ಶಾಲಾ ಪಠ್ಯದಲ್ಲಿ ಭಗವದ್ಗೀತೆ ಅಳವಡಿಕೆ: ಪರಿಶೀಲನೆಗೆ ತಜ್ಞರ ಸಮಿತಿ: ಬಿ.ಸಿ. ನಾಗೇಶ್
Team Udayavani, Mar 21, 2022, 9:30 PM IST
ವಿಧಾನಪರಿಷತ್ತು: ಶಾಲಾ ಪಠ್ಯದಲ್ಲಿ ಭಗವದ್ಗೀತೆಯನ್ನು ಪರಿಚಯಿಸುವ ಬಗ್ಗೆ ಸಮಿತಿ ರಚಿಸಿ, ಶಿಕ್ಷಣ ತಜ್ಞರು, ಹಿರಿಯರ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು. ಈ ವಿಚಾರದ ಬಗ್ಗೆ ಮುಖ್ಯಮಂತ್ರಿಯವರ ಜೊತೆಯಲ್ಲೂ ಚರ್ಚಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.
ಬಿಜೆಪಿ ಸದಸ್ಯ ಎಂ.ಕೆ. ಪ್ರಾಣೇಶ್ ಅವರು ಸೋಮವಾರ ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರಿಸಿದ ಸಚಿವರು, ಶಾಲೆಗಳಲ್ಲಿ ನೈತಿಕ ಶಿಕ್ಷಣದ ಬಗ್ಗೆ ಸದನದಲ್ಲಿಯೂ ಚರ್ಚೆ ಆಗಿದೆ. ಮಕ್ಕಳಿಗೆ ನೈತಿಕ ಶಿಕ್ಷಣ ಕೊಡುತ್ತಿಲ್ಲ. ಪಠ್ಯಕ್ರಮದಿಂದಲೂ ನೈತಿಕ ಶಿಕ್ಷಣ ತೆಗೆದುಹಾಕಲಾಗಿದೆ. ಹೀಗಾಹಿ ಮಕ್ಕಳಲ್ಲಿ ನೈತಿಕ ಮೌಲ್ಯಗಳು ಬೆಳೆಯುತ್ತಿಲ್ಲ ಎಂಬ ಭಾವನೆಯೂ ಪೋಷಕರಲ್ಲಿದೆ. ಭಗವದ್ಗೀತೆ ಎಂದರೆ ಮಹಾಭಾರತದಲ್ಲಿ ಅರ್ಜುನ ದ್ವಂದ್ವದಲ್ಲಿದ್ದಾಗ ಜೀವನ ಏನು ಎಂಬುದು ಕೃಷ್ಣ ಹೇಳಿಕೊಟ್ಟಿದ್ದು. ಈ ತರಹದ ಶಿಕ್ಷಣದ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ಸಮಿತಿ ರಚಿಸಿ, ಶಿಕ್ಷಣ ತಜ್ಞರು ಹಾಗೂ ಹಿರಿಯರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು.
ಈ ವಿಚಾರವಾಗಿ ಮುಖ್ಯಮಂತ್ರಿಯವರ ಜೊತೆಯಲ್ಲೂ ಮಾತುಕತೆ ನಡೆಸಲಾಗುವುದು ಎಂದರು.
ಇದಕ್ಕೂ ಮೊದಲು ವಿಷಯ ಪ್ರಸ್ತಾಪಿಸಿದ ಎಂ.ಕೆ. ಪ್ರಾಣೇಶ್, 2022-23ನೇ ಶೈಕ್ಷಣಿಕ ವರ್ಷದಿಂದ ಗುಜರಾತಿನ 6ರಿಂದ 12ನೇ ತರಗತಿ ವಿದ್ಯಾರ್ಥಿಗಳುಎ ಭಗವದ್ಗೀತೆ ಶಾಲಾ ಪಠ್ಯದ ಭಾಗವಾಗಲಿದೆ ಎಂದು ಅಲ್ಲಿನ ಶಿಕ್ಷಣ ಸಚಿವರು ಘೋಷಿಸಿದ್ದಾರೆ.
ಭಗವದ್ಗೀತೆಯಲ್ಲಿರುವ ಮೌಲ್ಯಗಳು ಮತ್ತು ತತ್ವಗಳು ಶಾಲಾ ಪಠ್ಯಕ್ರಮದಲ್ಲಿ ಪರಿಚಯಿಸುವ ಉದ್ದೇಶದಿಂದ ನಿರ್ಣಯ ಕೈಗೊಳ್ಳಲಾಗಿದ್ದು, ಇದು ಆಧುನಿಕ ಮತ್ತು ಪ್ರಾಚೀನ ಸಂಸ್ಕೃತಿ, ಸಂಪ್ರದಾಯಗಳನ್ನು ಜ್ಞಾನ ವ್ಯವಸ್ಥೆಗಳ ಪರಿಚಯವನ್ನು ಶಿಫಾರಸು ಮಾಡುವ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಗುಣವಾಗಿದೆ. ಆದ್ದರಿಂದ ರಾಜ್ಯದಲ್ಲೂ 2022-23ನೇ ಶೈಕ್ಷಣಿಕ ವರ್ಷದಿಂದ ಪಠ್ಯಪುಸ್ತಕಗಳಲ್ಲಿ ಭಗವದ್ಗೀತೆಯನ್ನು ಪರಿಚಯಿಸಬೇಕು ಎಂದು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.