ಸಚಿವ ಡಿ.ಕೆ.ಶಿವಕುಮಾರ್ ಕೋರ್ಟ್‌ಗೆ ಹಾಜರು
Team Udayavani, Jun 2, 2019, 3:05 AM IST
ಬೆಂಗಳೂರು: ದೆಹಲಿಯ ತಮ್ಮ ನಿವಾಸದ ಮೇಲಿನ ಆದಾಯ ತೆರಿಗೆ ಇಲಾಖೆ ದಾಳಿಗೆ ಸಂಬಂಧಿಸಿದಂತೆ ಸಚಿವ ಡಿ.ಕೆ.ಶಿವಕುಮಾರ್ ಅವರು ಶನಿವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಐಟಿ ದಾಳಿ ಪ್ರಕರಣದ ಆರೋಪದಿಂದ ತಮ್ಮನ್ನು ಕೈ ಬಿಡುವಂತೆ ಕೋರಿ ಡಿ.ಕೆ.ಶಿವಕುಮಾರ್ ಈ ಹಿಂದೆ ಅರ್ಜಿ ಸಲ್ಲಿಸಿದ್ದರು.
ಈ ಹಿನ್ನೆಲೆಯಲ್ಲಿ ಶನಿವಾರ ನಡೆದ ವಿಚಾರಣೆ ವೇಳೆ ಆದಾಯ ತೆರಿಗೆ ಇಲಾಖೆ ಪರ ವಕೀಲರು ಪ್ರಕರಣದಲ್ಲಿ ವಾದ ಮಂಡಿಸಲು ಕಾಲಾವಕಾಶ ಕೋರಿದ್ದರು. ಹೀಗಾಗಿ, ವಿಶೇಷ ನ್ಯಾಯಾಲಯದ ನ್ಯಾಯಾಧೀಶರು ವಿಚಾರಣೆಯನ್ನು ಜೂ.3ಕ್ಕೆ ಮುಂದೂಡಿ ಆದೇಶಿಸಿದರು.
ಏನಿದು ಪ್ರಕರಣ?: 2017ರಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶಿವಕುಮಾರ ಅವರಿಗೆ ಸೇರಿದ್ದು ಎನ್ನಲಾದ ದೆಹಲಿಯ ಮನೆ ಮೇಲೆ ದಾಳಿ ನಡೆಸಿದ್ದರು. ದಾಳಿ ವೇಳೆ 8.50 ಕೋಟಿ ರೂ.ಪತ್ತೆಯಾಗಿದ್ದು, ಐಟಿ ಅಧಿಕಾರಿಗಳ ತನಿಖೆಯಲ್ಲಿ ಈ ಹಣ ಸಚಿವರಿಗೆ ಸೇರಿದೆ ಎನ್ನಲಾಗಿತ್ತು. ಈ ಸಂಬಂಧ ಐಟಿ ಅಧಿಕಾರಿಗಳು ಶಿವಕುಮಾರ್ ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
MUST WATCH
ಹೊಸ ಸೇರ್ಪಡೆ
Test: ಇಂಗ್ಲೆಂಡ್ ಸರಣಿಯ ಬಳಿಕ ಟೆಸ್ಟ್ ಕ್ರಿಕೆಟ್ ನಿಂದ ದೂರವಾಗಲಿದ್ದಾರೆ ಕಿವೀಸ್ ಆಟಗಾರ
Priyanka Upendra: ಬ್ಯೂಟಿಫುಲ್ ಲೈಫ್ ನಲ್ಲಿ ಪ್ರಿಯಾಂಕಾ
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Bantwala: ಶಾಲಾ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
Manipal: ನಿತ್ಯ ಅಪಘಾತ ತಾಣವಾದ ಈಶ್ವರ ನಗರ-ಪರ್ಕಳ ರಸ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.