ಮಸ್ಕಿ ಚುನಾವಣೆ : 7763 ಮತಗಳಿಂದ ಕಾಂಗ್ರೆಸ್ ಗೆ ಮುನ್ನಡೆ
Team Udayavani, May 2, 2021, 9:52 AM IST
ರಾಯಚೂರು : ರಾಜ್ಯದಲ್ಲಿ ಭಾರೀ ಕುತೂಹಲಕ್ಕೆ ಕಾರಣವಾದ ರಾಜ್ಯ ಉಪಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದೆ. ಮಸ್ಕಿ ಚುನಾವಣೆಯಲ್ಲಿ ಕಾಂಗ್ರೆಸ್ ಸತತ ಮುನ್ನಡೆ ಕಾಯ್ದುಕೊಂಡಿದೆ.
ಮಸ್ಕಿ ಉಪಚುನಾವಣೆ ಮತ ಎಣಿಕೆ ಭರದಿಂದ ಸಾಗಿದ್ದು ಆರನೇ ಸುತ್ತಿನಲ್ಲೂ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದೆ. ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರ್ವಿಹಾಳ 19403 ಮತಗಳನ್ನು ಪಡೆದರೆ ಬಿಜೆಪಿಯ ಪ್ರತಾಪಗೌಡ ಪಾಟೀಲ್ 11640 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ 7763 ಮತಗಳಿಂದ ಮುನ್ನಡೆ ಸಾಧಿಸುತ್ತಿದೆ. ಆರು ಸುತ್ತಿನಲ್ಲೂ ಕಾಂಗ್ರೆಸ್ ಮುನ್ನಡೆ ಸಾಧಿಸುತ್ತಲೇ ಸಾಗಿದೆ. ಆರನೇ ಸುತ್ತಿನಲ್ಲೂ ಕಾಂಗ್ರೆಸ್ 3294 ಮತ ಪಡದರೆ ಬಿಜೆಪಿ 1047 ಮತಗಳನ್ನು ಪಡೆದಿದೆ.
ಭಾರೀ ಕುತೂಹಲ ಕೆರಳಿಸಿರುವ ಕರ್ನಾಟಕ ಚುನಾವಣೆಯ ಫಲಿತಾಂಶ ಇಂದು (ಭಾನುವಾರ ಮೇ 2) ಮಧ್ಯಾಹ್ನದ ಹೊತ್ತಿಗೆ ಹೊರ ಬೀಳುವ ಸಾಧ್ಯತೆ ಇದೆ. ರಾಜ್ಯದ ಮೂರೂ ಕ್ಷೇತ್ರಗಳಲ್ಲಿ ಯಾರ ಕೊರಳಿಗೆ ವಿಜಯ ಮಾಲೆ ಬೀಳಲಿದೆ ಎಂಬುದನ್ನು ಕಾದು ನೋಡಬೇಕಿದೆ.
ಬಿಜೆಪಿ ಸಂಸದರಾಗಿದ್ದ ಸುರೇಶ್ ಅಂಗಡಿ ನಿಧನದಿಂದ ತೆರವಾಗಿದ್ದ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಚುನಾವಣೆ ನಡೆದಿತ್ತು. ಇನ್ನು ಬೀದರ್ ಜಿಲ್ಲೆಯ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದ ಬಿ. ನಾರಾಯಣರಾವ್ ಕೋವಿಡ್ ಗೆ ಬಲಿಯಾಗಿದ್ದರಿಂದ ಆ ಕ್ಷೇತ್ರ ಕೂಡ ತೆರವಾಗಿತ್ತು. ರಾಯಚೂರು ಜಿಲ್ಲೆಯ ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರಾಗಿದ್ದ ಪ್ರತಾಪ್ ಗೌಡ ಪಾಟೀಲ್ ಬಿಜೆಪಿ ತೆಕ್ಕೆಗೆ ಸೇರಿಕೊಂಡ ಕಾರಣ ಶಾಸಕ ಸ್ಥಾನಕ್ಕೆ ಅನರ್ಹಗೊಂಡಿದ್ದರು. ಹೀಗಾಗಿ ಆ ಕ್ಷೇತ್ರ ಕೂಡ ತೆರವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
MUST WATCH
ಹೊಸ ಸೇರ್ಪಡೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ
Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.