ಮಾ.2ನೇ ವಾರ 7ನೇ ತರಗತಿ ಮೌಲ್ಯಾಂಕನ ಪರೀಕ್ಷೆ
Team Udayavani, Jan 30, 2020, 3:00 AM IST
ಬೆಂಗಳೂರು: ರಾಜ್ಯದ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳ 7ನೇ ತರಗತಿ ವಿದ್ಯಾರ್ಥಿಗಳಿಗೆ ಮಾರ್ಚ್ 2ನೇ ವಾರದಲ್ಲಿ ಸಾಮಾನ್ಯ ಮೌಲ್ಯಾಂಕನ ಪರೀಕ್ಷೆ ನಡೆಸಲು ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ಧರಿಸಿದೆ. ಟ್ರ್ಯಾಕಿಂಗ್ ವ್ಯವಸ್ಥೆ(ಎಸ್‌ಎಟಿಎಸ್)ಯಲ್ಲಿ ನಮೂದಿಸಲಾಗಿ ರುವ ವಿದ್ಯಾರ್ಥಿಗಳ ಮಾಹಿತಿಗೆ ಅನುಗುಣವಾಗಿ ಮೌಲ್ಯಾಂಕನ ಪರೀಕ್ಷೆ ನಡೆಯಲಿದೆ.
ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಮಾಹಿತಿ ಅಪ್‌ಡೇಟ್ ಮಾಡಲು ಆಯಾ ಶಾಲಾ ಮುಖ್ಯ ಶಿಕ್ಷಕರು ಹಾಗೂ ಎಲ್ಲ ಹಂತದ ಅಧಿಕಾರಿಗಳಿಗೆ ತುರ್ತು ಕ್ರಮಕೈಗೊಳ್ಳಲು ನಿರ್ದೇಶಿಸಿದೆ. ಮೌಲ್ಯಾಂಕನ ಪರೀಕ್ಷೆ ಸಂಬಂಧ ಶಾಲೆಯ ಮಾಧ್ಯಮ, ಭಾಷಾ ಸಂಯೋಜನೆ, ವಿದ್ಯಾರ್ಥಿಗಳ ಸಂಪೂರ್ಣ ಮಾಹಿತಿ ಹಾಗೂ ಎಸ್‌ಎಟಿಎಸ್‌ನಲ್ಲಿ ನೀಡಲಾಗಿರುವ ಇನ್ನಿತರೆ ವಿವರಗಳನ್ನು ಫೆ.5ರೊಳಗೆ ಕಡ್ಡಾಯವಾಗಿ ಅಪ್‌ಡೇಟ್ ಮಾಡಬೇಕಾಗಿದೆ. ಫೆ.5ರ ನಂತರ ಅಪ್‌ಡೇಟ್ ಮಾಡಲಾದ ಮಾಹಿತಿ ಪರಿಗಣಿಸಲಾಗದು.
ಎಸ್‌ಎಟಿಎಸ್‌ನಲ್ಲಿರುವ ಮಾಹಿತಿ ಆಧರಿಸಿಯೇ ಪ್ರಶ್ನೋತ್ತರ ಪತ್ರಿಕೆಗಳನ್ನು ಮುದ್ರಿಸಿ ಸರಬರಾಜು ಮಾಡಲಾಗುವುದು. ಆದ್ದರಿಂದ ಸಂಬಂಧಿಸಿದ ಅಧಿಕಾರಿಗಳು, ಶಾಲಾ ಮುಖ್ಯಶಿಕ್ಷಕರಿಗೆ ಸೂಕ್ತ ಮಾಹಿತಿ ಒದಗಿಸಿ ಫೆ.5ರೊಳಗೆ ಶಾಲೆಯ ಎಲ್ಲ ಮಾಹಿತಿಯನ್ನೂ ಅಪ್‌ಡೇಟ್ ಮಾಡಲು ಸೂಚಿಸಿದೆ. ಸರ್ಕಾರವು ಅಧಿಕೃತವಾಗಿ ನಿರ್ದೇಶನ ನೀಡಿರುವುದರಿಂದ ಮಾರ್ಚ್ 2ನೇ ವಾರದಲ್ಲಿ 2019-20ನೇ ಸಾಲಿನ ಮೌಲ್ಯಾಂಕನ ಪರೀಕ್ಷೆ ನಡೆಯಲಿದೆ ಎಂದು ಇಲಾಖೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ವಕ್ಫ್ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ
Thirthahalli: ಹಣಗೆರೆಕಟ್ಟೆ ದೇವಸ್ಥಾನದ ಹಣ ಏರು ಪೇರು ಆಗಿದ್ದು ನಿಜವೇ?
Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್ ದರ ಏರಿಕೆ ಶಾಕ್?
Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯ ಭೇಟಿ: ಕಾಂಗ್ರೆಸ್ ಕೆಂಡ
Injustice: ಮೊಟ್ಟೆ ಕೇಳಿದ ಶಾಲಾ ವಿದ್ಯಾರ್ಥಿಗಳಿಗೆ ಸಿಕ್ಕಿದ್ದು ಚಿಕ್ಕ ಚಿಕ್ಕಿ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.