ಮೇ 10 ನವ ಕರ್ನಾಟಕಕ್ಕೆ ಹೊಸ ದಿಕ್ಸೂಚಿಯ ದಿನ: ಡಿಕೆಶಿ
Team Udayavani, Mar 30, 2023, 6:30 AM IST
ಬೆಂಗಳೂರು: ಮೇ ತಿಂಗಳ 10ನೇ ತಾರೀಕು ರಾಜ್ಯದ ವಿಧಾನಸಭೆ ಮತದಾನದ ದಿನ ಮಾತ್ರವಲ್ಲ; ರಾಜ್ಯಕ್ಕೆ ಅಂಟಿಕೊಂಡಿರುವ ಬ್ರಹ್ಮಾಂಡ ಭ್ರಷ್ಟಾಚಾರದಿಂದ ಮುಕ್ತಗೊಳ್ಳುವ ಹಾಗೂ ನವ ಕರ್ನಾಟಕಕ್ಕೆ ಹೊಸ ದಿಕ್ಸೂಚಿ ನೀಡುವ ದಿನವೂ ಆಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿಶ್ಲೇಷಿಸಿದ್ದಾರೆ.
ಚುನಾವಣೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಯಾವುದೇ ಅಧಿಕಾರಿ ಸರಕಾರದ ಅಡಿಯಾಳಾಗುವುದಿಲ್ಲ ಎಂಬ ನಂಬಿಕೆ ಇದೆ. ನಾಲ್ಕು ವರ್ಷಗಳಿಂದ ಡಬಲ್ ಎಂಜಿನ್ ಸರಕಾರದ ದಬ್ಟಾಳಿಕೆಗೆ ಜನ ಬೇಸತ್ತಿದ್ದು, ವೈಫಲ್ಯವಾಗಿರುವ ಎಂಜಿನ್‌ಗಳ ಬದಲಿಗೆ ಹೊಸ ಎಂಜಿನ್ ಅನ್ನು ಜನರೇ ನಿರ್ಮಾಣ ಮಾಡಲಿದ್ದಾರೆ ಎಂದರು.
ಸಿದ್ದು 2 ಕಡೆ ಸ್ಪರ್ಧೆ ಅವರಿಷ್ಟ
ಸಿದ್ದರಾಮಯ್ಯ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಬಗ್ಗೆ ಕೇಳಿದಾಗ, ಅದು ಅವರ ಸ್ವಂತ ಅಭಿಪ್ರಾಯ. ನಾನೇಕೆ ಬದಲಾವಣೆ ಮಾಡಲಿ? ಯಾವ್ಯಾವ ಕ್ಷೇತ್ರದಲ್ಲಿ ಸ್ಪರ್ಧಿಸಬೇಕು ಎಂದು ತೀರ್ಮಾನಿಸಲು ಕೇಂದ್ರ ಚುನಾವಣ ಸಮಿತಿ ಇದೆ ಎಂದರು.
50 ಮತ ಹಾಕಿ ಬಳಿಕ ಪ್ರಯೋಗ?
ಚುನಾವಣ ಬೂತ್ ಕಾರ್ಯಾರಂಭ ಮಾಡುವ ಮುನ್ನ ಬೂತ್ ಏಜೆಂಟರಿಂದ 50 ಮತಗಳನ್ನು ಪರೀಕ್ಷಾರ್ಥವಾಗಿ ಚಲಾವಣೆ ಮಾಡುವುದಾಗಿ ಆಯೋಗ ಹೇಳಿದ್ದು, ಇದು ಸ್ವಾಗತಾರ್ಹ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.
ಎ. 5ರಿಂದ ಸತ್ಯಮೇವ ಜಯತೆ:
ಎ. 5ರಂದು ರಾಹುಲ್ ಗಾಂಧಿ ಕೋಲಾರಕ್ಕೆ ಆಗಮಿಸಲಿದ್ದು, ಅಲ್ಲಿಂದಲೇ ಗಾಂಧೀಜಿ ಅವರ ಮೂಲಮಂತ್ರ ಸತ್ಯಮೇವ ಜಯತೆ ಹೋರಾಟ ಆರಂಭಿಸಲಿದ್ದಾರೆ ಎಂದು ಹೇಳಿದರು.
ನಾವು ಕೇವಲ ರಾಜ್ಯದ ಜನರ ಜತೆಗೆ ಹೊಂದಾಣಿಕೆಯಾಗಿದ್ದೇವೆ ಹೊರತು, ಬೇರೆ ಯಾರೊಂದಿಗೂ ಹೊಂದಾಣಿಕೆ ಮಾಡಿಕೊಂಡಿಲ್ಲ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಅವರು, 40 ಪರ್ಸೆಂಟ್ ಕಮಿಷನ್ ಕಾಂಗ್ರೆಸ್‌ಗೆ ತಿರುಗುಬಾಣವಾಗಲಿದೆ ಎಂದ ಬಿಜೆಪಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, 40 ಪರ್ಸೆಂಟ್ ಕಮಿಷನ್ ಎನ್ನುವುದು ಜನರ ಮನಸ್ಸಿನಲ್ಲಿ ಅಚ್ಚೊತ್ತಿದೆ. ಲೋಕಾಯುಕ್ತ ಸಂಸ್ಥೆ ಅದಕ್ಕೆ ಸ್ಟಾಂಪ್ ಒತ್ತಿದ್ದಾರೆ’ ಎಂದರು.
ನಾವು (ಕಾಂಗ್ರೆಸ್ ನಾಯಕರು) ಕೋಲರದಿಂದಲೇ ಹೋರಾಟ ಆರಂಭಿಸಲು ಮನವಿ ಮಾಡಿದ್ದು, ರಾಹುಲ್ ಗಾಂಧಿ ಅವರು ಇಲ್ಲಿಗೆ ಆಗಮಿಸುತ್ತಿದ್ದಾರೆ. ಅದರಂತೆ ರಾಹುಲ್ ಗಾಂಧಿ ಎಲ್ಲಿ ಭಾಷಣ ಮಾಡಿದರೋ ಅದೇ ಭೂಮಿಯಿಂದ ಮತ್ತೆ ಪ್ರಜಾಪ್ರಭುತ್ವ ಉಳಿಸುವ ಹೋರಾಟ ಮಾಡಲಿದ್ದಾರೆ. ಬಿಜೆಪಿ ಅಧಿಕಾರ ದುರ್ಬಳಕೆ ಪ್ರಜಾಪ್ರಭುತ್ವಕ್ಕೆ ಅಪಮಾನವಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.