ಬೆಂ-ಮೈ ದಶಪಥ ರಸ್ತೆಯಲ್ಲಿ ನಡೆದ ರೋಚಕ ಅಪಘಾತ: ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ
Team Udayavani, Jul 13, 2023, 11:15 AM IST
ರಾಮನಗರ: ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಸಂಭವಿಸುತ್ತಿದ್ದ ಭೀಕರ ಅಪಘಾತವೊಂದು ಅದೃಷ್ಟವಶಾತ್ ತಪ್ಪಿದೆ. ಬೃಹತ್ ಕಂಟೈನರ್ ಲಾರಿ ಎಕ್ಸ್ ಪ್ರೆಸ್ ವೇನ ಒಂದು ಬದಿಯಿಂದ ಇನ್ನೊಂದು ಬದಿಗೆ ದಾಟಿ ಸರ್ವೀಸ್ ರಸ್ತೆಗೆ ನುಗ್ಗಿದೆಯಾದರೂ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಚನ್ನಪಟ್ಟಣ ತಾಲೂಕಿನ ಸಂಕಲಗೆರೆ ಗೇಟ್ ಸಮೀಪದ ಬೆಂ-ಮೈ ಹೆದ್ದಾರಿಯಲ್ಲಿ ಬುಧವಾರ ಮಧ್ಯಾಹ್ನದ ಸಮಯದಲ್ಲಿ ಈ ಭೀಕರ ಘಟನೆ ನಡೆದಿದ್ದು, ಈ ಸಮಯದಲ್ಲಿ ಹೆದ್ದಾರಿಯಲ್ಲಿ ಯಾವುದೇ ವಾಹನ ಸಂಚರಿಸದ ಪರಿಣಾಮ ಯಾವುದೇ ಅಪಾಯ ಸಂಭವಿಸಿಲ್ಲ.
ಮೈಸೂರು ಕಡೆಯಿಂದ ಬೆಂಗಳೂರಿನತ್ತ ತೆರಳುತ್ತಿದ್ದ ಬೃಹತ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಬೆಂಗಳೂರು ಕಡೆಯ ಎಕ್ಸ್ಪ್ರೆಸ್ ವೇ ದಾಟಿ ಮೈಸೂರು ಕಡೆಗೆ ಹೋಗುವ ರಸ್ತೆಯನ್ನು ಹಾಯ್ದು ಎಕ್ಸ್ ಪ್ರೆಸ್ ವೇನ ತಂತಿ ಬೇಲಿ ಮುರಿದುಕೊಂಡು ಸರ್ವೀಸ್ ರಸ್ತೆಗೆ ನುಗ್ಗಿದೆ. ಲಾರಿ ರಸ್ತೆ ದಾಟಿ ಬರುತ್ತಿರುವ ದೃಶ್ಯ ಸ್ಥಳೀಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.