ಮೇಕೆದಾಟು ಅನುಷ್ಠಾನ ಗಗನಕುಸುಮ
Team Udayavani, Jul 11, 2018, 6:00 AM IST
ರಾಮನಗರ: ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ ಜಿಲ್ಲೆಗಳ ಕುಡಿಯುವ ನೀರಿನ ಬವಣೆಯನ್ನು ಬಹುಮಟ್ಟಿಗೆ
ನೀಗಿಸಬಲ್ಲ ಮೇಕೆದಾಟು ಯೋಜನೆ ಅನುಷ್ಠಾನದ ಬಗ್ಗೆ ಜಿಲ್ಲೆಯ ಜನತೆ ಸಿಎಂ ಎಚ್.ಡಿ.ಕುಮಾರಸ್ವಾಮಿ ಮತ್ತು ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರ ಮೇಲೆ ದೃಷ್ಟಿ ನೆಟ್ಟಿದ್ದಾರೆ.
ಸಿಎಂ ಕುಮಾರಸ್ವಾಮಿ ಅವರ ರಾಜಕೀಯ ಕರ್ಮ ಭೂಮಿ ರಾಮನಗರ, ಸಚಿವ ಡಿ.ಕೆ.ಶಿವಕುಮಾರ್ ಅವರ ತವರು ಜಿಲ್ಲೆ ಸಹ ರಾಮನಗರ. ಇಬ್ಬರೂ
ರಾಜ್ಯದ ಪ್ರಭಾವಿ ನಾಯಕರಾಗಿದ್ದು, ಅವರು ಇಚ್ಚಾಶಕ್ತಿ ತಳೆದು, ದೃಢ ಸಂಕಲ್ಪ ಮಾಡಿದರೆ ಮೇಕೆದಾಟು ಯೋಜನೆಯನ್ನು ಅನುಷ್ಠಾನಗೊಳಿಸುವುದು ಕಷ್ಟದ ಕೆಲಸವೇನಲ್ಲ ಎಂಬುದು ಜನತೆಯ ವಿಶ್ವಾಸ.
ರಾಜಕೀಯ ಇಚ್ಚಾಶಕ್ತಿ ಕೊರತೆ: ಮೇಕೆದಾಟು ಯೋಜನೆ ಜಿಲ್ಲೆಯ ಜನತೆಯ ಬಹು ನಿರೀಕ್ಷಿತ ಯೋಜನೆ. ಮೇಕೆದಾಟಿನಲ್ಲಿ ಕಾವೇರಿ ನದಿಗೆ ಅಡ್ಡಲಾಗಿ
ಡ್ಯಾಂ ನಿರ್ಮಿಸಿ ವಿದ್ಯುತ್ ಉತ್ಪಾದಿಸುವುದು, ಕುಡಿಯುವ ನೀರಿಗೆ ಶಾಶ್ವತ ಪರಿಹಾರ ಕಂಡಕೊಳ್ಳು ವುದರ ಬಗ್ಗೆ 1963ರಲ್ಲೇ ಪ್ರಸ್ತಾಪವಾಗಿತ್ತು. ಕಾವೇರಿ ನೀರಿನ ಹಂಚಿಕೆ ವಿಚಾರದಲ್ಲಿ ಕರ್ನಾಟಕ ಮತ್ತು ತಮಿಳುನಾಡು ಸರ್ಕಾರಗಳ ನಡುವೆ 1996-97ನೇ ಸಾಲಿನಲ್ಲಿ ನಡೆದ ಸಭೆಯಲ್ಲೂ ಮೇಕೆದಾಟು ಯೋಜನೆ ಪ್ರಸ್ತಾಪವಾಗಿದೆ. ಈ ನಡುವೆ ಮೇಕೆದಾಟು ಹೋರಾಟ ಸಮಿತಿ ಪ್ರಧಾನಿ ಮೋದಿ ಅವರಿಗೂ ಪತ್ರ ಬರೆದಿದೆ.
ಅವರಂತೆ ನೀವಾಗಬೇಡಿ!: ಯೋಜನೆಗಾಗಿ ಧ್ವನಿ ಎದ್ದಾಗಲೆಲ್ಲ, ಏನಾದರೊಂದು ನೆಪವೊಡ್ಡಿ ಹೋರಾಟ ಗಾರರ ಬಾಯಿ ಮುಚ್ಚಿಸಿದ್ದು ಸಾಕು, ಕಾವೇರಿ ತೀರ್ಪು, ಸುಪ್ರೀಂ ಕೋಟ್ ಎಂದು ಜನರನ್ನು ಗುಗ್ಗುಗಳನ್ನಾಗಿ ಮಾಡಬೇಡಿ ಎಂದು ಮೇಕೆದಾಟು ಹೋರಾಟ ಸಮಿತಿಯ ಪದಾಧಿಕಾರಿಗಳೂ ಕಿಡಿ ಕಾರಿದ್ದಾರೆ. ಮತ್ತೆ ಹೋರಾಟಕ್ಕೆ ನಾಂದಿ ಹಾಡಿದ್ದಾರೆ.
ಸಿ.ಡಬ್ಲ್ಯು.ಸಿಗೆ ಪ್ರಸ್ತಾವನೆ
ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಸಿದಟಛಿವಾದ ಡಿಪಿಆರ್ ನೊಂದಿಗೆ ಮೇಕೆದಾಟು ಯೋಜನೆಯ ಪ್ರಸ್ತಾವನೆ ಕೇಂದ್ರ ಜಲ ಆಯೋಗ ಅನುಮೋದನೆಗಾಗಿ 2017ರ ಜೂನ್‌ನಲ್ಲಿ ಕಳುಹಿಸಿದೆ. ತಮಿಳುನಾಡು ಸಿಎಂ 2017ರ ಜುಲೈನಲ್ಲಿ ತಗಾದೆ ತೆಗೆದು ತಮಿಳು ನಾಡನ್ನು ವಿಶ್ವಾಸಕ್ಕೆ ತೆಗೆದು ಕೊಳ್ಳದೆ ಕರ್ನಾಟಕ ಕಳುಹಿಸಿರುವ ಪ್ರಸ್ತಾವನೆಯನ್ನು ಪರಿಗಣಿಸಬಾರದೆಂದು ಪ್ರಧಾನಮಂತ್ರಿ ಅವರಿಗೆ ಪತ್ರವನ್ನು ಬರೆದಿದ್ದರು.
ಬಿ.ವಿ.ಸೂರ್ಯ ಪ್ರಕಾಶ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ
Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.