8 ಹೊಸ ಡಿಪ್ಲೊಮಾ ಕೋರ್ಸುಗಳಿಗೆ ಚಾಲನೆ ನೀಡಿದ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ
Team Udayavani, Aug 12, 2021, 3:50 PM IST
ಬೆಂಗಳೂರು: ಉದ್ಯೋಗ ಮಾರುಕಟ್ಟೆ ಹಾಗೂ ಕೈಗಾರಿಕೆಗಳ ಬೇಡಿಕೆಗಳಿಗೆ ತಕ್ಕಂತೆ ಮಾನವ ಸಂಪನ್ಮೂಲವನ್ನು ಒದಗಿಸುವ ಉದ್ದೇಶದಿಂದ ಎಂಟು ಹೊಸ ಡಿಪ್ಲೊಮಾ ಕೋರ್ಸುಗಳಿಗೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಚಾಲನೆ ನೀಡಿದರು.
ವಿಧಾನಸೌಧದಲ್ಲಿಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ನೂತನ ಕೋರ್ಸುಗಳಿಗೆ ಹಸಿರು ನಿಶಾನೆ ತೋರಿದ ನಂತರ ಮಾತನಾಡಿದ ಅವರು, ರಾಜ್ಯದಲ್ಲಿ ಹೆಚ್ಚೆಚ್ಚು ಉದ್ಯೋಗಾವಕಾಶ ಸೃಷ್ಟಿಸುವುದು, ಕೈಗಾರಿಕೆಗಳಿಗೆ ಉತ್ಕೃಷ್ಟ ಮಾನವ ಸಂಪನ್ಮೂಲ ಒದಗಿಸುವುದೇ ಹೊಸ ಕೋರ್ಸುಗಳ ಗುರಿ ಎಂದರು.
ಡಿಪ್ಲೊಮಾದಲ್ಲಿ ಸದ್ಯ 33 ಕೋರ್ಸ್ ಗಳಿವೆ. ಇವುಗಳಲ್ಲಿ ಹಳೆಯ, ಅಪ್ರಸ್ತುತ ಕೋರ್ಸುಗಳನ್ನು ಕೈಬಿಡಲಾಗಿದೆ. ಈಗಾಗಲೇ ಹೊಸ ಪಠ್ಯವನ್ನು ಅಳವಡಿಸಲಾಗಿದೆ. ಈಗ 21ನೇ ಶತಮಾನದ ಬೇಡಿಕೆ ಪೂರೈಸುವ ನಿಟ್ಟಿನಲ್ಲಿ ಎಂಟು ಹೊಸ ಕೋರ್ಸ್ ಗಳನ್ನೂ ಈ ವರ್ಷದಿಂದಲೇ ಆರಂಭಿಸಲಾಗುತ್ತಿದೆ ಎಂದು ಹೇಳಿದರು.
ಹೊಸ ಕೊರ್ಸ್ʼಗಳು ಯಾವುವು?: ಆಲ್ಟರ್ನೇಟಿವ್ ಎನರ್ಜಿ ಟೆಕ್ನಾಲಜೀಸ್ (Alternative Energy Technologies), ಸೈಬರ್ ಭದ್ರತೆ (Cyber security), ಆಹಾರ ಸಂಸ್ಕರಣೆ ಮತ್ತು ಸಂರಕ್ಷಣೆ (Food Processing and Preservation), ಪ್ರವಾಸೋದ್ಯಮ (Travel & Tourism ), ಕ್ಲೌಡ್ ಕಂಪ್ಯೂಟಿಂಗ್ (Cloud Computing), ಆಟೋಮೇಷನ್ ಮತ್ತು ರೋಬೋಟಿಕ್ಸ್ (Automation and Robotics), ನಿರ್ದೇಶನ ಮತ್ತು ಚಿತ್ರಕಥೆ ರಚನೆ, ಟಿವಿ ಕಾರ್ಯಕ್ರಮಗಳ ನಿರ್ಮಾಣ (Direction screen play writing and TV production) ಹಾಗೂ ಸೈಬರ್ ಭೌತಿಕ ವ್ಯವಸ್ಥೆ ಮತ್ತು ಭದ್ರತೆ (Cyber physical system and security) ಈ ಕೋರ್ಸುಗಳನ್ನು ಹೊಸದಾಗಿ ಆರಂಭ ಮಾಡಲಾಗುತ್ತಿದೆ ಎಂದು ಡಾ.ಅಶ್ವತ್ಥನಾರಾಯಣ ತಿಳಿಸಿದರು.
ಇದನ್ನೂ ಓದಿ:ಭಾವು ಸಾಹೇಬ್ ರವರ ಕಾರ್ಯವನ್ನು ರಾಜ್ಯದ ಜನತೆ ಮರೆಯಲು ಸಾಧ್ಯವಿಲ್ಲ : ಸಾವಂತ್
ಈ ನೂತನ ಕೋರ್ಸುಗಳನ್ನು ಗೌರಿಬಿದನೂರು, ಶಿರಾಳಕೊಪ್ಪ, ಕೂಡ್ಲಿಗಿ, ರಬಕವಿ ಬನಹಟ್ಟಿ, ಔರಾದ್ ಹಾಗೂ ಬೆಂಗಳೂರಿನ ಎಸ್.ಜೆ.ಪಾಲಿಟೆಕ್ನಿಕ್, ಚನ್ನಗಿರಿ, ಕೊಪ್ಪ, ಹೊನ್ನಾಳಿ, ಕಾಪು ಕಾಲೇಜುಗಳಲ್ಲಿ ಆರಂಭಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ನೂತನ ಕೋರ್ಸುಗಳನ್ನು ತಾಂತ್ರಿಕ ಶಿಕ್ಷಣ ಇಲಾಖೆಯ ಹೊಸ ಪಠ್ಯಕ್ರಮದ ಪ್ರಕಾರ ಬೋಧನೆ ಮಾಡಲಾಗುವುದು ಹಾಗೂ ಈ ಪಠ್ಯಕ್ರಮವು ರಾಷ್ಟ್ರೀಯ ಕೌಶಲ್ಯ ಅರ್ಹತಾ ಚೌಕಟ್ಟು ಪ್ರಕಾರ ಸಿದ್ಧಪಡಿಸಲಾಗಿದೆ. ಜಾಗತಿಕ ಮಟ್ಟದಲ್ಲಿ ಉದ್ಯೋಗ ಪಡೆಯಲು ಅನುಕೂಲವಾಗಲಿದೆ. ಡಿಪ್ಲೋಮಾ ಪಠ್ಯಕ್ರಮಗಳನ್ನು ಉದ್ಯಮಿಗಳು, ಶಿಕ್ಷಣ ತಜ್ಞರು ಮತ್ತು ಹಳೆಯ ವಿದ್ಯಾರ್ಥಿಗಳೊಂದಿಗೆ ವ್ಯಾಪಕ ಸಮಾಲೋಚನೆಯ ನಂತರ ಅಭಿವೃದ್ಧಿಗೊಳಿಸಲಾಗಿದೆ ಎಂದು ಅವರು ತಿಳಿಸಿದರು.
ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ನೂತನ ಕೋರ್ಸುಗಳಿಗೆ ನೇರ ಪ್ರವೇಶಾತಿ ಸಿಗಲಿದ್ದು, ಮೂರನೇ ವರ್ಷದ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಇದೊಂದು ರೀತಿಯಲ್ಲಿ ವಿಶೇಷ ಕಲಿಕಾ ವಿಷಯವಾಗಿರುತ್ತದೆ. ಅಲ್ಲದೆ, ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಎರಡು ವರ್ಷದ ಡಿಪ್ಲೋಮಾ ನಂತರ ಮೂರನೇ ವರ್ಷದಲ್ಲಿ ಹೊಸ ರಾಷ್ಟೀಯ ಶಿಕ್ಷಣ ನೀತಿ ಅನುಸಾರ ತಮ್ಮ ಇಚ್ಛಗೆ ಅನುಗುಣವಾಗಿ ಓದಲು ಡಾಟಾ ಸೈನ್ಸ್, ಎಐ-ಎಂಎಲ್, ಪವರ್ ಎಂಜಿನಿಯರಿಂಗ್, ನವೀಕರಿಸಬಹುದಾದ ಇಂಧನ, ಇಂಡಸ್ಟ್ರಿಯಲ್ ಆಟೋಮ್ಯಾಷನ್ ಹಾಗೂ ಕೈಗಾರಿಕಾ ವಿದ್ಯುತ್ ಎಂಜಿನಿಯರಿಂಗ್, ಸುಸ್ಥಿರ ನಿರ್ಮಿತ ಪರಿಸರ, ಮೂಲಭೂತ ಎಂಜಿನಿಯರಿಂಗ್ ಸೇರಿ ಇನ್ನೂ ಹಲವಾರು ವಿಷಯಗಳನ್ನು ಆಯ್ಕೆಯ ಅನುಸಾರ ಅಧ್ಯಯನ ಮಾಡಬಹುದಾಗಿದೆ ಎಂದು ಅವರು ತಿಳಿಸಿದರು.
ವಿದ್ಯಾರ್ಥಿಗಳ ದಾಖಲಾತಿಗೆ ಚಾಲನೆ: ಇದೇ ಸಂದರ್ಭದಲ್ಲಿ ಸಚಿವರು ರಾಜ್ಯದಲ್ಲಿರುವ ಒಟ್ಟು 87 ಸರಕಾರಿ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಪ್ರವೇಶ ಪ್ರಕ್ರಿಯೆಗೆ ಚಾಲನೆ ನೀಡಿದರು. ಇವುಗಳ ಪೈಕಿ 26 ಸರಕಾರಿ ಕಾಲೇಜುಗಳಲ್ಲಿ ಮೆರಿಟ್ ಮೇಲೆ ಪ್ರವೇಶ ನೀಡಲಾಗುವುದು. ಉಳಿದ ಕಾಲೇಜುಗಳಲ್ಲಿ ಮೊದಲು ಬಂದವರಿಗೆ ಮೊದಲ ಆದ್ಯತೆ ಕೊಡಲಾಗುವುದು ಎಂದು ಅವರು ಹೇಳಿದರು.
ಇದೇ ವೇಳೆ ಅವರು ಸರಕಾರಿ ಪಾಲಿಟೆಕ್ನಿಕ್ ಗಳಿಗೆ ಹೊಸ ಲೊಗೊ ಬಿಡುಗಡೆ ಮಾಡಿದರು.
ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕುಮಾರ ನಾಯಕ್, ಕಾಲೇಜು-ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತ ಪಿ.ಪ್ರದೀಪ್, ನಿರ್ದೇಶಕ ಮಂಜುನಾಥ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.