ಮನಸ್ತಾಪ, ಪ್ರತ್ಯೇಕ ವಾಸ: ವಿವಾಹ ವಿಚ್ಛೇದನಕ್ಕೆ ಆಧಾರವಲ್ಲ
Team Udayavani, Mar 27, 2022, 8:10 AM IST
ಬೆಂಗಳೂರು: ದಂಪತಿ ನಡುವೆ ಮನಸ್ತಾಪ, ಜಗಳವಿದೆ ಹಾಗೂ ಅವರು ಪ್ರತ್ಯೇಕವಾಗಿ ವಾಸ ಮಾಡುತ್ತಿದ್ದಾರೆ ಎಂದ ಮಾತ್ರಕ್ಕೆ ವಿವಾಹ ವಿಚ್ಛೇದನದ ಮನವಿಯನ್ನು ಪರಿಗಣಿಸಬೇಕೆಂದಿಲ್ಲ ಎಂದು ಹೈಕೋರ್ಟ್ ಹೇಳಿದೆ.
ವಿವಾಹ ವಿಚ್ಛೇದನಕ್ಕೆ ಡಿಕ್ರಿ (ಆದೇಶ) ನೀಡಿದ್ದ ಬೆಂಗಳೂರಿನ ನಾಲ್ಕನೇ ಹೆಚ್ಚುವರಿ ಕೌಟುಂಬಿಕ ನ್ಯಾಯಾಲಯದ ಕ್ರಮವನ್ನು ಹೈಕೋರ್ಟ್ ರದ್ದುಪಡಿಸಿದೆ. ಪತಿಯ ವಿವಾಹ ವಿಚ್ಛೇದನ ಮನವಿಯನ್ನು ಮಾನ್ಯ ಮಾಡಿದ್ದ ಕೌಟುಂಬಿಕ ನ್ಯಾಯಾಲಯದ ಕ್ರಮವನ್ನು ಪ್ರಶ್ನಿಸಿ ಪತ್ನಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ| ಆಲೋಕ್ ಆರಾಧೆ ಮತ್ತು ನ್ಯಾ| ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಆದೇಶ ನೀಡಿದೆ.
ಅರ್ಜಿದಾರ ದಂಪತಿಯ ನಡುವೆ ಸರಿಪಡಿಸ ಲಾಗದಂತಹ ಕಂದಕವಿದೆ. ಒಂಬತ್ತು ವರ್ಷಗಳಿಂದ ಅವರು ಪ್ರತ್ಯೇಕವಾಗಿ ವಾಸ ಮಾಡುತ್ತಿದ್ದಾರೆ. ಹಾಗಾಗಿ ಇದು ವಿವಾಹ ವಿಚ್ಛೇದನಕ್ಕೆ ಅರ್ಹವಾಗಿದೆ ಎಂಬ ಅಭಿಪ್ರಾಯದೊಂದಿಗೆ ಕೌಟುಂಬಿಕ ನ್ಯಾಯಾಲಯ ವಿಚ್ಛೇದ ನದ ಡಿಕ್ರಿ ನೀಡಿರುವುದು ಸರಿಯಲ್ಲ. ಪತಿ-ಪತ್ನಿಯರ ಆರೋಪಗಳನ್ನು ಆಯಾ ಸಮಾಜದ ರೀತಿ ರಿವಾಜುಗಳ ನಿರ್ದಿಷ್ಟ ತಳಹದಿಯಲ್ಲಿ ಗಮನಿಸಬೇಕಾಗುತ್ತದೆ’ ಎಂದು ನ್ಯಾಯಪೀಠ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: ಉತ್ತಮ ಹಿಂಗಾರು: ಬಂಪರ್ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
RTO; ಫಿಟ್‌ನೆಸ್ ಸರ್ಟಿಫಿಕೇಟ್‌ಗಿನ್ನು ಆರ್‌ಟಿಒ ಬೇಕಿಲ್ಲ!
High Court: ತೃತೀಯ ಲಿಂಗಿಗಳ ಜನನ, ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿ; ಹೈಕೋರ್ಟ್
Havyaka Sammelana; ಹೆಚ್ಚು ಮಕ್ಕಳನ್ನು ಹೆರಿ, ಮಠ ಸಲಹುತ್ತದೆ: ಸ್ವಾಮೀಜಿ ಕರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.