ಗಣ್ಯರಿಂದ ಶ್ರೀಗಳ ಅಂತಿಮ ದರ್ಶನ


Team Udayavani, Jan 23, 2019, 12:55 AM IST

300.jpg

ತುಮಕೂರು: ಜಾತಿ, ಮತ, ಧರ್ಮ ಬೇಧವಿಲ್ಲದೇ ನಾಡಿನ ವಿವಿಧ ಸಂಪ್ರದಾಯಗಳ ಮಠಾಧೀಶರು, ಮುಸ್ಲಿಂ, ಕ್ರಿಶ್ಚಿಯನ್‌, ಜೈನ, ಬೌದ್ಧ ಧರ್ಮದ ಪ್ರಮುಖರು, ರಾಜಕೀಯ ಮುಖಂಡರು ಡಾ.ಶಿವಕುಮಾರ ಸ್ವಾಮೀಜಿಯವರ ಲಿಂಗಕಾಯದ ಅಂತಿಮ ದರ್ಶನ ಪಡೆದರು.

ಯೋಗಗುರು ಬಾಬಾ ರಾಮದೇವ್‌, ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಆದಿಚುಂಚನಗಿರಿ ಮಠದ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಬೇಲಿಮಠದ ಶಿವರುದ್ರ ಸ್ವಾಮೀಜಿ, ತರಳಬಾಳು ಸ್ವಾಮೀಜಿ, ರಂಭಾಪುರಿ ಸ್ವಾಮೀಜಿ, ನೊಣವಿನಕೆರೆ ಕಾಡುಸಿದ್ದೇಶ್ವರ ಮಠದ ಸ್ವಾಮೀಜಿ, ಮುರುಘಾ ಶರಣರು, ಜಯ ಮೃತ್ಯುಂಜಯ ಸ್ವಾಮೀಜಿ, ವಚನಾನಂದ ಸ್ವಾಮೀಜಿ, ಸಂತೋಷ್‌ ಗುರೂಜಿ, ವಿರೇಶಾ ನಂದ ಸರಸ್ವತಿ ಸ್ವಾಮೀಜಿ, ಡಾ.ಶಿವಾನಂದ ಶಿವಾಚಾರ್ಯ ಸ್ವಾಮೀಜಿ, ಪಟ್ಟನಾಯಕ ಹಳ್ಳಿ ನಂಜಾವಧೂತ ಸ್ವಾಮೀಜಿ, ಗದ್ದಿಗೆ ಮಠದ ಡಾ.ಯತೀಶ್ವರ ಶಿವಾಚಾರ್ಯ ಸ್ವಾಮೀಜಿ, ತಮ್ಮಡಿಹಳ್ಳಿ ಮಠದ ಅಭಿನವ ಮಲ್ಲಿಕಾರ್ಜುನ ಸ್ವಾಮೀಜಿ ಸೇರಿ ಬಹುತೇಕ ಮಠದ ನೂರಕ್ಕೂ ಅಧಿಕ ಸ್ವಾಮಿಗಳು, ಸಂತರು, ಸಾಧ್ವಿಗಳು ಅಂತಿಮ ದರ್ಶನ ಪಡೆದರು.

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್‌, ಡಿ.ವಿ.ಸದಾನಂದಗೌಡ, ಮುಖ್ಯಮಂತ್ರಿ ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌, ವಿಧಾನಸಭೆ ಪ್ರತಿಪಕ್ಷ ನಾಯಕ ಬಿ.ಎಸ್‌. ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಎಂ.ಬಿ.ಪಾಟೀಲ್‌, ಆರ್‌.ವಿ.ದೇಶಪಾಂಡೆ, ಡಿ.ಕೆ. ಶಿವಕುಮಾರ್‌, ಜಿ.ಟಿ.ದೇವೇಗೌಡ, ಜಮೀರ್‌ ಅಹ್ಮದ್‌, ಸಾ.ರಾ.ಮಹೇಶ್‌, ಜಯಮಾಲಾ, ಸಂಸದರಾದ ಶೋಭಾ ಕರಂದ್ಲಾಜೆ, ಉಗ್ರಪ್ಪ, ಸಿದ್ಧೇಶ್ವರ, ಮುದ್ದಹನುಮೇಗೌಡ, ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ, ಶಾಸಕರಾದ ಶ್ರೀರಾಮುಲು, ಲಕ್ಷ್ಮೀ ಹೆಬ್ಟಾಳ್ಕರ್‌, ಮಾಧುಸ್ವಾಮಿ, ಜ್ಯೋತಿ ಗಣೇಶ್‌, ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌, ಕಾರ್ಯಾಧ್ಯಕ್ಷ ಈಶ್ವರ್‌ ಖಂಡ್ರೆ ಸೇರಿ ಶಾಸಕರು, ಸಂಸದರು, ವಿವಿಧ ಪಕ್ಷಗಳ ಮುಖಂಡರು ಅಂತಿಮ ದರ್ಶನದಲ್ಲಿ ಭಾಗಿಯಾಗಿದ್ದರು.

ನಟರಾದ ದರ್ಶನ್‌, ಪುನೀತ್‌ ರಾಜ್‌ಕುಮಾರ್‌, ಜಗ್ಗೇಶ್‌, ಸುದೀಪ್‌, ವಿಜಯ ರಾಘವೇಂದ್ರ, ರಾಘವೇಂದ್ರ ರಾಜ್‌ಕುಮಾರ್‌ ಸಹಿತವಾಗಿ ಚಿತ್ರರಂಗದ ಗಣ್ಯರು ಆಗಮಿಸಿದ್ದರು. ಆರ್‌ಎಸ್‌ಎಸ್‌ ಪ್ರಮುಖರಾದ ವಿ.ನಾಗರಾಜ್‌, ತಿಪ್ಪೇಸ್ವಾಮಿ ಮತ್ತಿತರರು ಅಂತಿಮ ದರ್ಶನ ಪಡೆದಿದ್ದರು.

ಭಾರತರತ್ನ’ಕ್ಕೆರಾಮ್‌ದೇವ್‌ ಮನವಿ

ಕರ್ಮಯೋಗಿಯಾಗಿ ಬದುಕಿ ಲಕ್ಷಾಂತರ ಕುಟುಂಬಗಳಿಗೆ ದಾರಿ ದೀಪವಾಗಿದ್ದ ಡಾ.ಶಿವಕುಮಾರ ಸ್ವಾಮೀಜಿಯವರು ಭಾರತ ರತ್ನಕ್ಕೆ ಅರ್ಹರಾಗಿದ್ದಾರೆ. ಇವರಿಗೆ ಭಾರತ ರತ್ನ ನೀಡುವುದರಿಂದ ಭಾರತ ರತ್ನಕ್ಕೆ ಸೂಕ್ತ ಗೌರವ ಬರುತ್ತದೆ. ಹೀಗಾಗಿ ಶ್ರೀಗಳಿಗೆ ಭಾರತ ರತ್ನ ಗೌರವ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸುವುದಾಗಿ ಯೋಗಗುರು ಬಾಬಾ ರಾಮ್‌ದೇವ್‌ ಹೇಳಿದರು.

ಟಾಪ್ ನ್ಯೂಸ್

ಕರಾವಳಿಯ ಹೆದ್ದಾರಿ ಸಮಸ್ಯೆ ಪರಿಹಾರಕ್ಕಾಗಿ ಕೇಂದ್ರ ಸಚಿವರನ್ನು ಭೇಟಿಯಾದ ಸಂಸದರ ತಂಡ

ಕರಾವಳಿಯ ಹೆದ್ದಾರಿ ಸಮಸ್ಯೆ ಪರಿಹಾರಕ್ಕಾಗಿ ಕೇಂದ್ರ ಸಚಿವರನ್ನು ಭೇಟಿಯಾದ ಸಂಸದರ ತಂಡ

Tollywood: ನಾಗಚೈತನ್ಯ – ಶೋಭಿತಾ ವಿವಾಹ; ಇಲ್ಲಿದೆ ಸೆಲೆಬ್ರಿಟಿ ಗೆಸ್ಟ್‌ ಲಿಸ್ಟ್

Tollywood: ನಾಗಚೈತನ್ಯ – ಶೋಭಿತಾ ವಿವಾಹ; ಇಲ್ಲಿದೆ ಸೆಲೆಬ್ರಿಟಿ ಗೆಸ್ಟ್‌ ಲಿಸ್ಟ್

1-104

Bengal; 104 ವರ್ಷದ ವೃದ್ಧನಿಗೆ ಕೊನೆಗೂ ಜೈಲು ವಾಸದಿಂದ ಮುಕ್ತಿ!!

fadnavis

Mahayuti; ಮತ್ತೊಮ್ಮೆ ಮಹಾ ಸಿಎಂ ಆಗಿ ದೇವೇಂದ್ರ ಫಡ್ನವಿಸ್ ಆಯ್ಕೆ

TV Actor: ಕಾಡಿದ ಕ್ಯಾನ್ಸರ್ 45ರ ಹರೆಯದಲ್ಲಿ ಇಹಲೋಕ ತ್ಯಜಿಸಿದ ಜನಪ್ರಿಯ ನಟ

TV Actor: ಕಾಡಿದ ಕ್ಯಾನ್ಸರ್ 45ರ ಹರೆಯದಲ್ಲಿ ಇಹಲೋಕ ತ್ಯಜಿಸಿದ ಜನಪ್ರಿಯ ನಟ

Stock Market: ಷೇರುಪೇಟೆ ಸೂಚ್ಯಂಕ, ನಿಫ್ಟಿ ಜಿಗಿತ; ಲಾಭ-ನಷ್ಟ ಕಂಡ ಷೇರು ಯಾವುದು?

Stock Market: ಷೇರುಪೇಟೆ ಸೂಚ್ಯಂಕ, ನಿಫ್ಟಿ ಜಿಗಿತ; ಲಾಭ-ನಷ್ಟ ಕಂಡ ಷೇರು ಯಾವುದು?

1-raga

UP; ಹಿಂಸಾಚಾರ ಪೀಡಿತ ಸಂಭಾಲ್ ಗೆ ತೆರಳುತ್ತಿದ್ದ ರಾಹುಲ್ ಗಾಂಧಿ ನಿಯೋಗಕ್ಕೆ ತಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರಾವಳಿಯ ಹೆದ್ದಾರಿ ಸಮಸ್ಯೆ ಪರಿಹಾರಕ್ಕಾಗಿ ಕೇಂದ್ರ ಸಚಿವರನ್ನು ಭೇಟಿಯಾದ ಸಂಸದರ ತಂಡ

ಕರಾವಳಿಯ ಹೆದ್ದಾರಿ ಸಮಸ್ಯೆ ಪರಿಹಾರಕ್ಕಾಗಿ ಕೇಂದ್ರ ಸಚಿವರನ್ನು ಭೇಟಿಯಾದ ಸಂಸದರ ತಂಡ

vijayendra-3

BJP Rift; ಆರ್. ಅಶೋಕ್ ದೆಹಲಿಗೆ: ನನಗೆ ಸ್ಪಷ್ಟ ಮಾಹಿತಿ ಇಲ್ಲ ಎಂದ ವಿಜಯೇಂದ್ರ

eart

Earthquake; ತೆಲಂಗಾಣದ ಮುಲುಗುವಿನಲ್ಲಿ ಭೂಕಂಪನ: 5.3 ತೀವ್ರತೆ

DKShivakumar

Power sharing: ನಮ್ಮಲ್ಲಿ ಒಪ್ಪಂದ ನಿಜ: ಡಿ.ಕೆ.ಶಿವಕುಮಾರ್‌ ಪ್ರಥಮ ಹೇಳಿಕೆ

ED-Raid

MUDA Scam: ಸಿದ್ದರಾಮಯ್ಯ ಪತ್ನಿ ಸಹಿತ ಸಾವಿರ ಮುಡಾ ನಿವೇಶನ ಅಕ್ರಮ ಹಂಚಿಕೆ: ಇ.ಡಿ.

MUST WATCH

udayavani youtube

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ

udayavani youtube

ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ

udayavani youtube

60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ

udayavani youtube

ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

ಹೊಸ ಸೇರ್ಪಡೆ

2-gadaga

Gadaga: ಸಂತ ರಾಜಕಾರಣಿ ಡಿ.ಆರ್. ಪಾಟೀಲ ಗ್ರಂಥ ಬಿಡುಗಡೆ

5

Bantwal: ತುಂಬೆ ಹೆದ್ದಾರಿಯಲ್ಲಿ ನೀರು; ಪೆರಾಜೆ ರಿಕ್ಷಾ ನಿಲ್ದಾಣಕ್ಕೆ ಹಾನಿ

ಕರಾವಳಿಯ ಹೆದ್ದಾರಿ ಸಮಸ್ಯೆ ಪರಿಹಾರಕ್ಕಾಗಿ ಕೇಂದ್ರ ಸಚಿವರನ್ನು ಭೇಟಿಯಾದ ಸಂಸದರ ತಂಡ

ಕರಾವಳಿಯ ಹೆದ್ದಾರಿ ಸಮಸ್ಯೆ ಪರಿಹಾರಕ್ಕಾಗಿ ಕೇಂದ್ರ ಸಚಿವರನ್ನು ಭೇಟಿಯಾದ ಸಂಸದರ ತಂಡ

4

Subramanya: ಸಿದ್ಧಗೊಳ್ಳುತ್ತಿವೆ ಬೆತ್ತದ ತೇರು

1-ckm

Thirthahalli: ಡಿ.7 ರಂದು 18ನೇ ವರ್ಷದ ಸುಬ್ರಹ್ಮಣ್ಯ ಷಷ್ಠಿ ದೀಪೋತ್ಸವ, ಜಾತ್ರ ಮಹೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.