ಯಾವುದೇ ಧರ್ಮದ ಭಾವೈಕ್ಯತೆಗೆ ಧಕ್ಕೆ ತರುವ ಕೆಲಸ ಮಾಡಿಲ್ಲ: ಸಚಿವ ಸುಧಾಕರ್
Team Udayavani, Apr 7, 2022, 10:42 PM IST
ಬೆಂಗಳೂರು: ರಾಜ್ಯ ಸರ್ಕಾರವು ಯಾವುದೇ ಧರ್ಮದ ಭಾವೈಕ್ಯತೆಗೆ ಧಕ್ಕೆ ತರುವ ಕೆಲಸವನ್ನು ಮಾಡಿಲ್ಲ. ಅಂತಹ ಆಲೋಚನೆಗಳು ಕೂಡ ಸರ್ಕಾರದ ಮುಂದೆ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾ. ಕೆ. ಸುಧಾಕರ್ ಸ್ಪಷ್ಟಪಡಿಸಿದರು.
ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರವು ಪ್ರತಿಯೊಂದು ಧರ್ಮವನ್ನೂ ಸಮಾನವಾಗಿ ಕಾಣುತ್ತಿದೆ. ಯಾರೊಬ್ಬರು ಕೂಡ ಮೇಲೂ ಅಲ್ಲ, ಕೀಳೂ ಅಲ್ಲ, ಅವರವರ ಧರ್ಮ ಮತ್ತು ಆಚರಣೆಗೆ ಕಾನೂನಿನಲ್ಲಿ ಅವಕಾಶವಿದೆ. ಭಾವೈಕ್ಯತೆಗೆ ಧಕ್ಕೆ ತರುವ ಕೆಲಸವನ್ನು ಮಾಡುವುದಿಲ್ಲ ಎಂದು ಹೇಳಿದರು.
ಹಿಜಾಬ್, ಹಲಾಲ್‌ನಂತಹ ವಿಷಯಗಳಲ್ಲಿ ಸರ್ಕಾರದ ಪಾತ್ರವಿಲ್ಲ. ಆದರೆ, ಕೆಲವು ಮಾಧ್ಯಮಗಳು ಇದನ್ನು ಸರ್ಕಾರದ ಪ್ರಾಯೋಜಿತ ಎಂದು ಹೇಳುತ್ತಿವೆ. ಸಂಘಟನೆಗಳು ಹೋರಾಟ ನಡೆಸುವುದಕ್ಕೂ ನಮಗೂ ಸಂಬಂಧವಿಲ್ಲ. ನಾನೊಬ್ಬ ಸಚಿವನಾಗಿ ಸರ್ಕಾರದ ನಿಲುವು ಏನೆಂಬುದನ್ನು ಹೇಳುತ್ತೇನೆ. ಕೆಲವರು ಅನಗತ್ಯವಾಗಿ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ. ಇತ್ತೀಚಿನ ಘಟನೆಗಳಿಗೂ ಸರ್ಕಾರಕ್ಕೂ ಸಂಬಂಧವಿಲ್ಲ ಎಂದು ಪುನರುಚ್ಚಿಸಿದರು.
ನಾನು ಸರ್ಕಾರದ ಪರವಾಗಿ ಇರುವ ಭಾವನೆಯನ್ನು ಹೇಳುತ್ತಿದ್ದೇನೆ. ಯಾರೋ ಹೇಳಿಕೆ ಕೊಡವುದಕ್ಕೆಲ್ಲಾ ಪ್ರತಿಕ್ರಿಯಿಸಲು ಸಾಧ್ಯವಿಲ್ಲ. ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡ ಸರ್ಕಾರದ ನಿಲುವನ್ನು ಹೇಳಿದ್ದಾರೆ ಎಂದು ಪ್ರತಿಕ್ರಿಯಿಸಿದರು.
ಹಲಾಲ್ ಹಿಂದಿರುವವರ ತನಿಖೆ ನಡೆಸಿ:
ಇದು ಕೇವಲ ಒಂದು ಧರ್ಮದ ಸರ್ಕಾರವಲ್ಲ. ರಾಜ್ಯದಲ್ಲಿರುವ ಆರೂವರೆ ಕೋಟಿ ಜನರ ಧರ್ಮಗಳನ್ನೂ ಗೌರವದಿಂದ ಕಾಣುತ್ತದೆ. ಜಾತ್ಯತೀಯ ನಿಲುವಿನಲ್ಲಿ ಬದಲಾವಣೆ ಇಲ್ಲ. ಇದು ಸರ್ಕಾರದ ನಿಲುವು ಕೂಡ ಆಗಿದೆ. ಹಲಾಲ್ ನಿಷೇಧದ ಹಿಂದೆ ಯಾರಿದ್ದಾರೋ ನನಗೂ ಗೊತ್ತಿಲ್ಲ. ಆದರೆ, ಖಂಡಿತವಾಗಿಯೂ ಇದರಲ್ಲಿ ಸರ್ಕಾರದ ಪಾತ್ರ ಎಳ್ಳಷ್ಟೂ ಇಲ್ಲ. ಇದರ ಹಿಂದೆ ಯಾರಿದ್ದಾರೆ ಎಂಬುದರ ಬಗ್ಗೆ ತನಿಖೆ ನಡೆಯಬೇಕಾದ ಅವಶ್ಯಕತೆ ಇದೆ ಎಂದರು.
ಮುಸ್ಕಾನ್ ಮುಗ್ಧತೆಯೇ ಅಸ್ತ್ರ:
ಮಂಡ್ಯದ ವಿದ್ಯಾರ್ಥಿನಿ ಮುಸ್ಕಾನ್ ಮುಗ್ಧ ಹುಡುಗಿ. ಆದರೆ, ಜನರ ಮುಗ್ಧತೆಯನ್ನು ಅಸ್ತ್ರವನ್ನಾಗಿ ಅಲ್ ಖೈದಾ ಭಯೋತ್ಪಾದಕರು ಬಳಸುತ್ತಾರೆ. ಇಂತಹ ಭಯೋತ್ಪಾದಕ ಸಂಘಟನೆಗಳಿಂದ ಹೆಚ್ಚು ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ಸಚಿವ ಡಾ.ಕೆ. ಸುಧಾಕರ್ ಪ್ರತಿಕ್ರಿಯಿಸಿದರು.
ಭಯೋತ್ಪಾದಕರಿಂದ ಜನರಲ್ಲಿ ಭಯ ಹುಟ್ಟಿಸಲಷ್ಟೇ ಸಾಧ್ಯ. ದುರದೃಷ್ಟವಶಾತ್ ಮುಸ್ಕಾನ್ ಯಾಕೆ ಈ ರೀತಿ ಹೇಳಿಕೆ ಕೊಟ್ಟಳು ಎನ್ನುವುದು ಗೊತ್ತಿಲ್ಲ. ನಾವು, ಯಾವತ್ತು ಕಾನೂನು ಪಾಲನೆ ಮಾಡಬೇಕು. ನೆಲದ ಕಾನೂನನ್ನು ಗೌರಿಸಬೇಕಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
60%; ಕುಮಾರಸ್ವಾಮಿ ಆರೋಪಕ್ಕೆ ಆಧಾರ, ಸತ್ಯಾಸತ್ಯತೆ ಇಲ್ಲ: ಸಚಿವ ಜಾರಕಿಹೊಳಿ
ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ ಡ್ರಿಂಕ್ ಬಿಡುಗಡೆ
ರಿಲ್ಯಾಕ್ಸ್ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ
HMPV: ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.