ನಾಲೆಗೆ ಬಿದ್ದ ಬಸ್; ಬಾಲಕ ಸೇರಿ ಇಬ್ಬರು ಬಚಾವ್:30 ಶವಗಳು ಹೊರಕ್ಕೆ!
Team Udayavani, Nov 24, 2018, 1:02 PM IST
ಮಂಡ್ಯ: ಪಾಂಡವಪುರ ತಾಲೂಕಿನ ಕನಗನಮರಡಿ ಗ್ರಾಮದಲ್ಲಿ ಶನಿವಾರ ಮಧ್ಯಾಹ್ನ ಖಾಸಗಿ ಬಸ್ಸೊಂದು ನಾಲೆಗೆ ಉರುಳಿ ಬಿದ್ದು ಕನಿಷ್ಠ 30 ಮಂದಿ ಪ್ರಯಾಣಿಕರು ದಾರುಣವಾಗಿ ಸಾವನ್ನಪ್ಪಿದ್ದಾರೆ.
ಪಾಂಡವಪುರದಿಂದ ಮಂಡ್ಯ ಕಡೆಗೆ ತೆರಳುತ್ತಿದ್ದ ಬಸ್ ಮಧ್ಯಾಹ್ನ 12.15 ರ ವೇಳೆಗೆ ಚಾಲಕನ ನಿಯಂತ್ರಣ ತಪ್ಪಿನಾಲೆಗೆ ಉರುಳಿ ಘೋರ ದುರಂತ ಸಂಭವಿಸಿದೆ.
ಬಸ್ ಮಖಾಡೆ ಬಿದ್ದ ಪರಿಣಾಮ ಪ್ರಯಾಣಿಕರಿಗೆ ಬಾಗಿಲುಗಳಿಂದ ಹೊರ ಬರಲು ಸಾಧ್ಯವಾಗಲಿಲ್ಲ. ಸುಮಾರು 12 ಅಡಿಯಷ್ಟು ನೀರು ನಾಲೆಯಲ್ಲಿ ತುಂಬಿಕೊಂಡಿತ್ತು. ಹೆಚ್ಚಿನ ಪ್ರಯಾಣಿಕರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಬಸ್ ಬಿದ್ದ ವಿಚಾರ ತಿಳಿಯುತ್ತಿದ್ದಂತೆ ಸ್ಥಳೀಯರು ರಕ್ಷಣಾ ಕಾರ್ಯ ನಡೆಸಿದ್ದಾರೆ. ಕೆಲವರನ್ನು ಸ್ಥಳದಲ್ಲಿದ್ದವರು ಮೇಲಕ್ಕೆತ್ತಿದ್ದಾರೆ ಆದರೆ ಆ ಪೈಕಿ ಬಹುತೇಕರು ಪ್ರಾಣ ಕಳೆದುಕೊಂಡಿದ್ದಾರೆ.
ದುರಂತದಲ್ಲಿ ಓರ್ವ ಬಾಲಕ ಮತ್ತು ಯುವಕ ಮಾತ್ರ ಬದುಕುಳಿದಿದ್ದು, ಬಸ್‌ನಲ್ಲಿದ್ದ ಗಿರೀಶ್ ಎಂಬ ಯುವಕ ಬಸ್‌ನಿಂದ ಹೊರ ಬಂದು ಲೋಹಿತ್ ಎಂಬ ಬಾಲಕನನ್ನು ಸುರಕ್ಷಿತವಾಗಿ ಹೊರಗೆತ್ತಿದ್ದಾರೆ. 6 ನೇ ತರಗತಿ ವಿದ್ಯಾರ್ಥಿ ರೋಹಿತ್ ಎಂಬಾತನನ್ನು ಸುರಕ್ಷಿತವಾಗಿ ಮೇಲಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ.ಕಿಟಕಿ ಬದಿಯಲ್ಲಿದ್ದ ಬಾಲಕ ಬಸ್ ಬಿದ್ದೊಡನೆಯ ಹೊರ ಬಂದಿದ್ದ ಕಾರಣ ಬದುಕುಳಿದಿದ್ದಾನೆ ಎನ್ನಲಾಗಿದೆ.
ಚಾಲಕ ನಾಪತ್ತೆ
ಅವಘಡ ನಡೆದ ಬಳಿಕ ಚಾಲಕ ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ಪ್ರತ್ಯಕ್ಷ ದರ್ಶಿಗಳ ಪ್ರಕಾರ ಬಸ್ ನಾಲೆಗೆ ಬಿದ್ದೊಡನೆಯೇ ವ್ಯಕ್ತಿಯೊಬ್ಬ ಸ್ಥಳದಿಂದ ಪರಾರಿಯಾಗಿದ್ದ ಎನ್ನಲಾಗಿದೆ.
30 ಶವಗಳು ಹೊರಕ್ಕೆ
ಈಗಾಗಲೇ 30 ಶವಗಳನ್ನು ನಾಲೆಯಿಂದ ಹೊರ ತೆಗೆಯಲಾಗಿದ್ದು, ಸ್ಥಳದಲ್ಲಿ ಹೆಣಗಳ ರಾಶಿ ಕಂಡರೆ ಎಂಥಹವರೂ ಬೆಚ್ಚಿ ಬೀಳುವಂತಿದೆ. ಮೃತರ ಸಂಬಂಧಿಕರು ಸ್ಥಳಕ್ಕೆ ದೌಡಾಯಿಸಿದ್ದು ಆಕ್ರಂದನ ಮುಗಿಲು ಮುಟ್ಟಿದೆ.
ಮೃತರಲ್ಲಿ ಹೆಚ್ಚಿನವರು 11 ಮಹಿಳೆಯರು ಮತ್ತು 4 ಮಕ್ಕಳು ಸೇರಿದ್ದಾರೆ. ಬಸ್ಸನ್ನು ಕ್ರೇನ್ ಮೂಲಕ ಮೇಲಕ್ಕೆತ್ತಲಾಗುತ್ತಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ಎಲ್ಲಾ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.
ಸಿಎಂ ದಿಗ್ಭ್ರಮೆ
ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಘಟನೆಯ ಬಗ್ಗೆ ದಿಗ್ಭ್ರಮೆ ವ್ಯಕ್ತಪಡಿಸಿದ್ದು,ತನ್ನೆಲ್ಲಾ ಕೆಲಸಗಳನ್ನು ಬದಿಕಗೊತ್ತಿ ದುರಂತ ನಡೆದ ಸ್ಥಳಕ್ಕೆ ತೆರಳುತ್ತಿದ್ದಾರೆ.
ಅಧಿಕಾರಿಗಳಿಗೆ ಸೂಚನೆ
ದುರಂತ ನಡೆದಿರುವ ಹಿನ್ನಲೆಯಲ್ಲಿ ಅಧಿಕಾರಿಗಳಿಗೆ ಸಿಎಂ ಎಚ್‌ಡಿಕೆ ಅವರು ಕರೆ ಮಾಡಿ ಸೂಚನೆಗಳನ್ನು ನೀಡಿದ್ದಾರೆ.
ಅವಘಡಕ್ಕೆ ಕಾರಣ?
ಘೋರದುಂತಕ್ಕೆ ಕಾರಣ ಏನು ಎನ್ನುವುದೇ ನಿಗೂಢವಾಗಿದೆ. ಬಸ್ ಚಲಿಸುತ್ತಿದ್ದಾಗ ಯಾವುದೇ ವಾಹನ ಅಡ್ಡಬಂದಿಲ್ಲ.ರಸ್ತೆಯೂ ಸುಸ್ಥಿತಿಯಲ್ಲೆ ಇತ್ತು ಎಂದು ತಿಳಿದು ಬಂದಿದೆ. ತಡೆಗೋಡೆ ಇಲ್ಲದ ಕಾರಣ ಬಸ್ ಕಾಲುವೆಗೆ ಇಳಿದಿದೆ. ಸ್ಟಿಯರಿಂಗ್ ಲಾಕ್ ಆಗಿ ಅವಘಡ ಸಂಭವಿಸಿರುವ ಬಗ್ಗೆಯೂ ಶಂಕೆ ವ್ಯಕ್ತ ಪಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
HMPV: ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Chamarajanagara: ತರಗತಿಯಲ್ಲಿ ಕುಸಿದು ಬಿದ್ದು ಮೂರನೇ ತರಗತಿ ಬಾಲಕಿ ಸಾವು
HMP ವೈರಸ್: ಜನರು ಭಯಪಡುವ ಅಗತ್ಯವಿಲ್ಲ-ಮಾಸ್ಕ್ ಬಗ್ಗೆ ಸಚಿವ ಗುಂಡೂರಾವ್ ಹೇಳಿದ್ದೇನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Table Space: ಟೇಬಲ್ ಸ್ಪೇಸ್ ಸ್ಥಾಪಕ ಅಮಿತ್ ಬ್ಯಾನರ್ಜಿ ಹೃದಯಾಘಾತದಿಂದ ನಿಧನ
Delhi Polls: ದಿಲ್ಲಿಯ ಮಹಿಳಾ ಮತದಾರರ ಸೆಳೆಯಲು ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್
ನನ್ನ ಮಗಳ ಬಾಯ್‌ಫ್ರೆಂಡ್ ಫೋಟೋ ರಿವೀಲ್ ಮಾಡಿದರೆ 21 ಲಕ್ಷ ಬಹುಮಾನ: ಬಿಗ್ ಬಾಸ್‌ಗೆ ಸವಾಲು
Manipal KMC; ಮಧುಮೇಹಿ ಮಕ್ಕಳಿಗಾಗಿ ಶೈಕ್ಷಣಿಕ ಕಾರ್ಯಕ್ರಮ
Mahakumbh Mela: ಪ್ರಯಾಗ್ ರಾಜ್ ಚಲೋ-ಮಹಾಕುಂಭ ಮೇಳಕ್ಕೆ ಅಡ್ಡಿ: ಉ*ಗ್ರ ಪನ್ನು ಬೆದರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.