ಸೆ.15ರೊಳಗೆ ಎಲ್ಲ ಶಾಲೆಗಳಿಗೆ ಪಠ್ಯ ಪುಸ್ತಕಗಳ ಪೂರೈಕೆಗೆ ಕ್ರಮ: ಶಿಕ್ಷಣ ಸಚಿವ ಬಿ.ಸಿ ನಾಗೇಶ್
Team Udayavani, Aug 25, 2021, 5:14 PM IST
ಬೆಂಗಳೂರು : 2021ಸೆಪ್ಟೆಂಬರ್ 15ರ ಒಳಗೆ ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಿಗೆ ಪಠ್ಯ ಪುಸ್ತಕಗಳನ್ನು ಪೂರೈಕೆ ಮಾಡುವ ಗುರಿ ಹೊಂದಲಾಗಿದೆ. ನಿಗದಿತ ಅವಧಿಯೊಳಗೆ ಪಠ್ಯ ಪುಸಕ್ತಗಳು ತಲುಪುವ ವಿಶ್ವಾಸವಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಬಿ.ಸಿ ನಾಗೇಶ್ ತಿಳಿಸಿದರು.
ವಿಧಾನ ಸೌಧದಲ್ಲಿ ಇಂದು (ಬುಧವಾರ, ಆಗಸ್ಟ್ 25) ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು, ‘ಕೋವಿಡ್-19 ಕಾರಣದಿಂದ ಸರಕಾರಿ ಮುದ್ರಣಾಲಯಗಳು ಕೆಲ ಅವಧಿಗೆ ಮುದ್ರಣ ಸ್ಥಗಿತಗೊಳಿಸಿದ್ದವು. ಹೀಗಾಗಿ, ಮುದ್ರಣ ಪ್ರಕ್ರಿಯೆ ವಿಳಂಬವಾಗಿದೆ. ಆದರೂ, ಶಾಲೆ ಆರಂಭಕ್ಕೆ ಮೊದಲೇ ಶೇ.50 ರಷ್ಟು ಪಠ್ಯ ಪುಸ್ತಕಗಳು ಶಾಲೆಗಳನ್ನು ತಲುಪಬೇಕು ಎಂಬ ಗುರಿ ಹೊಂದಲಾಗಿತ್ತು. ಅದರಂತೆ ರಾಜ್ಯದ ಶೇ.50ಕ್ಕಿಂತ ಹೆಚ್ಚು ಶಾಲೆಗಳಿಗೆ ಪುಸ್ತಕಗಳನ್ನು ಪೂರೈಸಲಾಗಿದೆ’ ಎಂದು ತಿಳಿಸಿದರು.
ಇದನ್ನೂ ಓದಿ : ಇಂಡಿಯನ್ ಐಡಲ್ 12: ಪ್ರಶಸ್ತಿ ವಿಜೇತ ಪವನ್ ದೀಪ್ ಉತ್ತರಾಖಂಡ್ ನ ಬ್ರ್ಯಾಂಡ್ ಅಂಬಾಸಿಡರ್
‘ಇಂದಿನವರೆಗೆ ಶೇ.70ಕ್ಕಿಂತ ಹೆಚ್ಚು ಪಠ್ಯ ಪುಸ್ತಕಗಳು ಮುದ್ರಣಗೊಂಡಿವೆ. ಮುಂದಿನ ಒಂದು ವಾರದೊಳಗೆ ಮುದ್ರಣಗೊಂಡಿರುವ ಎಲ್ಲ ಪುಸ್ತಕಗಳು ಶಾಲೆಗಳಿಗೆ ತಲುಪುವಂತೆ ವ್ಯವಸ್ಥೆ ಮಾಡಲಾಗುತ್ತದೆ. ಆಯಾ ತರಗತಿಗಳಿಗೆ ಸಂಬಂಧಿಸಿದ ಎಲ್ಲ ವಿಷಯ, ಭಾಷೆ ಪುಸ್ತಕಗಳು ಮುದ್ರಣಗೊಂಡ ಕೂಡಲೇ ಶಾಲೆಗಳಿಗೆ ಪೂರೈಕೆ ಮಾಡಲಾಗುತ್ತದೆ. ಸೆಪ್ಟಂಬರ್ 15ರ ಒಳಗಾಗಿ ಎಲ್ಲ ಶಾಲೆಗಳಿಗೆ ಪುಸ್ತಕಗಳು ತಲುಪಿಸುವ ಗುರಿ ಹೊಂದಲಾಗಿದೆ’ ಎಂದು ಸಚಿವರು ತಿಳಿಸಿದರು.
‘ಆನ್ ಲೈನ್ ಶಿಕ್ಷಣದ ಅಗತ್ಯಕ್ಕೆ ತಕ್ಕಂತೆ ಪಠ್ಯವನ್ನು ಸಿದ್ದಪಡಿಸಿ ಆನ್‌ಲೈನ್‌ಗೆ ಅಪ್‌ಲೋಡ್ ಮಾಡಲಾಗಿತ್ತು. ಅವುಗಳನ್ನು ಡೌನ್‌ಲೋಡ್ ಮಾಡಿಕೊಳ್ಳುವಂತೆ ಮಕ್ಕಳಿಗೆ, ಪಾಲಕರಿಗೆ ತಿಳಿಸಲಾಗಿತ್ತು. ಹೀಗಾಗಿ, ಬಹುತೇಕ ಮಕ್ಕಳು ಆನ್‌ಲೈನ್‌ನಲ್ಲೇ ಪುಸ್ತಕಗಳನ್ನು ಡೌನ್‌ಲೋಡ್ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ’ ಎಂದು ಸಚಿವರು ತಿಳಿಸಿದರು.
‘ಶಾಲೆಗಳ ಮುಖ್ಯ ಶಿಕ್ಷಕರಿಗೆ, ಆಡಳಿತ ಮಂಡಳಿಗಳಿಗೆ ಪಠ್ಯ ಪುಸ್ತಕಗಳನ್ನು ಡೌನ್‌ಲೋಡ್ ಮಾಡಿಕೊಂಡು ವಿದ್ಯಾರ್ಥಿಗಳಿಗೆ ಹಂಚಿಕೆ ಮಾಡುವಂತೆ ಸೂಚನೆ ನೀಡಲಾಗಿದೆ’ ಎಂದು ಸಚಿವರು ಹೇಳಿದರು.
ಇದನ್ನೂ ಓದಿ : ಅಂದು ಅಫ್ಘಾನ್ ಸರ್ಕಾರದಲ್ಲಿ ಸಚಿವ, ಇಂದು ಜರ್ಮನಿ ಬೀದಿಯಲ್ಲಿ ಪಿಜ್ಜಾ ಮಾರುತ್ತಿದ್ದಾರೆ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.