ಜಿಕೆವಿಕೆ ಕೋವಿಡ್ ಆರೈಕೆ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದ ಕೃಷಿ ಸಚಿವ ಬಿ.ಸಿ.ಪಾಟೀಲ್
Team Udayavani, May 11, 2021, 10:58 AM IST
ಬೆಂಗಳೂರು : ಕೃಷಿ ಸಚಿವ ಬಿ.ಸಿ.ಪಾಟೀಲರಿಂದು ಬೆಂಗಳೂರು ಜಿಕೆವಿಕೆಗೆ ಭೇಟಿ ನೀಡಿ, ಅಲ್ಲಿನ ವಿದ್ಯಾರ್ಥಿನಿ ನಿಲಯದಲ್ಲಿನ ಕೋವಿಡ್ ಆರೈಕೆ ಕೇಂದ್ರವನ್ನು ಪರಿಶೀಲನೆ ನಡೆಸಿದರು. ಕೋವಿಡ್ ಎರಡನೇ ಅಲೆ ವ್ಯಾಪಕವಾಗಿ ಪಸರಿಸುತ್ತಿದ್ದು, ಇದನ್ನು ನಿಯಂತ್ರಿಸಲು ಸರ್ಕಾರ ತನ್ನೆಲ್ಲ ಪ್ರಯತ್ನಗಳನ್ನು ನಡೆಸುತ್ತಿದೆ. ಬಿಬಿಎಂಪಿಯ ಕೋರಿಕೆ ಮೇರೆಗೆ ಯಲಹಂಕ ವಲಯದಿಂದ ಕೋವಿಡ್ -19 ಆರೈಕೆ ಕೇಂದ್ರವನ್ನು ಕೃಷಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ನಿಲಯದ ಕಟ್ಟಡದಲ್ಲಿ ಸ್ಥಾಪಿಸಲಾಗಿದ್ದು, ಕಟ್ಟಡವನ್ನು ಕೃಷಿ ಸಚಿವರ ಸೂಚನೆ ಮೇರೆಗೆ ಪಾಲಿಕೆಯ ಯಲಹಂಕ ವಲಯಕ್ಕೆ ಹಸ್ತಾಂತರಿಸಲಾಗಿದೆ ಎಂದರು.
380 ಹಾಸಿಗೆ ಸಾಮರ್ಥ್ಯವುಳ್ಳ ಕೋವಿಡ್ ಆರೈಕೆ ಕೇಂದ್ರ ಇದಾಗಿದ್ದು, ಇನ್ನು 30 ಹಾಸಿಗೆ ಸಾಮರ್ಥ್ಯವುಳ್ಳ “ಇಂಟರ್ ನ್ಯಾಷನಲ್ ಸ್ಟಾಫ್ ಕ್ವಾರ್ಟ್ರ್ಸಸ್” ಅನ್ನು ವೈದ್ಯಕೀಯ ಸಿಬ್ಬಂದಿಗಳಿಗಾಗಿ ಮೀಸಲಿಡಲಾಗಿದೆ. ಕಳೆದ ಬಾರಿಯೂ ಸಹ ಬೆಂಗಳೂರು ಜಿಕೆವಿಕೆಯಲ್ಲಿ ಕೋವಿಡ್ ಆರೈಕೆಗಾಗಿ ವಿದ್ಯಾರ್ಥಿನಿ ನಿಲಯವನ್ನು ನೀಡಲಾಗಿತ್ತು.
ಕೋವಿಡ್ ಕೇರ್ ಸೆಂಟರ್‌ಗೆ ಭೇಟಿ ನೀಡಿದ ಬಿ.ಸಿ.ಪಾಟೀಲ್,ಅಲ್ಲಿನ ಸೌಲಭ್ಯಗಳು ಹಾಗೂ ರೋಗಿಗಳಿಗೆ ನೀಡಲಾಗುತ್ತಿರುವ ಚಿಕಿತ್ಸೆ ಪರಿಶೀಲಿಸಿದರು.ಕೋವಿಡ್ ಅನ್ನು ನಿಯಂತ್ರಿಸಲು ಸಾಮಾಜಿಕ ಕಳಕಳಿಯ ಜೊತೆಗೆ ವೈಯಕ್ತಿಕ ಸ್ವಚ್ಛತೆ ಸಾಮಾಜಿಕ ಅಂತರ ಹಾಗೂ ಜಾಗೃತಿ ಮುಖ್ಯವಾಗಿದ್ದು,ಕೋವಿಡ್ ಬಂದಾಕ್ಷಣ ಆತಂಕಕ್ಕೆ ಒಳಗಾಗದೇ ಮನೋಸ್ಥೈರ್ಯ ತಂದುಕೊಳ್ಳಬೇಕು.
ಇತ್ತೀಚಿಗೆ ಆತಂಕದಿಂದಲೇ ಹೆಚ್ಚಿನ ಅನಾಹುತಗಳು ಸಂಭವಿಸುತ್ತಿವೆ.ಹೀಗಾಗಿ ಯಾರೂ ಆತಂಕಪಡಬಾರದು.ತಮ್ಮತಮ್ಮ ವ್ಯಾಪ್ತಿಯಲ್ಲಿನ ವಾರ್ ರೂಮ್ ಕಾಲ್ ಸೆಂಟರ್ ಅನ್ನು ಸಂಪರ್ಕಿಸಿ ಮಾಹಿತಿ ಪಡೆದು ಸರ್ಕಾರದ ಸೂಚನೆಯನುಸಾರ ಪಾಲಿಸಿ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಪರಿಶೀಲನೆ ವೇಳೆ ಬೆಂಗಳೂರು ಜಿಕೆವಿಕೆ ಉಪಕುಲಪತಿ ರಾಜೇಂದ್ರಪ್ರಸಾದ್, ಬಿಬಿಎಂಪಿ ಜಂಟಿ ಆಯುಕ್ತ ಡಾ.ಅಶೋಕ್,ಜಿಕೆವಿಕೆ ಆಡಳಿತ ಮಂಡಳಿ ಸದಸ್ಯರಾದ ದಯಾನಂದ್, ಸುರೇಶ್, ರಾಮಾಂಜನೇಯಗೌಡ,ಶ್ರೀರಾಮ್ ಸೇರಿದಂತೆ ಮತ್ತಿತ್ತರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
MUST WATCH
ಹೊಸ ಸೇರ್ಪಡೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.