ಸಚಿವ ಈಶ್ವರಪ್ಪ ಮತ್ತು ಸಿ.ಟಿ.ರವಿ ನಾಲಾಯಕ್‍ ಗಳು : ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್


Team Udayavani, Aug 15, 2021, 3:09 PM IST

ಹನೂರು :  ಸಚಿವ ಈಶ್ವರಪ್ಪ ಮತ್ತು ಸಿ.ಟಿ.ರವಿ ನಾಲಾಯಕ್‍ ಗಳು, ಇವರು ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಲ್ಲದವರು. ಆದುದರಿಂದಲೇ ರಾಷ್ಟ್ರನಾಯಕರಿಗೆ ಅಗೌರವ ತೋರುವ ಕೆಲಸ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ಟೀಕಿಸಿದರು.

ಪಟ್ಟಣದ ಕೆಪಿಸಿಸಿಕಚೇರಿಯಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿದ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ಸಿ.ಟಿ.ರವಿಯವರ ಮಾತು ದುರಹಂಕಾರದ ಪರಮಾವಧಿಯ ಮಾತುಗಳು, ಅವರಿಗೆ ದೇಶದ ಇತಿಹಾಸ ಗೊತ್ತಿಲ್ಲ. ಡಾ||ಬಿ.ಆರ್.ಅಂಬೇಡ್ಕರ್‍ರವರು ಇತಿಹಾಸ ತಿಳಿಯದವನು ಇತಿಹಾಸವನ್ನು ಸೃಷ್ಠಿಸಲಾರ ಎಂದು ಹೇಳಿದ್ದಾರೆ. ಸಿ.ಟಿರವಿಯವರಿಗೆ ಇಂದಿರಾಗಾಂಧಿಯವರ ತ್ಯಾಗದ ಬಗ್ಗೆ ಅರಿವಿಲ್ಲ. ಈ ದೇಶಕ್ಕೆ ನಿಜವಾದ ಅನ್ನಪೂರ್ಣೇಶ್ವರಿ ಎಂದರೇ ಅದು ದಿ||ಇಂದಿರಾಗಂಧಿಯವರು, ಆದುದರಿಂದಲೇ ಆ ಹೆಸರನ್ನು ಇಡಲಾಗಿದೆ.ಮೊದಲು ಬಿಜೆಪಿ ನಾಯಕರು ರಾಷ್ಟ್ರ ನಾಯಕರಿಗೆ ಅಗೌರವತರುವ ಕೆಲಸ ನಿಲ್ಲಿಸಬೇಕು ಎಂದು ಟೀಕಿಸಿದರು.

ಇದನ್ನೂ ಓದಿ :  ಅಧಿಕಾರಿಗಳು ನಗರ ಪ್ರದಕ್ಷಿಣೆ ನಡೆಸಿ ಸಮಸ್ಯೆ ಆಲಿಸಲು ಸೂಚನೆ

ರಾಜ್ಯಕ್ಕೆ ಬರಬೇಕಾದ ಅನುದಾನ ತಂದು ನವಕರ್ನಾಟಕ ನಿರ್ಮಾಣ ಮಾಡಲಿ : ಸ್ವಾತಂತ್ರ್ಯ ದಿನಾಚರಣೆ ಕಾರ್ಕ್ರಮದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿಯವರು ಇಂದಿನಿಂದ ನವಕರ್ನಾಟಕ ನಿರ್ಮಾಣವಾಗಲಿದೆ ಎಂಬ ಹೇಳಿಕೆಯ ಬಗ್ಗೆ ಮಾತನಾಡಿ ಕರ್ನಾಟಕ ರಾಜ್ಯವನ್ನು ನವಕರ್ನಾಟಕವನ್ನಾಗಿ ಮಾಡಲು ಕಾಂಗ್ರೆಸ್ ಪಕ್ಷ ಕೆ.ಸಿ.ರೆಡ್ಡಿ ಯವರ ಕಾಲದಿಂದ ಸಿದ್ಧರಾಮಯ್ಯ ಅವರ ಕಾಲದವರೆಗೂ ಪ್ರತಿಯೊಬ್ಬರೂ ಕೊಡುಗೆ ನೀಡಿದ್ದಾರೆ. ಎಸ್.ಎಂ.ಕೃಷ್ಣ ಅವರ ಅವಧಿಯಲ್ಲಿ ಮಾಹಿತಿ ತಂತ್ರಜ್ಞಾನಕ್ಕೆ ಅವಕಾಶ ನೀಡಿದ್ದರಿಂದ ಬೆಂಗಳೂರು ವಿಶ್ವಮಟ್ಟದಲ್ಲಿ ಗಮನ ಸೆಳೆದಿದೆ. ಅಲ್ಲದೆ ರಾಹ್ಯದ ಅತಿ ಹೆಚ್ಚಿನ ಆದಾಯ ಬರುತ್ತಿದೆ. ಅಲ್ಲದೆ ಸಿದ್ಧರಾಮಯ್ಯ ಅವರೂ ಕೂಡ ಹಲವಾರು ಕೊಡುಗೆ ನೀಡಿದ್ದಾರೆ. ಆದರೆ ಬಿಜೆಪಿಯವರು 7 ವರ್ಷ ರಾಜ್ಯದಲ್ಲಿ ಅಧಿಕಾರ ನಡೆಸಿದ್ದು ಮೊದಲ 5 ವರ್ಷದಲ್ಲಿ ಭ್ರಷ್ಟಾಚಾರದಲ್ಲಿ ನಇರತರಾಗಿ 3 ಜನ ಮುಖ್ಯಮಂತ್ರಿಗಳನ್ನು ಮಆಡಲಾಗಿತ್ತು. ಇದೀಗ ಮತ್ತೊಮ್ಮೆ ಭ್ರಷ್ಟಾಚಾರದ ಕಾರಣದಂದ ಯಡಿಯೂರಪ್ಪ ಅವರನ್ನು ಪದಚ್ಯುತಿ ಮಾಡಲಾಗಿದೆ. ಆದುದರಿಂದ ಮುಖ್ಯಮಂತ್ರಿ ಬೊಮ್ಮಾಯಿಯವರು ಕೇಂದ್ರದಿಂದ ರಾಜ್ಯಕ್ಕೆ ನ್ಯಾಯುತವಾಗಿ ಬರಬೇಕಿದ್ದ ಜಿಎಸ್‍ಟಿ ಬಾಕಿ, ಪ್ರವಾಹ ಪರಿಹಾರ, ವ್ಯಾಕ್ಸಿನೇಷನ್ ತಂದು ನವಕರ್ನಾಟಕ ನಿರ್ಮಾಣ ಮಾಡಲಿ ಎಂದು ಕುಹುಕವಾಡಿದರು.

ಮೋದಿಯವರು ಸಂಪೂರ್ಣ ವಿಫಲರಾಗಿದ್ದಾರೆ: ಪ್ರಧಾನಮಂತ್ರಿ ನರೇಂದ್ರಮೋದಿಯವರು ಕಳೆದ 7 ವರ್ಷದಲ್ಲಿ ಸಮರ್ಪಕ ಆಡಳಿತ ನೀಡುವಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ.  ಮನಮೋಹನ್ ಸಿಂಗ್ ಅವರು ಅಧಿಕಾರದಲ್ಲಿದ್ದಾಗ ದೇಶದ 30 ಕೋಟಿ ಜನರನ್ನು ಬಡತನ ರೇಖೆಗಿಂತ ಕೆಳಗಿನಿಂದ ಮೇಲಕ್ಕೆ ತಂದಿದ್ದರು. ಆದರೆ ಮೋದಿಯವರ ಆಡಳಿತದಲ್ಲಿ 23ಕೋಟಿ ಜನ ಬಡತನ ರೇಖೆಗಿಂತ ಕೆಳಗೆ ಹೋಗಿದ್ದಾರೆ. ನೆರೆಯ ಬಾಂಗ್ಲಾದೇಶ ಮತ್ತು ಶ್ರೀಲಂಕಾಗಳಿಗಿಂತಲೂ ಹಸಿವಿನ ಪ್ರಮಾಣ ಹೆಚ್ಚಿದೆ. ಸಬ್‍ಕಾ ಸಾಥ್ ಸಬ್ ಕಾ ವಿಕಾಸ್ ಎಲ್ಲಿದೆ ಎಂದು ಕಿಡಿಕಾರಿದರು.

ಈ ಸಂದರ್ಭದಲ್ಲಿ ಶಾಸಕ ಆರ್.ನರೇಂದ್ರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈಶ್ವರ್ ಹಾಜರಿದ್ದರು.

ಇದನ್ನೂ ಓದಿ : ಕಬಕ ಗ್ರಾ. ಪಂ. ವಠಾರದಲ್ಲಿ ಸ್ವಾತಂತ್ರ್ಯ ರಥಕ್ಕೆ ಎಸ್ ಡಿ. ಪಿ. ಐ ಕಾರ್ಯರ್ತರಿಂದ ತಡೆ..!

ಟಾಪ್ ನ್ಯೂಸ್

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

sand 1

Padubidri: ಮರಳು ಅಕ್ರಮ ಸಾಗಾಟ; ವಶ

dw

Malpe: ಕಲ್ಮಾಡಿ; ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.