ರಸ್ತೆ ಮಧ್ಯೆಯೇ ಹೆರಿಗೆ: ನೆರವಿಗೆ ಧಾವಿಸಿದ ಭಿಕ್ಷುಕಿ
Team Udayavani, Mar 13, 2017, 11:20 AM IST
ಮಾನ್ವಿ: ರಾಯಚೂರು ಜಿಲ್ಲೆ ಮಾನ್ವಿಯ ಬಸವ ವೃತ್ತದ ಮುಖ್ಯರಸ್ತೆಯ ಮಧ್ಯದಲ್ಲೇ ಗರ್ಭಿಣಿಯೊಬ್ಬಳು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ರಕ್ತಹೀನತೆಯಿಂದ ಬಳಲುತ್ತಿದ್ದ ತುಂಬು ಗರ್ಭಿಣಿ ಯಲ್ಲಮ್ಮ ಎಂಬಾಕೆ, ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಭಾನುವಾರ ಮುಂಜಾನೆ ಆಸ್ಪತ್ರೆಯಿಂದ ಬಿಡುಗಡೆಗೊಂಡು ಪಟ್ಟಣಕ್ಕೆ ಮರಳಿದ್ದರು. ಬಸ್ ನಿಲ್ದಾಣದಿಂದ ಆಟೋದಲ್ಲಿ ಮನೆಗೆ ತೆರಳುತ್ತಿದ್ದಾಗ ದಾರಿ ಮಧ್ಯೆ ಏಕಾಏಕಿ ಹೆರಿಗೆ ನೋವು ಕಾಣಿಸಿಕೊಂಡಿತು. ಚಾಲಕ ರಸ್ತೆ ಪಕ್ಕದಲ್ಲಿ ಆಟೋ ನಿಲ್ಲಿಸಿದ. ಮಲ್ಲಮ್ಮ ಹೆರಿಗೆ ನೋವಿನಿಂದ ಬಳಲುತ್ತಿರುವುದನ್ನು ಕಂಡ ಭಿಕ್ಷುಕಿಯೊಬ್ಬಳು, ನೆರವಿಗೆ ಧಾವಿಸಿ, ಹೆರಿಗೆಗೆ ಸಹಾಯ ಮಾಡಿಸಿದಳು.
ಈಗಾಗಲೇ ಮೂರು ಗಂಡು ಮಕ್ಕಳಿರುವ ಮಲ್ಲಮ್ಮಗೆ ಈ ಸಲ ಹೆಣ್ಣು ಮಗುವಾಗಿದೆ. ಬಳಿಕ ಬಾಣಂತಿ, ಶಿಶುವನ್ನು ಮಾನ್ವಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತಾಯಿ-ಮಗು ಆರೋಗ್ಯವಾಗಿದ್ದಾರೆ. ಎರಡು ದಿನಗಳಿಂದ ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತುಂಬು ಗರ್ಭಿಣಿಗೆ, ಹೆರಿಗೆಯಾಗುವ ಸಾಧ್ಯತೆ ಇದ್ದರೂ ಖಚಿತಪಡಿಸಿಕೊಳ್ಳದೆ ಆಸ್ಪತ್ರೆಯಿಂದ ಬಿಡುಗಡೆ ಮಾಡಿ ವೈದ್ಯರು ನಿರ್ಲಕ್ಷé ತೋರಿದ್ದಾರೆಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
MUST WATCH
ಹೊಸ ಸೇರ್ಪಡೆ
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.