JDS ಅನೇಕ ಶಾಸಕರು ಪಕ್ಷ ತೊರೆಯಲು ಸಿದ್ಧರಾಗಿದ್ದರು..: ಸಿಎಂ ಸಿದ್ದರಾಮಯ್ಯ
ದೇವೇಗೌಡರು ಮುಂದಿನ ಜನ್ಮದಲ್ಲಿ ಮುಸಲ್ಮಾನನಾಗಿ ಹುಟ್ಟಲು ಇಷ್ಟಪಡುತ್ತೇನೆ ಎಂದಿದ್ದರು..
Team Udayavani, Feb 18, 2024, 9:48 PM IST
ಮಂಡ್ಯ: ಜೆಡಿಎಸ್ ನ ಅನೇಕ ಶಾಸಕರು ಪಕ್ಷ ತೊರೆಯಲು ಸಿದ್ಧರಾಗಿದ್ದ ಕಾರಣ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಬಿಜೆಪಿ ನಡುವೆ ಮೈತ್ರಿ ಮಾಡಿಕೊಳ್ಳುವ ಅನಿವಾರ್ಯತೆಗೆ ಸಿಲುಕಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಹೇಳಿದ್ದಾರೆ.
ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿ, ”2018 ರಲ್ಲಿ ಜೆಡಿಎಸ್ 37 ಸ್ಥಾನಗಳನ್ನು ಪಡೆದಿತ್ತು ಆದರೆ 2023 ರ ವಿಧಾನಸಭಾ ಚುನಾವಣೆಯಲ್ಲಿ ಕೇವಲ 19 ಸ್ಥಾನಗಳನ್ನು ಗೆದ್ದಿದ್ದು 18 ಸ್ಥಾನಗಳನ್ನು ಕಳೆದುಕೊಂಡಿದೆ. ಶೂನ್ಯ ಆಗದಂತೆ ತಡೆಯಲು ಭಯದಿಂದ ಜೆಡಿಎಸ್ ನಾಯಕರು ಮೈತ್ರಿ ನಾಟಕ ಆಡಿದ್ದಾರೆ”ಎಂದರು.
”ದೇವೇಗೌಡರು ಮುಂದಿನ ಜನ್ಮದಲ್ಲಿ ಮುಸಲ್ಮಾನನಾಗಿ ಹುಟ್ಟಲು ಇಷ್ಟಪಡುತ್ತೇನೆ ಎಂದು ಹೇಳಿದ್ದು, ಇಂದು ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿದ್ದಾರೆ. ನಾನು ಕೈಮುಗಿದು ಪ್ರಾರ್ಥಿಸುತ್ತೇನೆ, ದಯವಿಟ್ಟು ನಿಮ್ಮ ಜನತಾ ದಳದಿಂದ ‘ಜಾತ್ಯತೀತ’ ಪದವನ್ನು ತೆಗೆದುಹಾಕಿ. ಕೋಮುವಾದಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡ ನಂತರ ನಿಮಗೆ ಇನ್ನು ಮುಂದೆ ಜಾತ್ಯತೀತ ಪದವನ್ನು ಬಳಸುವ ನೈತಿಕ ಹಕ್ಕಿಲ್ಲ” ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.