ಮಂಗಳೂರು ಪ್ರಯಾಣ ಒಂದು ತಾಸು ಉಳಿತಾಯ


Team Udayavani, Jun 9, 2018, 11:57 AM IST

mangalore.jpg

ಮಂಗಳೂರು: ಶಿರಾಡಿ ಘಾಟ್‌ ಮೂಲಕ ಬೆಂಗಳೂರು-ಮಂಗಳೂರು ಮಧ್ಯೆ ಸಂಚರಿಸುವವರು ಇನ್ನು ಮುಂದೆ ಒಂದು ತಾಸು ಉಳಿತಾಯ ಮಾಡಬಹುದು. ಏಕೆಂದರೆ, ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಎರಡು ಹಂತದಲ್ಲಿ ಪಶ್ಚಿಮ ಘಟ್ಟದ ಶಿರಾಡಿ ಘಾಟ್‌ನಲ್ಲಿ ಬರುವ ಒಟ್ಟು 26 ಕಿ.ಮೀ ಮಾರ್ಗ ಇದೀಗ ಕಾಂಕ್ರೀಟ್‌ ರಸ್ತೆಯಾಗಿ ಮಾರ್ಪಟ್ಟಿದ್ದು, ಈ ಮಾರ್ಗದಲ್ಲಿ ಸಂಚರಿಸುವ ಪ್ರಯಾಣಿಕರು ಹಾಗೂ ವಾಹನ ಸವಾರರಿಗೆ ಬಹಳಷ್ಟು ಆರಾಮದಾಯಕವಾಗಲಿದೆ.

ಈ ಮೂಲಕ ಆಗಾಗ ರಸ್ತೆಯಲ್ಲಿ ಗುಂಡಿಗಳು ಬಿದ್ದು, ಅಲ್ಲಲ್ಲಿ ಘನ ವಾಹನಗಳು ಹಾಳಾಗಿ-ಅಪಘಾತಕ್ಕೀಡಾಗಿ, ಘಾಟಿಯುದ್ದಕ್ಕೂ ಸಾಲುಗಟ್ಟಿ ನಿತ್ಯ ವಾಹನಗಳು ನಿಂತು ಸಾಕಷ್ಟು ಕಿರಿಕಿರಿ ಅನುಭವಿಸುತ್ತಿದ್ದ ಪ್ರಯಾಣಿಕರು ಇನ್ನುಮುಂದೆ ಸರಾಗವಾಗಿ ಪ್ರಯಾಣಿಸಬಹುದು. ಇದರಿಂದ ಬೆಂಗಳೂರು-ಮಂಗಳೂರು ನಡುವೆ ಸಂಪರ್ಕ ಕಲ್ಪಿಸುವ ಶಿರಾಡಿ ಘಾಟಿ ರಸ್ತೆಯಲ್ಲಿ ಪ್ರಯಾಣ ಸುಖಕರವಾಗುವ ಜತೆಗೆ, ಪ್ರಯಾಣದ ಅವಧಿಯೂ ಕಡಿಮೆಯಾಗುವುದರಲ್ಲಿ ಅನುಮಾನವಿಲ್ಲ.

ಈ ಹಿಂದೆ ಇದ್ದ ಶಿರಾಡಿಯ 7 ಮೀಟರ್‌ ಅಗಲದ ಹೆದ್ದಾರಿಯನ್ನು ಇದೀಗ 8.5 ಮೀಟರ್‌ಗೆ ವಿಸ್ತರಿಸುವ ಜತೆಗೆ ಸಂಪೂರ್ಣ ಕಾಂಕ್ರೀಟ್‌ ರಸ್ತೆಯಾಗಿ ಮೇಲ್ದರ್ಜೆಗೆ ಏರಿಸಲಾಗಿದೆ. ಅತ್ಯಾಧುನಿಕ ತಂತ್ರಜ್ಞಾನ ಬಳಸಿ ಇಲ್ಲಿ ಕಾಂಕ್ರೀಟ್‌ ಕೆಲಸವನ್ನು ಮಾಡಲಾಗಿದೆ. ಇನ್ನುಮುಂದೆ ಮಳೆಗಾಲದಲ್ಲಿಯೂ ಈ ರಸ್ತೆ ಹಾಳಾಗುವ ಸಾಧ್ಯತೆ ತೀರಾ ಕಡಿಮೆಯಿದೆ.

ಇನ್ನು ಹೆದ್ದಾರಿಯ ಇಕ್ಕೆಲಗಳಲ್ಲೂ ಗಾರ್ಡ್‌ ರೈಲ್‌(ತಡೆಗೋಡೆ)ಅನ್ನು ಸುರಕ್ಷತೆ ದೃಷ್ಟಿಯಿಂದ ಅಳವಡಿಸಲಾಗುತ್ತಿದೆ. ಹಲವು ಅಪಾಯಕಾರಿ ತಿರುವುಗಳನ್ನು ತೆರವುಗೊಳಿಸಿ ಬಹುತೇಕ ಕಡೆಗಳಲ್ಲಿ ರಸ್ತೆಯನ್ನು ನೇರಗೊಳಿಸಲಾಗಿದೆ. ಇದರಿಂದ ಈ ಘಾಟಿಯಲ್ಲಿ ಮುಂದಿನ ದಿನಗಳಲ್ಲಿ ಅಪಘಾತಗಳ ಸಂಖ್ಯೆಯೂ ಕಡಿಮೆಯಾಗುವ ನಿರೀಕ್ಷೆಯಿದೆ.

154 ಕೋಟಿ ರೂ. ವೆಚ್ಚ: ಶಿರಾಡಿಯ ಪ್ರಥಮ ಹಂತದಲ್ಲಿ ಸುಮಾರು 80 ಕೋ.ರೂ.ವೆಚ್ಚದಲ್ಲಿ ಮಾರನಹಳ್ಳಿಯಿಂದ ಕೆಂಪುಹೊಳೆಯವರೆಗೆ ಸುಮಾರು 13 ಕಿ.ಮೀ.ವರೆಗೆ ಕಾಂಕ್ರೀಟ್‌ ರಸ್ತೆ ಕಾಮಗಾರಿಯನ್ನು ಕೈಗೊಂಡು ಮೇಲ್ದರ್ಜೆಗೇರಿಸಲಾಗಿತ್ತು. ಇದೀಗ ಎರಡನೇ ಹಂತದಲ್ಲಿ 12.38 ಕಿ.ಮೀ ಉದ್ದದ ಕೆಂಪುಹೊಳೆಯಿಂದ ಅಡ್ಡಹೊಳೆವರೆಗೆ 74 ಕೋ.ರೂ. ವೆಚ್ಚದಲ್ಲಿ ಕಾಂಕ್ರಿಟೀಕರಣ ಕಾಮಗಾರಿ ಪೂರ್ಣಗೊಂಡಿದೆ.

ಈ ಪೈಕಿ ಈ ರಸ್ತೆಯಲ್ಲಿ ಒಟ್ಟು 74 ಮೋರಿಗಳ ಗುರಿ ಇರಿಸಲಾಗಿದ್ದು, ಅದರಲ್ಲಿ ಮೂರು ಕಿರು ಸೇತುವೆಗಳ ಕೆಲಸ ಪ್ರಸ್ತುತ ಬಿರುಸಿನಿಂದ ನಡೆಯುತ್ತಿದೆ. ಈ ಸೇತುವೆಗಳ ಎರಡೂ ಭಾಗದ ಕೂಡು ರಸ್ತೆಗಳ ಕಾಂಕ್ರೀಟ್‌ ಕೆಲಸ ಸದ್ಯ ನಡೆಯುತ್ತಿದೆ. ಮುಂದಿನ ಒಂದು ವಾರದ ಒಳಗೆ ಇದು ಕೂಡ ಪೂರ್ಣಗೊಂಡು ಜುಲೈ ಮೊದಲ ವಾರದಲ್ಲಿ ಶಿರಾಡಿ ಸಂಚಾರಕ್ಕೆ ಲಭ್ಯವಾಗಬಹುದು ಎಂದು ಹೇಳಲಾಗುತ್ತಿದೆ.

12 ತಿಂಗಳು ಶಿರಾಡಿ ಬಂದ್‌: ಶಿರಾಡಿಯ ಮೊದಲ ಹಂತದ ಕಾಮಗಾರಿ ನಡೆದಿದ್ದು 2015ರಲ್ಲಿ. ಈ ಕಾಮಗಾರಿಗಾಗಿ ಅದೇ ವರ್ಷ ಜ.2ರಿಂದ ಶಿರಾಡಿಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಆದರೆ ಕಾಂಕ್ರಿಟ್‌ ಕಾಮಗಾರಿ ಆರಂಭವಾಗಿದ್ದು ಮಾತ್ರ ಎ.20ಕ್ಕೆ. ಬಳಿಕ ಆಗಸ್ಟ್‌ 9ರಂದು ಶಿರಾಡಿ ರಸ್ತೆ ಸಂಚಾರಕ್ಕೆ ಮುಕ್ತಗೊಂಡಿತ್ತು. ಈ ಬಾರಿಯ ಎರಡನೇ ಹಂತದ ಕಾಮಗಾರಿ ಆರಂಭಿಸಿದ್ದು 2018 ಜನವರಿ 20ರಂದು.

ಹಾಗಾಗಿ ಅಲ್ಲಿಂದ ಶಿರಾಡಿ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಈಗ ಕಾಮಗಾರಿ ಕೊನೆಯ ಹಂತದಲ್ಲಿದ್ದು ಬಹುತೇಕ ಜುಲೈ ಮೊದಲ ವಾರದಿಂದ ಶಿರಾಡಿ ಸಂಚಾರಕ್ಕೆ ಮುಕ್ತವಾಗಬಹುದು. ಹೀಗಾಗಿ ಎರಡು ಹಂತದಲ್ಲಿ ಶಿರಾಡಿ ಕಾಮಗಾರಿಯು ಒಟ್ಟು 12 ತಿಂಗಳಲ್ಲಿ ಪೂರ್ಣಗೊಳ್ಳುವಂತಾಗಿದೆ.

2ನೇ ಹಂತದ ಕಾಮಗಾರಿ ತಡವಾಗಿದ್ದು ಯಾಕೆ?: ಶಿರಾಡಿಯಲ್ಲಿ ಎರಡನೇ ಹಂತದ ಕಾಮಗಾರಿಯನ್ನು ಟೆಂಡರ್‌ ಪ್ರಕಾರ 85.28 ಕೋಟಿ ರೂ.ವೆಚ್ಚದಲ್ಲಿ 33.38 ಕಿ.ಮೀ.ವರೆಗೆ ನಡೆಸಬೇಕಿತ್ತು. ಇದರಲ್ಲಿ ಗುಳಗಳಲೆಯಿಂದ ಮಾರನಹಳ್ಳಿವರೆಗೆ 21ಕಿ.ಮೀ. ಡಾಮರೀಕರಣ ಮತ್ತು ಕೆಂಪುಹೊಳೆಯಿಂದ ಅಡ್ಡಹೊಳೆವರೆಗೆ 63.104 ಕೋಟಿ ರೂ.ಗಳಲ್ಲಿ 12.38 ಕಿ.ಮೀ. ಕಾಂಕ್ರಿಟ್‌ ಕಾಮಗಾರಿ ಎಂದು ಹೇಳಲಾಗಿತ್ತು.

7ಮೀ.ಅಗಲಕ್ಕೆ ಡಾಮರೀಕರಣ ಮತ್ತು 8.50 ಮೀ.ಅಗಲಕ್ಕೆ ಕಾಂಕ್ರಿಟ್‌ ಕಾಮಗಾರಿ ನಡೆಸಬೇಕಿತ್ತು. ಆದರೆ ಚೆನ್ನೈನ ಜಿವಿಆರ್‌ ಇನ್‌ಫ್ರಾ ಪ್ರಾಜೆಕ್ಟ್ ಗುತ್ತಿಗೆ ಸಂಸ್ಥೆಯು ನಿಗದಿತ ಅವಧಿ 2016 ಡಿಸೆಂಬರ್‌ನಲ್ಲಿ ಕಾಮಗಾರಿ ಆರಂಭಿಸಿರಲಿಲ್ಲ. ಕಾಮಗಾರಿಗೆ ಬೇಕಾದ ಅಗತ್ಯ ಉಪಕರಣಗಳನ್ನು ಸಾಕಷ್ಟು ಪ್ರಮಾಣದಲ್ಲಿ ಕ್ರೊಡೀಕರಿಸಿರಲಿಲ್ಲ.

ಕಾಂಕ್ರಿಟ್‌ ಕಾಮಗಾರಿಗೆ ಬೇಕಾದ ತಾಂತ್ರಿಕತೆಯನ್ನು ಸಕಾಲದಲ್ಲಿ ಹೊಂದಿಸುವಲ್ಲಿ ವಿಫ‌ಲವಾಗಿತ್ತು. ಫೆಬ್ರವರಿ ಕಳೆದರೂ ಕಾಮಗಾರಿ ಆರಂಭವಾಗುವ ಲಕ್ಷಣ ಗೋಚರಿಸಿರಲಿಲ್ಲ. ಈ ಕಾರಣಕ್ಕೆ ಆ ಗುತ್ತಿಗೆಯನ್ನು ರಾಷ್ಟ್ರೀಯ ಹೆ¨ªಾರಿ ಇಲಾಖೆ ರದ್ದುಪಡಿಸಿತ್ತು. ಬಳಿಕ ಹೊಸ ಗುತ್ತಿಗೆದಾರರ ಮೂಲಕ ಕಾಮಗಾರಿ ಕೈಗೆತ್ತಿಕೊಳ್ಳುವಂತಾಯಿತು.

ಶಿರಾಡಿ ಘಾಟ್‌ನಲ್ಲಿ ಎರಡನೇ ಹಂತದ ರಸ್ತೆ ಕಾಂಕ್ರೀಟಿಕರಣ ಕಾಮಗಾರಿ ಪೂರ್ಣಗೊಂಡಿದೆ. ಕಿರು ಸೇತುವೆ ಕಾಮಗಾರಿ ಕೊನೆಯ ಹಂತದಲ್ಲಿದೆ. ಹೀಗಾಗಿ ಮುಂದಿನ ತಿಂಗಳು ಮೊದಲ ವಾರದಲ್ಲಿ ಶಿರಾಡಿಯಲ್ಲಿ ವಾಹನ ಸಂಚಾರಕ್ಕೆ ಅವಕಾಶ ನೀಡಲಾಗುವುದು. ಅತ್ಯಂತ ಪರಿಪೂರ್ಣ ರೀತಿಯಲ್ಲಿ 26 ಕಿ.ಮೀ.ರಸ್ತೆಯನ್ನು ಮೇಲ್ದರ್ಜೆಗೇರಿಸಲಾಗಿದೆ.
-ನಳಿನ್‌ ಕುಮಾರ್‌ ಕಟೀಲು, ಸಂಸದರು

ಶಿರಾಡಿಯಲ್ಲಿ ಕಾಂಕ್ರೀಟ್‌ ಹಾಕಿದ್ದು ಹೇಗೆ?: ಶಿರಾಡಿ ಕಾಮಗಾರಿಯ ಗುತ್ತಿಗೆದಾರ ಸಂಸ್ಥೆ ಓಷಿಯನ್‌ ಕನ್‌ಸ್ಟ್ರಕ್ಷನ್‌ನ ಪ್ರಮುಖರು ತಿಳಿಸುವಂತೆ, ಶಿರಾಡಿಯ ಹಳೆ ರಸ್ತೆಯನ್ನು ಮೊದಲು ಅಗೆದು ರೋಲ್‌ ಮಾಡಲಾಗಿತ್ತು. ಅದರ ಮೇಲೆ ತೆಳ್ಳಗಿನ ಜಿಯೋ ಟೆಕ್ಸ್‌ಟೈಲ್‌ ಎಂಬ ಬಟ್ಟೆ ಮಾದರಿಯ ಪದರವನ್ನು ಹಾಕಿ, ಅದರ ಮೇಲೆ 15 ಸೆ.ಮೀ. ದಪ್ಪದ ಜೆಲ್ಲಿಕಲ್ಲು ಪದರ ಹಾಕಲಾಗಿತ್ತು.

ರಸ್ತೆ ಮೇಲೆ ಬೀಳುವ ನೀರು ಸೋಸಿ ಕೆಳಗಿಳಿದು ಪದರದ ಮೂಲಕ ಹಾದು ಹೋಗಿ ಇಕ್ಕೆಲಗಳಲ್ಲಿ ಚರಂಡಿಗೆ ಹೋಗಬೇಕು ಎನ್ನುವುದು ಇದರ ಹಿಂದಿನ ತಂತ್ರಜ್ಞಾನವಾಗಿತ್ತು. ಬಳಿಕ, ಅದರ ಮೇಲೆ “ಡ್ರೈಲೀನ್‌ ಕಾಂಕ್ರೀಟ್‌’ ಎಂಬ ದಪ್ಪ ಕಾಂಕ್ರೀಟ್‌ ಪದರವನ್ನು 15 ಸೆಂ.ಮೀ ದಪ್ಪದಲ್ಲಿ ಹಾಕಲಾಯಿತು. ಇದು ಗಟ್ಟಿಯಾದ ಬಳಿಕ ಅದರ ಮೇಲೆ 30 ಸೆ.ಮೀ ದಪ್ಪದಲ್ಲಿ ಪೇವ್‌ಮೆಂಟ್‌ ಕ್ವಾಲಿಟಿ ಕಾಂಕ್ರೀಟ್‌ ಪದರವನ್ನು “ಸ್ಪಿಪ್‌ಫಾರಂ ಪೇವರ್‌ ಮಷಿನ್‌’ ಬಳಸಿ ಅಳವಡಿಸಲಾಯಿತು.

ಈ ಮಧ್ಯೆ ಎರಡು ಸ್ಲಾಬ್‌ಗಳ ಮಧ್ಯೆ ಸಂಪರ್ಕ ಏರ್ಪಡಿಸುವ ಡೊವೆಲ್‌ ಬಾರ್‌ ಮತ್ತು ಟೈ ಬಾರ್‌ ಎಂಬ ಕಬ್ಬಿಣದ ತುಂಡುಗಳನ್ನು ಸ್ವಯಂಚಾಲಿತವಾಗಿ ಈ ಮಷಿನ್‌ ಮೂಲಕ ಅಳವಡಿಸಲಾಯಿತು. ಪೇವರ್‌ ಮೆಷಿನ್‌ ಕಾಂಕ್ರೀಟ್‌ ಹಾಕಿದಂತೆ, ಅದರ ಹಿಂದೆ ಯಂತ್ರವು ಕಾರ್ಯ ನಿರ್ವಹಿಸುತ್ತದೆ. ಕಾಂಕ್ರೀಟ್‌ ಬದಿ ಮತ್ತು ಮೇಲ್ಭಾಗಕ್ಕೆ ತೆಳುವಾದ ಕ್ಯೂರಿಂಗ್‌ ದ್ರಾವಣವೊಂದನ್ನು ಚಿಮುಕಿಸಲಾಯಿತು.  

ಈ ಮೂಲಕ ಕಾಂಕ್ರೀಟ್‌ನೊಳಗಿರುವ ನೀರಿನ ಮಿಶ್ರಣ ಹೊರಗೆ ಆವಿಯಾಗದೆ ಒಳಗೇ ಇದ್ದು ಬೇಗ ಕ್ಯೂರಿಂಗ್‌ ಸುಲಭವಾಯಿತು. ಜತೆಗೆ ಯಂತ್ರವು ತನ್ನ ದೊರಗು ಬ್ರಶ್‌ ರಚನೆಯ ಮೂಲಕ ಮೇಲ್ಭಾಗದಲ್ಲಿ ಕೆರೆಯುತ್ತಾ ಹೋಗುತ್ತದೆ. ಇದರಿಂದ ಮೇಲ್ಪದರ ದೊರಗು ಆಗುತ್ತದೆ. ಹೀಗಾಗಿ ಕಾಂಕ್ರೀಟ್‌ ರಸ್ತೆಯಲ್ಲಿ ಜಾರುವುದಿಲ್ಲ ಎನ್ನುತ್ತಾರೆ.

ಟಾಪ್ ನ್ಯೂಸ್

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

owaisi (2)

Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು

farukh abdulla

Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

1-jmm

INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

19-cm

Waqf: ರೈತರಿಗೆ ನೀಡಿರುವ ನೋಟಿಸ್‌ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ

Waqf Issue: BJP protest against the Congress government across the state on November 4

Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ

11-highcourt

High Court: ಕ್ರಿಮಿನಲ್‌ ಕೇಸ್‌ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್‌

10-

Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

attack

Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ

1-reeee

Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.