ಸುಲಲಿತ ಜೀವನ ಸೂಚ್ಯಂಕ ಹೊಂದಿದ ದೇಶದ ನಗರಗಳ ಯಾದಿ : ಮಂಗಳೂರಿಗೆ 20ನೇ ಸ್ಥಾನ


Team Udayavani, Mar 4, 2021, 11:55 PM IST

Untitled-1

ಮಂಗಳೂರು: ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ 2020ನೇ ಸಾಲಿನ ಸುಲಲಿತ  ಜೀವನ ಸೂಚ್ಯಂಕ ಹೊಂದಿರುವ ನಗರಗಳ ಪಟ್ಟಿಯಲ್ಲಿ ಮಂಗಳೂರು 20ನೇ ಸ್ಥಾನ ಗಳಿಸಿದ್ದು, ಪುರಸಭೆಯ ಕಾರ್ಯಕ್ಷಮತೆ ಸೂಚ್ಯಂಕದಲ್ಲಿ  42ನೇ ಸ್ಥಾನ ಪಡೆದಿದೆ.

10 ಲಕ್ಷ ಜನಸಂಖ್ಯೆಯೊಳಗಿನ ನಗರಗಳ ಈ ಸ್ಪರ್ಧೆಯಲ್ಲಿ ಮಂಗಳೂರು ಸ್ಪರ್ಧಿಸಿತ್ತು. ಗುರುವಾರ ವೀಡಿಯೋ ಕಾನ್ಫರೆನ್ಸ್‌ ಮೂಲಕ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಹರದೀಪ್‌ ಸಿಂಗ್‌ ಪುರಿ ಅವರು ಫಲಿತಾಂಶ ಪ್ರಕಟಿಸಿದರು.

ದೇಶದ ಸ್ಮಾರ್ಟ್‌ಸಿಟಿ ಮಿಷನ್‌ ನಗರಗಳು ಪ್ರಮುಖ ಮೂಲ ಸೌಕರ್ಯ ಒದಗಿಸುವ, ನಾಗರಿಕರಿಗೆ ಸುಲಲಿತ ಜೀವನಮಟ್ಟ ನೀಡುವ ಸ್ವತ್ಛ ಮತ್ತು ಸುಸ್ಥಿರ ಪರಿಸರ ಮತ್ತು ಉತ್ತಮ ಪರಿಹಾರಗಳಿಗೆ ಸಂಬಂಧಿಸಿ ಉತ್ತೇಜಿಸುವ ದೃಷ್ಟಿಯಿಂದ ಈ ಸಮೀಕ್ಷೆ ನಡೆಸಲಾಗುತ್ತದೆ.

ಸಮೀಕ್ಷೆ  ಆನ್‌ಲೈನ್‌ ಮೂಲಕ 2020ರ ಫೆ. 1ರಿಂದ ಆರಂಭವಾಗಿ, ಫೆ. 29ರ ವರೆಗೆ ನಡೆದಿತ್ತು. ನಗರದಲ್ಲಿನ ಕುಡಿಯುವ ನೀರು, ರಸ್ತೆ, ಶಿಕ್ಷಣ, ಸಾರಿಗೆ ವ್ಯವಸ್ಥೆ, ಒಳಚರಂಡಿ ಸಹಿತ ಒಟ್ಟು ಮೂಲ ಸೌಕರ್ಯಗಳ ಬಗ್ಗೆ 22 ಪ್ರಶ್ನೆಗಳನ್ನು ಕೇಳಲಾಗಿತ್ತು.

ಮಂಗಳೂರು ಪಡೆದ ಅಂಕ

ವಾಸಯೋಗ್ಯ ನಗರ                              53.59

ಜೀವನ ಗುಣಮಟ್ಟ                               54.78

ಆರ್ಥಿಕ ಸಾಮರ್ಥ್ಯ                              11.96

ಸುಸ್ಥಿರತೆ                                            50.31

ಸಾರ್ವಜನಿಕರ ಸಹಭಾಗಿತ್ವ                 76.40

ಪುರಭೆಯ ಕಾರ್ಯಕ್ಷಮತೆ                    38.16

ಸೇವೆ                                                  52.61

ಹಣಕಾಸು ವಿಭಾಗ                              56.58

ತಾಂತ್ರಿಕತೆ                                         18.70

ಯೋಜನೆ                                            15.67

ಆಡಳಿತ                                              31.04

 

ಹೊಸದಿಲ್ಲಿಯಿಂದ ವೀಡಿಯೋ ಕಾನ್ಫರೆನ್ಸ್‌ ಮೂಲಕ ಸಚಿವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಮಂಗಳೂರು ಮಹಾನಗರ ಪಾಲಿಕೆ ಮಂಗಳಾ ಸಭಾಂಗಣದಲ್ಲಿ ಇದರ ವೀಕ್ಷಣೆಗೆ ಅವಕಾಶ ಮಾಡಲಾಗಿತ್ತು. ಮೇಯರ್‌ ಪ್ರೇಮಾನಂದ ಶೆಟ್ಟಿ, ಉಪಮೇಯರ್‌ ಸುಮಂಗಲಾ ರಾವ್‌, ಸ್ಮಾರ್ಟ್‌ ಸಿಟಿ ಎಂಡಿ ಪ್ರಶಾಂತ್‌ ಕುಮಾರ್‌ ಮಿಶ್ರಾ, ಮನಪಾ ಸದಸ್ಯ ಸುಧೀರ್‌ ಶೆಟ್ಟಿ ಕಣ್ಣೂರು, ಸ್ಮಾರ್ಟ್‌ಸಿಟಿ ಅಧಿಕಾರಿಗಳು ಉಪಸ್ಥಿತರಿದ್ದರು.

6.5 ಸಾವಿರಕ್ಕೂ ಮಿಕ್ಕಿ ನಾಗರಿಕರು ಭಾಗಿ :

ನಗರದ 6,500ಕ್ಕೂ ಅಧಿಕ ನಾಗರಿಕರು ಸಮೀಕ್ಷೆಯಲ್ಲಿ ಪಾಲ್ಗೊಂಡಿದ್ದರು. ಬೆಂಗಳೂರು, ತುಮಕೂರು, ಹುಬ್ಬಳ್ಳಿ-ಧಾರವಾಡ, ದಾವಣಗೆರೆ, ಬೆಳಗಾವಿ, ತುಮಕೂರು, ಶಿವಮೊಗ್ಗದಲ್ಲಿಯೂ ಇದೇ ರೀತಿಯ ಸಮೀಕ್ಷೆ ನಡೆದಿತ್ತು.

ಬೆಂಗಳೂರು ನಂ.1 :

ಹೊಸದಿಲ್ಲಿ: ಕೇಂದ್ರ ನಗರಾಭಿವೃದ್ಧಿ ಸಚಿವಾಲಯವು ಬಿಡುಗಡೆ ಮಾಡಿರುವ ಸುಲಲಿತ ಜೀವನ ಸೂಚ್ಯಂಕದ ಪಟ್ಟಿಯಲ್ಲಿ ಬೆಂಗಳೂರು ಮೊದಲ ಸ್ಥಾನ ಪಡೆದಿದೆ. 10 ಲಕ್ಷಕ್ಕಿಂತ ಹೆಚ್ಚು ಜನಸಂಖ್ಯೆ ಇರುವ ನಗರಗಳ ಪೈಕಿ ಅದು ಮೊದಲ ಸ್ಥಾನ ಪಡೆದಿದ್ದರೆ,  ಹುಬ್ಬಳ್ಳಿ-ಧಾರವಾಡ 37ನೇ ಸ್ಥಾನ ಗಳಿಸಿದೆ.

10 ಲಕ್ಷಕ್ಕಿಂತ ಕಡಿಮೆ ಜನಸಂಖ್ಯೆ ಇರುವ ನಗರಗಳ ಪಟ್ಟಿಯಲ್ಲಿ ದಾವಣಗೆರೆ 9ನೇ ಸ್ಥಾನ ಪಡೆದುಕೊಂಡಿದೆ. ಈ ಪಟ್ಟಿಯಲ್ಲಿ ಶಿಮ್ಲಾಕ್ಕೆ ಮೊದಲ ಸ್ಥಾನ ಸಿಕ್ಕಿದೆ.

ಕೇಂದ್ರ ನಗರಾಭಿವೃದ್ಧಿ ಸಚಿವಾಲಯ ಬಿಡುಗಡೆ ಮಾಡಿರುವ ಅಂಕಿ ಅಂಶಗಳ ಪ್ರಕಾರ ಸ್ಮಾರ್ಟ್‌ ಸಿಟಿ ಮಿಶನ್‌ನಡಿಯ ಒಟ್ಟು 111 ನಗರಗಳು ಈ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದವು. ಒಟ್ಟು 15 ಅಂಶಗಳನ್ನು ಮುಂದಿಟ್ಟುಕೊಂಡು ಮೌಲ್ಯಮಾಪನ ಮಾಡಲಾಗಿದೆ. ಆದರೆ ಪಾಲಿಕೆಗಳ ಲೆಕ್ಕಾಚಾರದಲ್ಲಿ ಬಿಬಿಎಂಪಿ 31ನೇ ಸ್ಥಾನ ಗಳಿಸಿದೆ.

ಟಾಪ್‌ 5 ನಗರಗಳು :

ನಗರ                          ಅಂಕ

  1. ಬೆಂಗಳೂರು 66.70
  2. ಪುಣೆ     66.27
  3. ಅಹ್ಮದಾಬಾದ್‌ 64.87
  4. ಚೆನ್ನೈ 62.61
  5. ಸೂರತ್‌ 61.73
  • 10 ಲಕ್ಷಕ್ಕಿಂತ ಹೆಚ್ಚು ಜನಸಂಖ್ಯೆ ಇರುವ ನಗರಗಳಲ್ಲಿ ಬೆಂಗಳೂರು ಟಾಪ್‌
  • ಹುಬ್ಬಳ್ಳಿ-ಧಾರವಾಡ ಅವಳಿ ನಗರಕ್ಕೆ 37ನೇ ಸ್ಥಾನ
  • 10 ಲಕ್ಷಕ್ಕಿಂತ ಕಡಿಮೆ ಜನಸಂಖ್ಯೆ ಇರುವ ನಗರಗಳ ಪಟ್ಟಿಯಲ್ಲಿ ದಾವಣಗೆರೆಗೆ 9ನೇ ಸ್ಥಾನ

ಜೀವನ ಸೂಚ್ಯಂಕ ಮತ್ತು ಪುರಸಭೆಯ ಕಾರ್ಯಕ್ಷಮತೆ ವಿಭಾಗ ಫಲಿತಾಂಶದಲ್ಲಿ ಮಂಗಳೂರು ನಗರ ಕ್ರಮಬದ್ಧವಾಗಿ 20 ಮತ್ತು 42ನೇ ಸ್ಥಾನ ಗಿಟ್ಟಿಸಿದೆ. ಸೂಚ್ಯಂಕ ನಿರ್ಧರಿಸಲು ಕಳೆದ ವರ್ಷ ಸರ್ವೇ ನಡೆದಿತ್ತು. ಯಾವುದೇ ನಗರ ರ್‍ಯಾಂಕ್‌ ಪಟ್ಟಿಯಲ್ಲಿ ಮೇಲೇರಲು ಸಾರ್ವಜನಿಕರ ಪಾಲ್ಗೊಳ್ಳುವಿಕೆ ಅತೀ ಮುಖ್ಯ. ಮುಂದೆಯೂ ಈ ರೀತಿಯ ಸರ್ವೇ ನಡೆಯಲಿದ್ದು, ನಗರವಾಸಿಗಳ ಪಾಲ್ಗೊಳ್ಳುವಿಕೆಯಿಂದ ಹೆಚ್ಚಿನ ರ್‍ಯಾಂಕ್‌ ಗಳಿಸಲು ಸಾಧ್ಯ. ಬೆಂಗಳೂರು ನಗರದಲ್ಲಿ ಯಾವ ವಿಚಾರವನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗಿದೆ ಎಂಬುದನ್ನು ಪರಿಶೀಲಿಸಿ ಅದನ್ನು ಇಲ್ಲಿಯೂ ಪರಿಗಣನೆಗೆ ತೆಗೆದುಕೊಳ್ಳುತ್ತೇವೆ.-ಪ್ರೇಮಾನಂದ ಶೆಟ್ಟಿ,  ಮಂಗಳೂರು ಮೇಯರ್‌

ಟಾಪ್ ನ್ಯೂಸ್

indian-flag

Republic Day: ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ

ISRO 2

ಉಪಗ್ರಹ ಜೋಡಣೆ: ತಾಂತ್ರಿಕ ಸಮಸ್ಯೆ ನಿವಾರಿಸಿದ ಇಸ್ರೋ

PM Mod

ಜ. 13ಕ್ಕೆ ಪ್ರಧಾನಿಯಿಂದ ಕಾಶ್ಮೀರದ ಜೆಡ್‌ ಮೋರ್‌ ಸುರಂಗ ಉದ್ಘಾಟನೆ?

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

kejriwal-2

Distribution of money ಆರೋಪ: ಬಿಜೆಪಿ ಅಭ್ಯರ್ಥಿ ಸ್ಪರ್ಧೆ ನಿರ್ಬಂಧಕ್ಕೆ ಕೇಜ್ರಿ ಮನವಿ

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka Govt.: ಅನರ್ಹ “ಬಿಪಿಎಲ್‌’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

Karnataka Govt.: ಅನರ್ಹ “ಬಿಪಿಎಲ್‌’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ

ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ

“ಕಾಂಗ್ರೆಸ್‌ನಲ್ಲಿ ದಲಿತ ಸಚಿವರಿಗೆ ಊಟದ ಸ್ವಾತಂತ್ರ್ಯವೂ ಇಲ್ಲ’

“ಕಾಂಗ್ರೆಸ್‌ನಲ್ಲಿ ದಲಿತ ಸಚಿವರಿಗೆ ಊಟದ ಸ್ವಾತಂತ್ರ್ಯವೂ ಇಲ್ಲ’

BJP: ಭಿನ್ನರನ್ನು ನಿಯಂತ್ರಿಸದಿದ್ದರೆ ಕಷ್ಟ: ಎಸ್‌.ಟಿ. ಸೋಮಶೇಖರ್‌

BJP: ಭಿನ್ನರನ್ನು ನಿಯಂತ್ರಿಸದಿದ್ದರೆ ಕಷ್ಟ: ಎಸ್‌.ಟಿ. ಸೋಮಶೇಖರ್‌

ಸರಕಾರ ಉತ್ತರಿಸಬೇಕಾದ ಪ್ರಶ್ನೆಗಳಿವೆ: ಬಿ.ಎಲ್‌. ಸಂತೋಷ್‌

Karnataka: ಸರಕಾರ ಉತ್ತರಿಸಬೇಕಾದ ಪ್ರಶ್ನೆಗಳಿವೆ: ಬಿ.ಎಲ್‌. ಸಂತೋಷ್‌

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

robbers

Pakistan; ಡಕಾಯಿತರಿಂದ 3 ಹಿಂದೂ ಯುವಕರ ಅಪಹರಣ

indian-flag

Republic Day: ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ

naksal (2)

ಸುಕ್ಮಾ ಎನ್‌ಕೌಂಟರ್‌: ಮೂವರು ನಕ್ಸಲರ ಹ*ತ್ಯೆ

ISRO 2

ಉಪಗ್ರಹ ಜೋಡಣೆ: ತಾಂತ್ರಿಕ ಸಮಸ್ಯೆ ನಿವಾರಿಸಿದ ಇಸ್ರೋ

PM Mod

ಜ. 13ಕ್ಕೆ ಪ್ರಧಾನಿಯಿಂದ ಕಾಶ್ಮೀರದ ಜೆಡ್‌ ಮೋರ್‌ ಸುರಂಗ ಉದ್ಘಾಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.