ಮಂಗಳೂರು: ಐಟಿ ಕಚೇರಿ ಸ್ಥಳಾಂತರ ವಿರೋಧಿಸಿ ದ.ಕ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ
Team Udayavani, Sep 9, 2020, 11:24 AM IST
ಮಂಗಳೂರು: ಮಂಗಳೂರಿನ ಐಟಿ ಕಚೇರಿಯನ್ನು ಗೋವಾಕ್ಕೆ ಸ್ಥಳಾಂತರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಹಾಗೂ ರಾಜ್ಯ ಸರಕಾರದ ನಿಲುವನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ನಗರದ ಮಿನಿವಿಧಾನಸೌಧದ ಮುಂದೆ ಪ್ರತಿಭಟನೆ ನಡೆಸಲಾಗಿದೆ.
ಈ ವೇಳೆ ಮಾತನಾಡಿದ ಶಾಸಕ ಯು.ಟಿ ಖಾದರ್ ಬಿಜೆಪಿ ಸರಕಾರ ಅಧಿಕಾರಿಗಳ ವರ್ಗಾವಣೆಯಲ್ಲಿ ಕಾಲ ಕಳೆಯುತ್ತಿದೆ. ಒಂದೇ ಒಂದು ಯೋಜನೆಗಳನ್ನು ಜಿಲ್ಲೆಗೆ ತರುತ್ತಿಲ್ಲ. ಇರುವ ಕಚೇರಿ, ಸೌಲಭ್ಯಗಳ ಸ್ಥಳಾಂತರ, ಖಾಸಗೀಕರಣ ಮಾಡುವಲ್ಲಿ ನಿರತವಾಗಿದೆ. ಭಾವನಾತ್ಮಕ ವಿಚಾರಗಳಿಂದ ಜನರನ್ನು ಮಂತ್ರ ಮುಗ್ಧರನ್ನಾಗಿಸುತ್ತಿದೆ ಎಂದು ಕಿಡಿಕಾರಿದರು.
ಜಿಎಸ್ ಟಿ, ನೋಟು ಅಮಾನ್ಯೀಕರಣ ನಿಲುವುನಿಂದಾಗಿ ಈಗಾಗಲೇ ಜನರಿಗೆ ಅನ್ಯಾಯ ಆಗಿದೆ. ಈಗ ಐಟಿ ಕಚೇರಿ ಸ್ಥಳಾಂತರವು ನಾಲ್ಕು ಲಕ್ಷ ತೆರಿಗೆದಾರರಿಗೆ ಭಾರೀ ದೊಡ್ಡ ಆಘಾತ ನೀಡಿದೆ. ಸಂಸದರು ತಾನು ನಂಬರ್ ವನ್ ಹೇಳುತ್ತಾರೆ. ಆದರೆ ತನ್ನ ಸ್ವಂತ ನೆಲದಲ್ಲಿರುವ ಕಚೇರಿ ಸ್ಥಳಾಂತರವಾಗುತ್ತಿದ್ದರೂ ಧ್ವನಿ ಎತ್ತುತ್ತಿಲ್ಲ. ಸಂಸದರು ರಾಜೀನಾಮೆ ನೀಡಬೇಕು. ಐಟಿ ಕಚೇರಿ ಸ್ಥಳಾಂತರವನ್ನು ತತ್ ಕ್ಷಣ ಹಿಂಪಡೆಯಬೇಕು ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಒತ್ತಾಯಿಸಿದ್ದಾರೆ.
ಪ್ರತಿಭಟನೆಯಲ್ಲಿ ಮಾಜಿ ಶಾಸಕರಾದ ಐವನ್ ಡಿಸೋಜ, ಜೆ ಅರ್ ಲೋಬೊ, ಮಾಜಿ ಸಚಿವ ಅಭಯಚಂದ್ರ ಜೈನ್, ಹಾಗೂ ಜಿಲ್ಲೆಯ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಭಾಗಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.