ನಂದಿನಿ ಮಳಿಗೆಗಳಲ್ಲಿ ಹಣ್ಣು, ತರಕಾರಿ ಮಾರಾಟಕ್ಕೆ ಕ್ರಮ
Team Udayavani, Apr 27, 2020, 9:48 AM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ರಾಜ್ಯಾದ್ಯಂತ ಹಾಪ್ಕಾಮ್ಸ್ ಅಷ್ಟೇ ಅಲ್ಲದೆ, ಕೆಎಂಎಫ್ ಮಳಿಗೆಗಳ ಮೂಲಕವೂ ಹಣ್ಣು, ತರಕಾರಿ ಮಾರಾಟಕ್ಕೆ ತೋಟಗಾರಿಕಾ ಇಲಾಖೆ ಕ್ರಮ ಕೈಗೊಂಡಿದೆ.
ರೈತರು ಸ್ವಯಂ ಕೆಎಂಎಫ್ ಮಳಿಗೆ ಪಕ್ಕ ಹಣ್ಣು, ತರಕಾರಿ, ಹೂವು ಮಾರಾಟ ಮಾಡಲು ಅವಕಾಶ ಕಲ್ಪಿಸಿದೆ. ಈ ಕುರಿತು ಹೇಳಿಕೆ ನೀಡಿರುವ ತೋಟಗಾರಿಕೆ ಸಚಿವ ನಾರಾಯಣಗೌಡ, ಹಣ್ಣು, ತರಕಾರಿ ಮಾರಾಟ ಮಾಡಲಾಗದೆ ತೊಂದರೆಗೀಡಾಗಿದ್ದ ರೈತರಿಗೆ ಇದರಿಂದ ಅನುಕೂಲ ಆಗಲಿದೆ ಎಂದು ತಿಳಿಸಿದ್ದಾರೆ.
ರಾಜ್ಯಾದ್ಯಂತ ಕೆಎಂಎಫ್ ಹಾಗೂ 14 ಜಿಲ್ಲಾ ಹಾಲು ಒಕ್ಕೂಟ ಸೇರಿ 1500ಕ್ಕಿಂತ ಹೆಚ್ಚು ಮಳಿಗೆಗಳಿವೆ. ರೈತರು ಈ ಸ್ಥಳಗಳಲ್ಲಿ ಹಣ್ಣು, ತರಕಾರಿಗಳನ್ನು ನೇರವಾಗಿ ಮಾರಾಟ ಮಾಡಬಹುದು. ಹೀಗೆ ಮಾರಾಟಕ್ಕೆ ಬಂದ ರೈತರಿಗೆ ಕೆಎಂಎಫ್ ವತಿಯಿಂದ ಪ್ರತಿನಿತ್ಯ ಉಚಿತ ನೀರು, ಮಜ್ಜಿಗೆ, ಸ್ಯಾನಿಟೈಸರ್, ಕೈಗವಚ(ಗ್ಲೌಸ್), ಮಾಸ್ಕ್ ಗಳನ್ನ ನೀಡಲಾಗುವುದು. ಬೆಳಿಗ್ಗೆ 6ರಿಂದ ರಾತ್ರಿ 8 ಗಂಟೆವರೆಗೆ ಮಾರಾಟ ಮಾಡಬಹುದು.
ತೂಕದ ಯಂತ್ರ ಸೇರಿದಂತೆ ಹಣ್ಣು, ತರಕಾರಿ ಮಾರಾಟಕ್ಕೆ ಬೇಕಾದ ಇತರೆ ಸಾಮಗ್ರಿಗಳನ್ನು ರೈತರೇ ತರಬೇಕು. ಪ್ರತಿ ಹತ್ತು ಮಳಿಗೆಗೆ ಓರ್ವ ಮೇಲ್ವಿಚಾರಕರನ್ನು ನೇಮಿಸಲು ತೋಟಗಾರಿಕೆ ಇಲಾಖೆ ನಿರ್ಧರಿಸಿದೆ. ಹೆಚ್ಚಿನ ಮಾಹಿತಿಗೆ ರೈತರು ಇಲಾಖೆಯ ಉಪ ನಿರ್ದೇಶಕಿ ಕ್ಷಮಾ ಪಾಟೀಲ್ ಅವರನ್ನು (ಮೊಬೈಲ್ ಸಂಖ್ಯೆ 9480885820 ) ಸಂಪರ್ಕಿಸಲು ಕೋರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ
ಹೈಕಮಾಂಡ್ ಸೂಚನೆಗೆ ಔತಣಕೂಟ ಮುಂದಕ್ಕೆ ಹಾಕಿದ್ದೇವೆ, ರದ್ದು ಮಾಡಿಲ್ಲ: ಜಿ.ಪರಮೇಶ್ವರ್
ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.