ಬಿಎಸ್‌ವೈ ನಿವಾಸಕ್ಕೆ ನಾಯಕರ ದೌಡು
Team Udayavani, May 25, 2019, 3:08 AM IST
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭೂತ ಪೂರ್ವ ಯಶಸ್ಸು ಸಾಧಿಸಿರುವ ಬೆನ್ನಲ್ಲೇ ಹಲವು ಸಂಸದರು, ನಾಯಕರು ಶುಕ್ರವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ನಿವಾಸಕ್ಕೆ ತೆರಳಿ ಅಭಿನಂದನೆ ಸಲ್ಲಿಸಿದರು.
ಕಲಬುರಗಿ ಸಂಸದ ಡಾ.ಉಮೇಶ್ ಜಾಧವ್ ಅವರು ಯಡಿಯೂರಪ್ಪ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು. ಬಳಿಕ ಪ್ರತಿಕ್ರಿಯಿಸಿದ ಜಾಧವ್, “ನಾನು ಮೊದಲಿನಿಂದಲೂ ಮೈತ್ರಿ ಸರ್ಕಾರವನ್ನು ವಿರೋಧಿಸುತ್ತಲೇ ಇದ್ದೆ. ನನ್ನ ಕ್ಷೇತ್ರಕ್ಕೆ ಬರಬೇಕಿದ್ದ ಅನುದಾನವನ್ನು ಸಂಪೂರ್ಣ ನಿಲ್ಲಿಸಲಾಗಿತ್ತು. ಹಾಗಾಗಿ, ಕಾಂಗ್ರೆಸ್ ತೊರೆದು ಬಿಜೆಪಿ ಸೇರಿ ಸಂಸದನಾಗಿದ್ದೇನೆ’ ಎಂದರು.
“ನಾವು ಮೈತ್ರಿ ಸರ್ಕಾರವನ್ನು ಬೀಳಿಸುವ ಅಗತ್ಯವಿಲ್ಲ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಕೇಂದ್ರ ಸಚಿವ ಸ್ಥಾನವನ್ನು ನಾನಾಗಿಯೇ ಕೇಳುವುದಿಲ್ಲ. ನಾನು ಅರ್ಹನಿದ್ದು, ಸಚಿವ ಸ್ಥಾನ ನೀಡಿದರೆ ನಿಭಾಯಿಸುತ್ತೇನೆ’ ಎಂದು ತಿಳಿಸಿದರು.
ಯಡಿಯೂರಪ್ಪ ನಿವಾಸಕ್ಕೆ ಮಾಜಿ ಸಚಿವ ಬಿ.ಜೆ.ಪುಟ್ಟಸ್ವಾಮಿ ಕೂಡ ಭೇಟಿ ನೀಡಿ ಚರ್ಚಿಸಿದರು. ಪ್ರಜ್ವಲ್ ರೇವಣ್ಣ ರಾಜೀನಾಮೆ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಬಿ.ಜೆ.ಪುಟ್ಟಸ್ವಾಮಿ, ದೇವೇಗೌಡರು ತಮ್ಮ ಮಕ್ಕಳನ್ನು ಬಿಟ್ಟು ಕುಟುಂಬದ ಯಾರನ್ನೂ ರಾಜಕೀಯಕ್ಕೆ ತರುವುದಿಲ್ಲ ಎಂದು ಹೇಳುತ್ತಲೇ ಮೊಮ್ಮಕ್ಕಳಿಗೆ ಟಿಕೆಟ್ ಕೊಡಿಸಿ ತಮ್ಮ ಮೊಮ್ಮಗನಿಗೆಂದೇ ಹಾಸನ ಕ್ಷೇತ್ರ ಬಿಟ್ಟು ಕೊಟ್ಟರು.
ಈಗ ಪ್ರಜ್ವಲ್ ರೇವಣ್ಣ ತಾತನಿಗಾಗಿ ರಾಜೀನಾಮೆ ನೀಡುವುದಾಗಿ ಹೇಳುತ್ತಿರುವುದು ಕೇವಲ ನಾಟಕ. ದೇವೇಗೌಡರನ್ನು ಜನರೇ ತಿರಸ್ಕರಿಸಿದ್ದಾರೆ. ಒಂದೊಮ್ಮೆ ಪ್ರಜ್ವಲ್ ರೇವಣ್ಣ ರಾಜೀನಾಮೆ ನೀಡಿದರೆ ಬಿಜೆಪಿಯ ಮತ್ತೂಂದು ಸ್ಥಾನ ಏರಿಕೆಯಾಗಲಿದೆ ಎಂದರು.
ರಾಜ್ಯ ಬಿಜೆಪಿ ಉಪಾಧ್ಯಕ್ಷೆ ತೇಜಸ್ವಿನಿ ಅನಂತ ಕುಮಾರ್, ಇಡೀ ದೇಶಕ್ಕೆ ಬಹಳ ಆನಂದ ತಂದಿರುವ ದಿನಗಳಿವು. ಕರ್ನಾಟಕದಲ್ಲೂ ಪಕ್ಷಕ್ಕೆ ಅಭೂತಪೂರ್ವ ಗೆಲುವು ದೊರಕಿದೆ. ಅನಂತ ಕುಮಾರ್ ಅವರ ಸಹೋದ್ಯೋಗಿಗಳು ಅವರನ್ನು ನೆನಪಿಸಿಕೊಂಡಿದ್ದಾರೆ. ಕೇಂದ್ರ ಸಚಿವ ಸ್ಥಾನಕ್ಕೆ ರಾಜ್ಯದಲ್ಲಿ ಹಲವು ಮಂದಿ ಸಮರ್ಥ ಸಂಸದರಿದ್ದಾರೆ. ಯಾರಿಗೆ ಸಚಿವ ಸ್ಥಾನ ನೀಡಬೇಕು ಎಂದು ಮೋದಿಯವರು ನಿರ್ಧರಿಸುತ್ತಾರೆ. ದೇಶಕ್ಕೆ ಯಾವುದು ಸೂಕ್ತವೋ ಅಂತಹ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಹೇಳಿದರು.
ಮಣ್ಣಿನ ಮಗ ಹಾಸನಕ್ಕೆ ಹೊರತು ತುಮಕೂರಿಗಲ್ಲ: ತುಮಕೂರು ಕ್ಷೇತ್ರದ ಬಿಜೆಪಿ ಸಂಸದ ಜಿ.ಎಸ್.ಬಸವರಾಜು ಮಾತನಾಡಿ, ದೇವೇಗೌಡರು ಹಾಸನಕ್ಕೆ ಮಣ್ಣಿನ ಮಗನೇ ಹೊರತು ತುಮಕೂರಿಗಲ್ಲ. ತುಮಕೂರಿನ ಮಣ್ಣಿನ ಮಗ ಗೆದ್ದಾಯ್ತು. ದೇವೇಗೌಡರು ಬಹಳ ಜನರ ಸೋಲಿಗೆ ಕಾರಣರಾಗಿದ್ದಾರೆ. ಎರಡು ಬಾರಿ ನನ್ನ ಸೋಲಿಗೂ ಕಾರಣರಾಗಿದ್ದಾರೆ. ಈ ಬಾರಿ ಆಕಸ್ಮಿಕವಾಗಿ ನನ್ನ ಕೈಗೆ ಸಿಕ್ಕಿ ಹಾಕಿಕೊಂಡರು. ಜನ ತಕ್ಕ ಪಾಠ ಕಲಿಸಿದ್ದಾರೆ.
ಅವರು ವಯೋವೃದ್ಧರು. ಇನ್ನಾದರೂ ನೆಮ್ಮದಿಯಿಂದ ರಾಜಕಾರಣ ಮಾಡಿಕೊಂಡಿರಲಿ. ಮಹಾಘಟಬಂಧನವೆಲ್ಲಾ ಬೇಡ ಎಂದು ಹೇಳಿದರು. ಅವರ ದ್ವೇಷದ ರಾಜಕಾರಣವೇ ಸೋಲಿಗೆ ಕಾರಣವಾಯಿತು. ತುಮಕೂರಿಗೆ ಹೇಮಾವತಿ ನೀರು ಹರಿಯದಂತೆ ಅವರು ಹಾಗೂ ಅವರ ಪುತ್ರ ಎಚ್.ಡಿ.ರೇವಣ್ಣ ಮೋಸ ಮಾಡಿದರು. ಕಾಂಗ್ರೆಸ್‌ನವರೂ ನಮ್ಮ ಸ್ನೇಹಿತರೇ. ತುಮಕೂರಿನಲ್ಲಿ ದೇವೇಗೌಡರು ಹಾಗೂ ನನಗೆ ಸ್ಪರ್ಧೆಯಿತ್ತು. ಕಾಂಗ್ರೆಸ್ ನಾಯಕರು ನನಗೆ ಸಹಕಾರ ನೀಡಿರಬಹುದೇನೋ. ಅವರಿಗೂ ಧನ್ಯವಾದ ಹೇಳುತ್ತೇನೆ ಎಂದು ತಿಳಿಸಿದರು.
ಚಿಂಚೋಳಿಯಲ್ಲಿ ಗೆದ್ದ ಪಕ್ಷ ಅಧಿಕಾರಕ್ಕೆ: ಮಾಜಿ ಸಚಿವ ವಿ.ಸೋಮಣ್ಣ ಮಾತನಾಡಿ, ಚಿಂಚೋಳಿ ಕ್ಷೇತ್ರದಲ್ಲಿ ಗೆದ್ದ ಪಕ್ಷ ರಾಜ್ಯದಲ್ಲಿ ಅಧಿಕಾರ ಹಿಡಿಯುತ್ತದೆಯಂತೆ. ಅದು ಈಗ ಕಾಕತಾಳೀಯವೋ ಏನೋ ಅದೇ ರೀತಿ ಆಗುತ್ತಿರುವಂತಿದೆ. ಚಿಂಚೋಲಿಯಲ್ಲಿ ಬಿಜೆಪಿ ಗೆದ್ದಿದೆ. ತುಮಕೂರು ಕ್ಷೇತ್ರದಲ್ಲಿ ಬಿಜೆಪಿ ಗೆಲುವಿಗೆ ಕಾಂಗ್ರೆಸ್ಸಿಗರ ಕೊಡುಗೆಯೂ ಇದೆ ಎಂದು ಹೇಳಿದರು. ಪ್ರಜ್ವಲ್ ರೇವಣ್ಣ ರಾಜೀನಾಮೆ ನೀಡುವ ನಿರ್ಧಾರ ಕೈಗೊಂಡಿದ್ದರೆ ಅದು ಅವರ ವೈಯಕ್ತಿಕ ನಿರ್ಧಾರ. ಅದಕ್ಕೆ ನಾವೇನು ಮಾಡಲು ಸಾಧ್ಯ ಎಂದು ಪ್ರಶ್ನಿಸಿದರು. ಕೆ.ಎಚ್.ಮುನಿಯಪ್ಪ ಅವರನ್ನು ಪರಾಭವಗೊ ಳಿಸಿದ ಬಿಜೆಪಿಯ ಮುನಿಸ್ವಾಮಿಯವರು ಯಡಿಯೂರಪ್ಪ ಅವರನ್ನು ಭೇಟಿಯಾಗಿ ಧನ್ಯವಾದ ಹೇಳಿದರು.
ಬಳಿಕ ಪ್ರತಿಕ್ರಿಯಿಸಿದ ಅವರು, “ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಗೆ ಅಗತ್ಯವಿರುವಷ್ಟು ಶಾಸಕರನ್ನು ಕರೆ ತರುವುದಾಗಿ ನಾನು ಹೇಳಿಲ್ಲ. ಕಳ್ಳರು, ಸುಳ್ಳರನ್ನು ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ಮಾಜಿ ಶಾಸಕರಾದ ಸುಧಾಕರ್, ಕೊತ್ತೂರು ಮಂಜುನಾಥ್, ಮಂಜುನಾಥಗೌಡ ಅವರಂಥವರೆಲ್ಲಾ ಬಿಜೆಪಿ ಸೇರಲಿದ್ದಾರೆ ಎಂದಷ್ಟೇ ಹೇಳಿದ್ದೇನೆ. ನಾನು ಕೋಲಾರದಲ್ಲಿ ಗೆಲುವು ಸಾಧಿಸಲು ಕಾಂಗ್ರೆಸ್ ನಾಯಕರೂ ಕಾರಣ ಎಂದಷ್ಟೇ ಹೇಳಬಲ್ಲೆ. ಹಾಗೆಂದು ಅವರನ್ನೆಲ್ಲಾ ಬಿಜೆಪಿಗೆ ಕರೆ ತರುವುದಾಗಿ ರಾಜ್ಯಾಧ್ಯಕ್ಷರಿಗೆ ಭರವಸೆ ನೀಡಿಲ್ಲ’ ಎಂದು ಸ್ಪಷ್ಟನೆ ನೀಡಿದರು.
ರಾಷ್ಟ್ರಮಟ್ಟದಲ್ಲಿ ಸಾಕಷ್ಟು ಬದಲಾವಣೆಯಾಗುತ್ತಿದೆ. ಕಾಂಗ್ರೆಸ್ ವಿಭಜನೆಯ ಹಾದಿಯಲ್ಲಿದ್ದು, ಅದರ ಪರಿಣಾಮ ರಾಜ್ಯದ ಮೇಲೂ ಉಂಟಾಗಲಿದೆ. ರಾಜ್ಯದಲ್ಲಿ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಸಂಬಂಧ ಹಳಸಿದೆ. ಮೋದಿಯವರು ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ರಾಜ್ಯದಲ್ಲೂ ರಾಜಕೀಯ ಧ್ರುವೀಕರಣ ಶುರುವಾಗಲಿದೆ. ಸರ್ಕಾರ ರಚನೆಗೆ ಅಗತ್ಯವಿರುವಷ್ಟು ಶಾಸಕರ ಬಲ ಬಿಜೆಪಿಗೆ ಸಿಗಲಿದೆ. ಅದು ಹೇಗೆ ಎಂಬುದನ್ನು ಮುಂದೆ ನೋಡುತ್ತೀರಿ.
-ಬಸವರಾಜ ಬೊಮ್ಮಾಯಿ, ಮಾಜಿ ಸಚಿವ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.