ರಾಜ್ಯ ಸೇಫ್ ಝೋನ್ ನಲ್ಲಿದೆ; ಅರ್ಕಾವತಿ ವೀಕ್ ಝೋನ್? ಇಲಾಖೆ ಹೇಳೋದೇನು
Team Udayavani, Apr 18, 2017, 2:07 PM IST
ಬೆಂಗಳೂರು: ತುಮಕೂರು, ಮಂಡ್ಯ ಸೇರಿದಂತೆ ಬೆಂಗಳೂರಿನ ಹಲವೆಡೆ ಮಂಗಳವಾರ ಬೆಳಗ್ಗೆ 7.30ರ ಸುಮಾರಿಗೆ ಲಘು ಭೂಕಂಪನ ಸಂಭವಿಸಿತ್ತು. ಏತನ್ಮಧ್ಯೆ ಕರ್ನಾಟಕ ರಾಜ್ಯ ಸೇಫ್ ಝೋನ್(ವಲಯ)ನಲ್ಲಿದ್ದು ಭೂಕಂಪನದ ಭಯ ಬೇಡ ಎಂದು ಭೂಗರ್ಭ ಮಾಪನ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಇವತ್ತು ಸಂಭವಿಸಿರುವುದ ಲಘು ಭೂಕಂಪನ. ಇಂದಿನ ಭೂಕಂಪ ಮಾಪನ ಕೇಂದ್ರದಲ್ಲಿ ದಾಖಲಾಗಿಲ್ಲ. ರಿಕ್ಷರ್ ಮಾಪಕದಲ್ಲಿ 1ಕ್ಕಿಂತ ಕಡಿಮೆ ತೀವ್ರತೆ ದಾಖಲಾಗಲ್ಲ. 2ನೇ ತಾರೀಕು ನಡೆದ ಭೂಕಂಪ ದಾಖಲಾಗಿದೆ. ಭೂಕಂಪ ವಲಯ 2 ಮತ್ತು 3ರ ವಲಯದಲ್ಲಿ ಮಾತ್ರ ಇದೆ. ಹಾಗಾಗಿ ರಾಜ್ಯದಲ್ಲಿ 5ಕ್ಕಿಂತ ಹೆಚ್ಚು ತೀವ್ರತೆಯ ಭೂಕಂಪನ ಸಂಭವಿಸಲ್ಲ ಎಂದು ಭೂಗರ್ಭ ಮಾಪನ ಇಲಾಖೆ ನಿರ್ದೇಶಕ ಶ್ರೀನಿವಾಸ್ ರೆಡ್ಡಿ ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರ ಜೊತೆ ಮಾತನಾಡುತ್ತ ಮಾಹಿತಿ ನೀಡಿದ್ದಾರೆ.
ಅರ್ಕಾವತಿ ರಿವರ್ ಝೋನ್ ವೀಕ್ ಝೋನ್ ಆಗಿದೆ. ಹೀಗಾಗಿ ಅಲ್ಲಿ ಇವತ್ತು ಲಘು ಭೂಕಂಪನ ಸಂಭವಿಸಿರುವ ಸಾಧ್ಯತೆ ಇದೆ ಎಂದು ಹೇಳಿದರು. ಭೂಮಿಯ ಒಳಪದರಗಳ ಒತ್ತಡದಿಂದಾಗಿ ಭೂಕಂಪನ ಸಂಭವಿಸಿದೆ ಎಂದು ತಿಳಿಸಿದರು.
ಅರ್ಕಾವತಿ ವೀಕ್ ಝೋನ್?
ಅರ್ಕಾವತಿ ನದಿ ಪ್ರದೇಶದಲ್ಲಿ ಲಘು ಭೂಕಂಪನ ಸಂಭವಿಸಿದ್ದು, ಬೆಂಗಳೂರಿನ ಭೂಕಂಪನಕ್ಕೂ, ರಿಯಲ್ ಎಸ್ಟೇಟ್ ಗೂ ಸಂಬಂಧ ಇದೆಯಾ ಎಂಬ ಪ್ರಶ್ನೆ ಹರಿದಾಡತೊಡಗಿದೆ. ರಿಯಲ್ ಎಸ್ಟೇಟ್ ಮಾಫಿಯಾದಿಂದಾಗಿ ಅರ್ಕಾವತಿ ಪ್ರದೇಶ ವೀಕ್ ಝೋನ್ ಆಗಿದೆ ಎಂದು ಹೇಳಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.