವಂತಹ ಸಂದರ್ಭದಲ್ಲಿ ನಾವು ಅಕ್ಕಿ ಕೊಟ್ಟಿದ್ದೇವೆ. ಶಕ್ತಿ ಯೋಜನೆ ನೋಡಿದರೆ ಹೊಡೆದಾಡ್ತಾರೆ. ಜನರಿಗೆ ಬೇಕಾದಷ್ಟು ಬಸ್ ಗಳು ಇವರ ಬಳಿ ಇಲ್ಲ ಎಂದು ಲೇವಡಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇತ್ರಾವತಿ ನದಿಯಲ್ಲಿ ಗೋಮಾಂಸ ಪತ್ತೆ ಮತಾಂಧತೆ ತೋರಿಸುತ್ತದೆ: ಸಿ.ಟಿ. ರವಿ ಕಿಡಿ
Bidar: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮೊದಲು ಹೊಟೇಲ್ ನಲ್ಲಿ ಓಡಾಡಿದ ದೃಶ್ಯ ಸೆರೆ
Raichur: ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೊರಟ ಮುಸ್ಲಿಂ ವ್ಯಕ್ತಿ
ಮಗಳ ಮೇಲೆ ಎರಗಲು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ
ಗುತ್ತಿಗೆದಾರ ಸಚಿನ್ ಕೇಸ್: ಪ್ರಕರಣ ಮುಚ್ಚಿಹಾಕಲು ಸರ್ಕಾರದ ಯತ್ನ: ಸಹೋದರಿ ಆರೋಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.