ಮಂಕಾದ ಮಂಡ್ಯ ಕಾಂಗ್ರೆಸ್
Team Udayavani, Nov 26, 2018, 12:56 PM IST
ಬೆಂಗಳೂರು: ಅಂಬರೀಶ್ ಅಕಾಲಿಕ ನಿಧನ ರಾಜ್ಯ ಕಾಂಗ್ರೆಸ್‌ಗೆ ಹಿನ್ನಡೆಯಾಗಬಹುದು ಎಂದು ವಿಶ್ಲೇಷಿಸಲಾಗುತ್ತಿದೆ. ಅದರಲ್ಲೂ ವಿಶೇಷವಾಗಿ ಮಂಡ್ಯ ಜಿಲ್ಲೆಯಲ್ಲಿ ಸಾಕಷ್ಟು ಹಿನ್ನಡೆಗೆ ಕಾರಣವಾಗುವ ಸಾಧ್ಯತೆ ಇದೆ.
ಚಿತ್ರರಂಗದ ಹಾಗೆಯೇ ರಾಜಕೀಯದಲ್ಲೂ ಉನ್ನತ ಹುದ್ದೆಗೇರಬೇಕೆಂಬ ಮಹತ್ವಾಕಾಂಕ್ಷೆ ಹೊಂದಿದ್ದ ಅಂಬರೀಶ್, ಇತ್ತೀಚಿನ ರಾಜಕೀಯದಲ್ಲಿನ ಬೆಳವಣಿಗೆಗಳಿಂದ ಬೇಸರಗೊಂಡು ತಟಸ್ಥರಾಗಿ ಉಳಿದಿದ್ದರು. ಆದರೆ, ರಾಜಕಾರಣದಲ್ಲಿ ಅವರ ತಾರಾ ವರ್ಚಸ್ಸು ಸಾಕಷ್ಟು ಕೆಲಸ ಮಾಡುತ್ತಿತ್ತು. ಅದರ ಪರಿಣಾಮ 2018ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಮಂಡ್ಯದಲ್ಲಿ ದೊರೆತ ಫಲಿತಾಂಶವೇ ಸಾಕ್ಷಿ ಎನ್ನುತ್ತಾರೆ ಮುಖಂಡರು.
ಹಳೇ ಮೈಸೂರು ಭಾಗದಲ್ಲಿ ವಿಶೇಷವಾಗಿ ಮಂಡ್ಯ ಜಿಲ್ಲೆಯಲ್ಲಿ ಅಂಬರೀಶ್ ಪ್ರಭಾವ ಅರಿತಿದ್ದ ಕಾಂಗ್ರೆಸ್ ಪಕ್ಷದ ನಾಯಕರು ಕೊನೆಯ ಗಳಿಗೆವರೆಗೂ ಅಂಬರೀಶ್ ಹೆಸರಿನಲ್ಲೇ ಮಂಡ್ಯ ವಿಧಾನಸಭಾ ಟಿಕೆಟ್ ಮೀಸಲಿಟ್ಟಿದ್ದರು. ಆದರೆ, ಇದನ್ನು ಅಂಬರೀಶ್ ತಿರಸ್ಕರಿಸುವ ಮೂಲಕ ಮಂಡ್ಯದಲ್ಲಿ ಕಾಂಗ್ರೆಸ್ ವಿರುದ್ಧ ತಮ್ಮ ಸಿಟ್ಟು ಹೊರ ಹಾಕಿದ್ದನ್ನು ಸ್ಮರಿಸಬಹುದು.
ಮಂಕಾದ ಮಂಡ್ಯ ಕಾಂಗ್ರೆಸ್: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಹಾಗೂ ಮಾಜಿ ಸಂಸದ ಜಿ. ಮಾದೇಗೌಡ ನಂತರ ಮಂಡ್ಯ ಕಾಂಗ್ರೆಸ್‌ನಲ್ಲಿ ಅಂಬರೀಶ್ ತಮ್ಮದೇ ಆದ ವರ್ಚಸ್ಸು ಬೆಳೆಸಿಕೊಂಡಿದ್ದರು. ಜನತಾದಳದಿಂದ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದರೂ ಎಸ್.ಎಂ.ಕೃಷ್ಣ ಅವರ ವಿರುದ್ಧ ದಿಕ್ಕಿನಲ್ಲಿ ರಾಜಕಾರಣ ಮಾಡಿ, ಜಿಲ್ಲೆಯನ್ನು ತಮ್ಮ ಹಿಡಿತಕ್ಕೆ ತೆಗೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದರು. ಈಗ ಅಂಬರೀಶ್ ಅವರ ಅಕಾಲಿಕ ನಿಧನದಿಂದ ಜಿಲ್ಲೆಯಲ್ಲಿ ಕಾಂಗ್ರೆಸ್‌ಗೆ ಪಕ್ಷವನ್ನು ಮುನ್ನಡೆಸುವಂತಹ ನಾಯಕರ ಕೊರತೆ ಇದೆ ಎನ್ನಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!
C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ
C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.