ಬೈಕ್‌ ಏರಿದವರಿಗೆ ಬಂಧನ ಬಿಸಿ

Team Udayavani, Sep 7, 2017, 6:00 AM IST

170906kpn76.jpg

ಬೆಂಗಳೂರು: ಬಿಜೆಪಿ ಯುವ ಮೋರ್ಚಾ ಹಮ್ಮಿಕೊಂಡಿರುವ ಮಂಗಳೂರು ಚಲೋ ಹೋರಾಟಕ್ಕೆ ಮಂಗಳವಾರ ಬೆಂಗಳೂರು ಮತ್ತು ಹುಬ್ಬಳ್ಳಿಯಲ್ಲಿ ಆದ ಪರಿಸ್ಥಿತಿಯೇ ಬುಧವಾರ ರಾಜ್ಯದ ಇತೆರೆಡೆಗಳಲ್ಲೂ ಆಗಿದೆ. 

ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರಿನಲ್ಲಿ ಬೈಕ್‌ ರ್ಯಾಲಿ ತಡೆದ ಪೊಲೀಸರು ಬಿಜೆಪಿ ಮುಖಂಡರು ಸೇರಿದಂತೆ ಎರಡು ಸಾವಿರಕ್ಕೂ ಹೆಚ್ಚು ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಆದರೆ, ಪೊಲೀಸರು ಅನುಮತಿ ನಿರಾಕರಿಸಿದರೂ ಮಂಗಳೂರಿನಲ್ಲಿ ಗುರುವಾರ ರ್ಯಾಲಿ ನಡೆಸಲು ಬಿಜೆಪಿ ಮುಂದಾಗಿದ್ದು, ಇದರಿಂದ ಮತ್ತೆ ಸಂಘರ್ಷದ ವಾತಾವರಣ ಸೃಷ್ಟಿಯಾಗುವ ಸಾಧ್ಯತೆ ಇದೆ.

ಮಂಗಳೂರು ರ್ಯಾಲಿಗೆ ನಾವು ರಕ್ಷಣೆ ಕೇಳಿದ್ದೇವೆಯೇ ಹೊರತು ಅನುಮತಿ ಕೇಳಿಲ್ಲ. ಈಗಾಗಲೇ ನಿರ್ಧರಿಸಿದಂತೆ ಮಂಗಳೂರಿನ ಜ್ಯೋತಿ ಸರ್ಕಲ್‌ನಿಂದ ಬೈಕ್‌ ರ್ಯಾಲಿ ಮತ್ತು ಪಾದಯಾತ್ರೆ ನಡೆಸಿಯೇ ಸಿದ್ಧ. ಬಹಿರಂಗ ಸಭೆ ಜತೆಗೆ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ ಹೇಳಿದ್ದಾರೆ. ಅಲ್ಲದೆ, ಬೈಕ್‌ ರ್ಯಾಲಿ ತಡೆದ ಸರ್ಕಾರದ ವಿರುದ್ಧ ಇನ್ನಷ್ಟು ತೀವ್ರತರದ ಹೋರಾಟ ನಡೆಸುವ ಕುರಿತು ಗುರುವಾರ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಘೋಷಣೆ ಮಾಡುವುದಾಗಿ ತಿಳಿಸಿದ್ದಾರೆ.

ಅತ್ತ ಮಂಗಳೂರಿನಲ್ಲಿ ಬಿಜೆಪಿ ಬೈಕ್‌ ರ್ಯಾಲಿ ಮತ್ತು ಪಾದಯಾತ್ರೆ ತಡೆಯಲು ಪೊಲೀಸರು ಮುಂದಾಗಿದ್ದು, ಬಿಗಿ ಬಂದೋಬಸ್ತ್ ವ್ಯವಸ್ಥೆ ಕೈಗೊಳ್ಳಲಾಗಿದೆ. ರ್ಯಾಲಿ ನಡೆಸಲು ಮುಂದಾಗುವವರನ್ನು ಬಂಧಿಸಲು ಕೂಡ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಈ ಮಧ್ಯೆ ಬಹಿರಂಗ ಸಭೆಗೆ ಬಿಜೆಪಿ ಭಾರೀ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸಾವಿರಾರು ಸಂಖ್ಯೆಯಲ್ಲಿ ಜನರನ್ನು ಕರೆತರುವ ಪ್ರಯತ್ನವೂ ಆಗುತ್ತಿದೆ.

ಮುಂದುವರಿದ ಬಂಧನ ಪ್ರಕ್ರಿಯೆ: ಮಂಗಳೂರು ಚಲೋ ಬೈಕ್‌ ರ್ಯಾಲಿಗೆ ಮುಂದಾದವರ ಬಂಧನ ಪ್ರಕ್ರಿಯೆ ಮುಂದುವರಿದಿದೆ. ಬುಧವಾರ ಮೈಸೂರಿನಲ್ಲಿ ನಿಷೇದಾಜ್ಞೆ ನಡುವೆಯೂ ರ್ಯಾಲಿಗೆ ಮುಂದಾಗಿದ್ದ ರಾಜ್ಯ ಬಿಜೆಪಿ ಯುವಮೋರ್ಚಾ ಅಧ್ಯಕ್ಷರೂ ಆಗಿರುವ ಸಂಸದ ಪ್ರತಾಪ್‌ ಸಿಂಹ, ಮಾಜಿ ಸಚಿವ ಎಸ್‌.ಎ.ರಾಮದಾಸ್‌ ಸೇರಿದಂತೆ ಬಿಜೆಪಿಯ ನೂರಾರು ಮುಖಂಡರು, ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ಬಿಡುಗಡೆ ಮಾಡಿದ್ದಾರೆ. ಅದೇ ರೀತಿ ಶಿವಮೊಗ್ಗದಲ್ಲಿ ರ್ಯಾಲಿ ನಡೆಸಲು ಹೊರಟ ವಿಧಾನ ಪರಿಷತ್‌ ಪ್ರತಿಪಕ್ಷ ನಾಯಕ ಕೆ.ಎಸ್‌.ಈಶ್ವರಪ್ಪ, ಶಾಸಕ ಬಿ.ವೈ.ರಾಘವೇಂದ್ರ, ಚಿಕ್ಕಮಗಳೂರಿನಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಶಾಸಕ ಸಿ.ಟಿ.ರವಿ ಸೇರಿದಂತೆ ಸಾವಿರಾರು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ನಂತರ ಬಿಡುಗಡೆ ಮಾಡಿದರು.

ಬೈಕ್‌ ರ್ಯಾಲಿಗೆ ಪೊಲೀಸರು ಅನುಮತಿ ನಿರಾಕರಿಸಿದ್ದರಿಂದ ರಾಜ್ಯದ ವಿವಿಧೆಡೆಗಳಿಂದ ನೂರಾರು ಕಾರ್ಯಕರ್ತರು ಬೈಕ್‌ಗಳಲ್ಲಿ ಮಂಗಳೂರಿನತ್ತ ತೆರಳಲು ಪ್ರಯತ್ನಿಸಿದರು. ಆದರೂ ಅವರು ಜಿಲ್ಲಾ ಕೇಂದ್ರಗಳಿಂದ ಹೊರಹೋಗದಂತೆ ನಿರ್ಬಂಧಿಸಲಾಯಿತು. ಪೊಲೀಸರ ಕಣ್ತಪ್ಪಿಸಿ ಕೆಲವರು ದಕ್ಷಿಣ ಕನ್ನಡ ಜಿಲ್ಲೆಯ ಗಡಿಯತ್ತ ತೆರಳಿದರಾದರೂ ಗಡಿ ಭಾಗದ ತಾಲೂಕುಗಳಲ್ಲಿ ಅವರನ್ನು ಬಂಧಿಸಲಾಯಿತು.

ಮಂಗಳೂರು ಚಲೋ ಜತೆ ಧ್ವನಿಸಿದ ಗೌರಿ ಲಂಕೇಶ್‌ ಹತ್ಯೆ ಪ್ರಕರಣ
ರಾಜ್ಯದಲ್ಲಿ ಬಿಜೆಪಿ ಮತ್ತು ಹಿಂದೂ ಸಂಘಟನೆಗಳ ಕಾರ್ಯಕರ್ತರ ಹತ್ಯೆ ಪ್ರಕರಣಗಳಲ್ಲಿ ಶಾಮೀಲಾಗಿರುವ ಪಿಎಫ್ಐ ಮತ್ತು ಕೆಎಫ್ಡಿ ಸಂಘಟನೆಗಳನ್ನು ನಿಷೇಧಿಸಬೇಕು ಮತ್ತು ಇವುಗಳಿಗೆ ಕುಮ್ಮಕ್ಕು ನೀಡುತ್ತಿರುವ ಸಚಿವ ರಮಾನಾಥ್‌ ರೈ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ಮಂಗಳೂರು ಚಲೋ ಹೋರಾಟ ಹಮ್ಮಿಕೊಂಡಿರುವ ಬಿಜೆಪಿ, ಇದೀಗ ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆಯನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು ಎಂಬ ಒತ್ತಾಯವನ್ನೂ ಈ ಹೋರಾಟದಲ್ಲಿ ಸೇರಿಸಿಕೊಂಡಿದೆ.

ಗೌರಿ ಲಂಕೇಶ್‌ ಹತ್ಯೆ ಹಿಂದೆ ಹಿಂದೂಪರ ಸಂಘಟನೆಗಳ ಕೈವಾಡವಿದೆ ಎಂದು ಶಂಕಿಸುವ ಮೂಲಕ ಆಡಳಿತಾರೂಢ ಕಾಂಗ್ರೆಸ್‌ ಇದರಲ್ಲಿ ರಾಜಕೀಯ ಲಾಭ ಪಡೆಯುತ್ತಿದೆ ಎಂದು ಆರೋಪಿಸಿರುವ ಬಿಜೆಪಿ, ಪ್ರಕರಣದ ಸತ್ಯಾಸತ್ಯತೆ ಹೊರಬಂದು ಆರೋಪಿಗಳು ಶೀಘ್ರ ಬಂಧನಕ್ಕೊಳಗಾಗಬೇಕು. ಅದಕ್ಕಾಗಿ ಸಿಬಿಐ ತನಿಖೆ ನಡೆಸಬೇಕು ಎಂದು ಮಂಗಳೂರು ಚಲೋ ಹೋರಾಟದ ವೇಳೆ ಒತ್ತಾಯಿಸಲಿದೆ.

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.