ಅಂಜನಾದ್ರಿ ಬೆಟ್ಟಕ್ಕೆ ಮಾಸ್ಟರ್ ಪ್ಲಾನ್: 50 ಕೋಟಿ ರೂ. ವೆಚ್ಚದಲ್ಲಿ ಮೊದಲ ಹಂತದ ಅಭಿವೃದ್ಧಿ
Team Udayavani, Mar 16, 2021, 12:06 PM IST
ಬೆಂಗಳೂರು: ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟಕ್ಕೆ ಮೂಲಭೂತ ಸೌಕರ್ಯ ಸೇರಿದಂತೆ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಇಂದು ನಿರ್ಧಾರ ಕೈಗೊಂಡಿದೆ.
ಕೆ.ಎಸ್. ಈಶ್ವರಪ್ಪ ರವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಸಚಿವರಾದ ಸಿ.ಪಿ. ಯೋಗೇಶ್ವರ, ಕೋಟ ಶ್ರೀನಿವಾಸ ಪೂಜಾರಿ, ಬಿ.ಸಿ. ಪಾಟೀಲ್, ಗಂಗಾವತಿ ಶಾಸಕ ದೊಡ್ಡನಗೌಡ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ಐತಿಹಾಸಿಕ ಅಂಜನಾದ್ರಿ ಬೆಟ್ಟ ಹಾಗೂ ಸುತ್ತಮುತ್ತಲಿನ ಪ್ರದೇಶವನ್ನು ಪ್ರಥಮ ಹಂತದಲ್ಲಿ ರೂ.50 ಕೋಟಿಗಳ ವೆಚ್ಚದಲ್ಲಿ ಅಭಿವೃದ್ಧಿಪಡಿಸುವುದು, ಮುಂದಿನ ಸಚಿವ ಸಂಪುಟದಲ್ಲಿ ಈ ವಿಷಯವನ್ನು ಮಂಡಿಸಿ ಅನುಮೋದನೆ ಪಡೆಯಲು ಸಭೆಯಲ್ಲಿ ನಿರ್ಧರಿಸಲಾಯಿತು.
ಏ. 16 ರಂದು ಸಚಿವರಾದ ಕೆ.ಎಸ್. ಈಶ್ವರಪ್ಪ, ಸಿ.ಪಿ. ಯೋಗೇಶ್ವರ, ಕೋಟಶ್ರೀನಿವಾಸ ಪೂಜಾರಿ, ಬಿ.ಸಿ. ಪಾಟೀಲ್ ಹಾಗೂ ಅರವಿಂದ ಲಿಂಬಾವಳಿ ರವರು ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಲಿದ್ದಾರೆ. ನಂತರ, ಅಂಜನಾದ್ರಿ ಬೆಟ್ಟಕ್ಕೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಕಾಮಗಾರಿಗಳಿಗೆ ಚಾಲನೆ ನೀಡಲು ನಿರ್ಧರಿಸಲಾಗಿದೆ.
ಪ್ರಥಮ ಹಂತದಲ್ಲಿ ಅಂಜನಾದ್ರಿ ಬೆಟ್ಟಕ್ಕೆ ಕುಡಿಯುವ ನೀರು, ಶೌಚಾಲಯ, ಸ್ನಾನದ ಗೃಹ ಮತ್ತು ರಸ್ತೆ ನಿರ್ಮಾಣ ಮಾಡುವುದು. ಕಸ ವಿಲೇವಾರಿಗೆ ಸಮರ್ಪಕ ವ್ಯವಸ್ಥೆ ಅಳವಡಿಸುವುದು. ಬೆಟ್ಟದ ಕೆಳಭಾಗದಲ್ಲಿ ಪ್ರವಾಸಿಗರ ವಾಹನಗಳ ನಿಲುಗಡೆಗೆ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸುವುದು. ಬೆಟ್ಟದ ಮುಂಭಾಗದಲ್ಲಿರುವ ಹುಲಿಗಿ ಗಂಗಾವತಿ ರಾಜ್ಯ ಹೆದ್ದಾರಿಯನ್ನು 1 ಕಿ.ಮೀ. ಅಗಲೀಕರಣ ಮಾಡುವುದು. ಬೀದಿ ದೀಪಗಳನ್ನು ಅಳವಡಿಸುವುದು. ಸೇವಾ ಹಾಗೂ ಟಿಕೆಟ್ ಕೌಂಟರ್ ನಿರ್ಮಾಣ ಮಾಡುವುದು. ಪ್ರವಾಸಿಗರಿಗೆ ತುರ್ತು ಪರಿಸ್ಥಿತಿಯಲ್ಲಿ ಚಿಕಿತ್ಸೆಗಾಗಿ ಆಸ್ಪತ್ರೆ ಮಾಡುವುದು. ಮೊಬೈಲ್ ಸಂಪರ್ಕಕ್ಕಾಗಿ ಮೊಬೈಲ್ ಟವರ್ ಅಳವಡಿಸುವುದು ಎಂದು ತೀರ್ಮಾನಿಸಲಾಗಿದೆ.
ಇದನ್ನೂ ಓದಿ: ಹೆಚ್ಚುತ್ತಿದೆ ಕೋವಿಡ್ ಭೀತಿ: ಪ್ರೇಕ್ಷಕರಿಲ್ಲದೆ ನಡೆಯಲಿದೆ ಇಂಗ್ಲೆಂಡ್ ವಿರುದ್ಧದ ಸರಣಿ!
ಆಯವ್ಯಯದಲ್ಲಿ 50.00 ಕೋಟಿ ರೂ ಗಳನ್ನು ಒದಗಿಶಲಾಗಿದೆ. ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪನವರು ತಮ್ಮ ಇಲಾಖೆಯಲ್ಲಿ ಮೀಸಲಿಟ್ಟಿರುವ ರೂ.268.00 ಲಕ್ಷಗಳನ್ನು ಹಾಗೂ ಮುಜರಾಯಿ ಇಲಾಖೆಯಲ್ಲಿರುವ ರೂ.140.00ಲಕ್ಷ, ಪ್ರವಾಸೋದ್ಯಮ ಇಲಾಖೆಯಿಂದ ರೂ.50.00 ಲಕ್ಷ ಮತ್ತು ಕೇಂದ್ರ ಕೈಗಾರಿಕೆ ಇಲಾಖೆಯ ಹ್ಯಾಂಡಿ ಕ್ರ್ಯಾಫ್ಟ್ ನಿಂದ ರೂ.10.00 ಕೋಟಿಗಳನ್ನು ಅಂಜನಾದ್ರಿ ಬೆಟ್ಟ ಅಭಿವೃದ್ಧಿಗೆ ಹಣವನ್ನು ಮೀಸಲಿರಿಸಲಾಗಿದೆ. ಒಟ್ಟು ರೂ.50.00 ಕೋಟಿ 18.00ಲಕ್ಷ ಗಳಲ್ಲಿ ಪ್ರಥಮ ಹಂತದ ಕಾಮಗಾರಿಗಳನ್ನು ಮಾಡಲು ಸಭೆಯಲ್ಲಿ ನಿರ್ಧರಿಸಲಾಗಿದೆ.
ಎರಡನೇ ಹಂತದಲ್ಲಿ ಪ್ರವಾಸಿಗರು ತಂಗಲು ಯಾತ್ರಿ ನಿವಾಸ ಹೋಟೇಲ್ ಹಾಗೂ ರೆಸಾರ್ಟ್ ಗಳನ್ನು ನಿರ್ಮಾಣ ಮಾಡುವುದು. ಬ್ಯಾಟರಿ ಚಾಲಿತ ವಾಹನಗಳನ್ನು ಖರೀದಿಸುವುದು. ತುಂಗಭದ್ರಾ ನದಿಯಲ್ಲಿ ವಾಟರ್ ಸ್ಪೋರ್ಟ್ಸ್ ಬೆಟ್ಟಕ್ಕೆ ರೋಪ್ ವೇ ನಿರ್ಮಾಣ ಮಾಡುವುದು. ಋಷಿಮುಖ ಪರ್ವತದಲ್ಲಿರುವ ಸತ್ಯನಾರಾಯಣ ಸ್ವಾಮಿ ದೇವಸ್ಥಾನದಲ್ಲಿ ವೇದ, ವಾಸ್ತು, ಜ್ಯೋತಿಷ್ಯ, ಗೃಹ ನಕ್ಷತ್ರ, ಭೂಕಂಪನ, ಸಮುದ್ರ ಕಂಪನ ಹಾಗೂ ಶರೀರ ಆವಯವಗಳ ಪಾಠಗಳ ಹಾಗೂ ಸಂಸ್ಕೃತ ವಿಶ್ವವಿದ್ಯಾಲಯ ಪ್ರಾರಂಭಿಸುವುದು. ಸಾಣಾಪುರ ಕೆರೆ ಹತ್ತಿರ ನೀರನ ವಿಭಿನ್ನ ವಿನ್ಯಾಸಗಳನ್ನು ಮಾಡುವ ಲೇಸರ್ ಶೋ ಮಾಡುವುದು. ಒಟ್ಟಾರೆ ಅಂಜನಾದ್ರಿ ಬೆಟ್ಟದಲ್ಲಿ ಪ್ರವಾಸಿಗರಿಗೆ ಅಗತ್ಯವಿರುವ ಎಲ್ಲಾ ಅನುಕೂಲಗಳನ್ನು ಕಲ್ಪಿಸಿಕೊಡಲು ನಿರ್ಧರಿಸಲಾಯಿತು.
ಇದನ್ನೂ ಓದಿ: ನಿಮ್ಮ ಗ್ರಹಬಲ:ಈ ರಾಶಿಯವರು ಪ್ರತಿಯೊಬ್ಬರನ್ನು ಆಲಿಸಿರಿ. ನಿಮಗೆ ಸರಿ ಎನಿಸಿದ್ದನ್ನು ಮಾಡಿರಿ!
ದೇಶದ ನಾಲ್ಕು ಐತಿಹಾಸಿಕ ಹಾಗೂ ಪುರಾತನ ಸರೋವರಗಳಲ್ಲಿ ಪಂಪ ಸರೋವರ ಸಹ ಒಂದು ಆಗಿದ್ದು, ಸಮಗ್ರವಾಗಿ ಅಭಿವೃದ್ಧಿ ಮಾಡುವುದು. 101 ಬಾವಿಗಳ ಪುನಶ್ಚೇತನ ಸೇರಿದಂತೆ ಅಂಜನಾದ್ರಿ ಬೆಟ್ಟ ಮತ್ತು ಆನೆಗುಂದಿ ಪ್ರದೇಶದ 100 ಎಕರೆ ಪ್ರದೇಶದಲ್ಲಿ ಸಮಗ್ರ ಅಭಿವೃದ್ಧಿ ಮಾಡಲು ಸಭೆಯಲ್ಲಿ ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಯಿತು. ಅಂಜನಾದ್ರಿ ಬೆಟ್ಟದಲ್ಲಿ ಒಂದು ಗೋಶಾಲೆಯಿದ್ದು, ಸಾವಿರ ದನಕರುಗಳಿವೆ ಇದರ ಜೊತೆಗೆ ಇನ್ನೊಂದು ಗೋಶಾಲೆ ತೆರೆಯಲು ಸಭೆ ನಿರ್ಧರಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.