ಅರ್ಥಪೂರ್ಣವಾಗಿ ರಾಜ್ಯೋತ್ಸವ ಆಚರಣೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Team Udayavani, Oct 31, 2022, 3:07 PM IST

cm bommai

ಬೆಂಗಳೂರು: 67 ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಅರ್ಥಪೂರ್ಣವಾಗಿ ಆಚರಿಸುವ ಸಂಕಲ್ಪವನ್ನು ರಾಜ್ಯ ಸರ್ಕಾರ ಮಾಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಕರ್ನಾಟಕ ರಾಜ್ಯೋತ್ಸವ, ಕರ್ನಾಟಕ ರತ್ನ ಪ್ರಶಸ್ತಿ ಹಾಗೂ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಸಂಬಂಧಿಸಿದಂತೆ ವಿಧಾನಸೌಧದ ಸಮ್ಮೇಳನದಲ್ಲಿ ಸುದ್ಧಿಗೋಷ್ಠಿ ನಡೆಸಿದರು.

ನಾಳೆ ನಾಡಿನಾದ್ಯಂತ ಗ್ರಾಮಗಳಲ್ಲಿ, ನಗರಗಳಲ್ಲಿ, ಶಾಲೆ ಹಾಗೂ ಇತರೆ ಸಂಘ ಸಂಸ್ಥೆಗಳಲ್ಲಿ ಸರ್ಕಾರಿ ಕಚೇರಿಗಳಲ್ಲಿ ರಾಜ್ಯೋತ್ಸವದ ಆಚರಿಸಬೇಕು ಹಾಗೂ ಕನ್ನಡದ ಧ್ವಜಗಳನ್ನು ಹಾರಿಸಬೇಕು ಎಂದು ಕರೆ ನೀಡಿದರು.

ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ: ನಾಳೆ ಸಂಜೆ 4.00 ಗಂಟೆಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ವಿಧಾನಸೌಧದ ಮುಂಭಾಗದ ಮೆಟ್ಟಿಲುಗಳ ಮೇಲೆ ಹಮ್ಮಿಕೊಳ್ಳಲಾಗಿದೆ. ದಿವಂಗತ ಡಾ: ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರವಾಗಿ ಈ ಪ್ರಶಸ್ತಿಯನ್ನು ಸರ್ಕಾರ ಕೊಡಮಾಡುತ್ತಿದ್ದು, ಅಭಿಮಾನಿ ಕನ್ನಡಿಗರು ಭಾಗವಹಿಸಬೇಕೆಂದು ಮುಖ್ಯಮಂತ್ರಿಗಳು ಕೋರಿದರು.

ರಾಜ್ಯೋತ್ಸವ ಪ್ರಶಸ್ತಿ: ನಾಳೆ ಸಂಜೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಗಳ ವಿತರಣೆ ರವೀಂದ್ರ ಕಲಾಕ್ಷೇತ್ರದಲ್ಲಿ ಆಗಲಿದ್ದು, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಎಲ್ಲಾ ಶ್ರೇಷ್ಠ ವ್ಯಕ್ತಿಗಳಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಕಾರ್ಯಕ್ರಮದಲ್ಲಿ ಎಲ್ಲರೂ ಪಾಲ್ಗೊಳ್ಳಬೇಕೆಂದು ಮುಖ್ಯಮಂತ್ರಿಗಳು ತಿಳಿಸಿದರು.

ಬಂಡವಾಳ ಹೂಡಿಕೆದಾರರ ಸಮಾವೇಶ: ನವೆಂಬರ್ 2, 3 4 ರಂದು ಬಂಡವಾಳ ಹೂಡಿಕೆದಾರರ ಸಮಾವೇಶವನ್ನು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದೆ. ಜಗತ್ತಿನಾದ್ಯಂತ ಪ್ರಮುಖ ಉದ್ಯಮಿಗಳು, ಉದ್ದಿಮೆಯ ನಾಯಕರು ಈ ಸಮಾವೇಶದಲ್ಲಿ ಭಾಗವಹಿಸಿದ್ದು, ಜೊತೆಗೆ 5 ಲಕ್ಷ ಕೋಟಿ ರೂ.ಗಳಿಗೂ ಹೆಚ್ವಿನ ಬಂಡವಾಳ ಹೂಡಿಕೆಯಾಗುತ್ತದೆ. ಈಗಾಗಲೇ ಬಹಳಷ್ಟು ಜನ ತಮ್ಮ ಆಸಕ್ತಿಯನ್ನು ವ್ಯಕ್ತಪಡಿಸಿದ್ದು, ಅವರ ಯೋಜನೆಗಳ ಅನುಮೋದನೆಯನ್ನೂ ಮಾಡಲಾಗಿದೆ.  ಭರವಸೆ ಪತ್ರವನ್ನೂ ನಾಳೆ ವಿತರಿಸಲಿದ್ದು, ಮುಂದಿನ 3 ದಿನಗಳ ಕಾಲ ಹಲವಾರು ಕ್ಷೇತ್ರಗಳಲ್ಲಿ ಆಗುತ್ತಿರುವ ಪ್ರಗತಿ ಹಾಗೂ ನವೀಕರಿಸಬಹುದಾದ ಇಂಧನ, ಸೆಮಿಕಂಡಕ್ಟರ್, ಏರೋಸ್ಪೇಸ್, ರಕ್ಷಣಾ ಕ್ಷೇತ್ರ ಮುಂತಾದ ಪ್ರಮುಖ   ಕ್ಷೇತ್ರಗಳ ಸವಾಲುಗಳು ಹಾಗೂ ಬೆಳವಣಿಗೆಯ ಬಗ್ಗೆ  ಚರ್ಚಾ ಗೋಷ್ಠಿಗಳು  ನಡೆಯಲಿವೆ. ದೇಶ ಹಾಗೂ ಅಂತರರಾಷ್ಟ್ರೀಯ ಮಟ್ಟದ ಎಲ್ಲಾ ಪರಿಣಿತರು ಗೋಷ್ಠಿಗಳಲ್ಲಿ ಭಾಗವಹಿಸಲಿದ್ದಾರೆ. ಮೂರು ದಿನಗಳ ಈ ಕಾರ್ಯಕ್ರಮ ರಾಜ್ಯದಲ್ಲಿ ಮುಂದಿನ 5 ವರ್ಷಗಳ ಕಾಲ ಆರ್ಥಿಕ ಚಟುವಟಿಕೆಗಳ ಕುರಿತ ದಿಕ್ಸೂಚಿಯಾಗಲಿದೆ. ಇದರಲ್ಲಿಯೂ ಆಸಕ್ತರು, ಉದ್ಯಮಿಗಳು ಹಾಗೂ ಸಣ್ಣ ಕೈಗಾರಿಕೋದ್ಯಮಿಗಳಿಗೆ ಅವಕಾಶವಿದೆ. ಹೆಸರುಗಳನ್ನು ನೋಂದಾಯಿಸಿಕೊಂಡು ಭಾಗವಹಿಸಬೇಕು. ನೋಂದಣಿ ಮೂಲಕ ಮಾತ್ರವೇ ಸಮಾವೇಶಕ್ಕೆ ಪ್ರವೇಶವಿದೆ ಎಂದರು.

ತನಿಖೆ: ಇನ್ಸ್ಪೆಕ್ಟರ್ ನಂದೀಶ್ ಆತ್ಮಹತ್ಯೆ ಪ್ರಕರಣದ ತನಿಖೆ ಪ್ರಾರಂಭಿಸಲು ಡಿಜಿಪಿ ಅವರಿಗೆ ಸೂಚನೆ ನೀಡಲಾಗಿದೆ. ಸಂಪೂರ್ಣ, ವಿಸ್ತೃತ ತನಿಖೆ ಕೈಗೊಳ್ಳಲು ತಿಳಿಸಿದ್ದೇನೆ ಎಂದರು.

ವ್ಯಾಖ್ಯಾನ ಮಾಡುವುದಿಲ್ಲ: ಸಿದ್ದರಾಮಯ್ಯ ಅವರು ಸಾಲ ಪಡೆದಿರುವ ಬಗ್ಗೆ ಪತ್ರಿಕೆ ಯಲ್ಲಿ ಓದಿ ನನ್ನ ಗಮನಕ್ಕೆ ಬಂದಿದೆ. ಯಾವುದೇ ಆದರೂ ವ್ಯವಸ್ಥಿತವಾಗಿ ತನಿಖೆಯಾಗಬೇಕು. ರಮೇಶ್ ಅವರು ಲೋಕಾಯುಕ್ತಕ್ಕೆ ದೂರು ನೀಡುವುದಾಗಿ ಹೇಳಿದ್ದಾರೆ. ಕೊಟ್ಟರೆ ಆ ಪ್ರಕ್ರಿಯೆ ಯನ್ನು ಪ್ರಾರಂಭ ಮಾಡಲಾಗುತ್ತದೆ. ಈ ಸಂದರ್ಭದಲ್ಲಿ ನಾನು ವಿರೋಧ ಪಕ್ಷದ ರೀತಿಯಲ್ಲಿ ಯಾವುದೇ ವ್ಯಾಖ್ಯಾನ ಮಾಡುವುದಿಲ್ಲ. ಅವರಿಗೆ ಆಧಾರ ರಹಿತ ವಾಗಿ ವ್ಯಾಖ್ಯಾನ ಮಾಡುವ ರೂಢಿ ಇದೆ. ನಾನು ಹಾಗೆ ಮಾಡುವುದಿಲ್ಲ. ಸತ್ಯಹಿರಗೆ ಬರಲಿ ಎಂದರು.

ಕಾದು ನೋಡಿ: ಸೋಲಾರ್ ಹಗರಣ ತನಿಖೆಯಾಗುವುದೇ ಎಂಬ ಬಗ್ಗೆ ಪ್ರತಿಕ್ರಿಯೆ ನೀಡಿ ಕಾದು ನೋಡಿ ಎಂದರು.

ಟಾಪ್ ನ್ಯೂಸ್

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

4-siruguppa

Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್‌; ಎತ್ತು ಸಾವು

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.