ಜೆಜೆಎಂ ಯೋಜನೆ… 3 ವರ್ಷದಲ್ಲಿ 7,904 ಕೋಟಿ ವೆಚ್ಚ: ಸಚಿವ ಕಾರಜೋಳ
Team Udayavani, Feb 24, 2023, 5:55 AM IST
ವಿಧಾನಪರಿಷತ್ತು: ಜಲ್ ಜೀವನ್ ಮಿಷನ್ ಯೋಜನೆಯಡಿ ಕಳೆದ ಮೂರು ವರ್ಷಗಳಲ್ಲಿ 7,904 ಕೋಟಿ ರೂ. ವೆಚ್ಚ ಮಾಡಲಾಗಿದ್ದು, ಶೇ.62ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಎಂ. ಕಾರಜೋಳ ತಿಳಿಸಿದ್ದಾರೆ.
ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್ ಸದಸ್ಯ ಕೆ.ಎ. ತಿಪ್ಪೇಸ್ವಾಮಿ ಪ್ರಶ್ನೆಗೆ ಉತ್ತರಿಸಿ, ಜಲ್ ಜೀವನ್ ಮಿಷನ್ ಯೋಜನೆಯ ರಾಜ್ಯದ ಪ್ರಗತಿ ದೇಶದ ಸರಾಸರಿಗಿಂತ ಹೆಚ್ಚಾಗಿದೆ ಎಂದರು.
ರಾಜ್ಯದಲ್ಲಿ 1.01 ಕೋಟಿ ಗ್ರಾಮೀಣ ಮನೆಗಳ ಪೈಕಿ ಜಲ್ ಜೀವನ್ ಮಿಷನ್ ಅನುಷ್ಠಾನದ ಪೂರ್ವದಲ್ಲಿ 24.51 ಲಕ್ಷ ಮನೆಗಳಿಗೆ ನಳ ಸಂಪರ್ಕ ಇತ್ತು. ಉಳಿದ 80 ಲಕ್ಷ ಮನೆಗಳಿಗೆ ನಳ ಸಂಪರ್ಕ ನೀಡಲು ಗುರಿ ಇಟ್ಟುಕೊಳ್ಳಲಾಗಿದ್ದು, ಕಳೆದ 3 ವರ್ಷಗಳಲ್ಲಿ 38.8 ಲಕ್ಷ ಮನೆಗಳಿಗೆ ನಳ ಸಂಪರ್ಕ ನೀಡಲಾಗಿದ್ದು, 42.13 ಲಕ್ಷ ಮನೆಗಳು ಬಾಕಿ ಉಳಿದಿವೆ. ಇವುಗಳಿಗೆ ನಳ ಸಂಪರ್ಕ ನೀಡಲು ತ್ವರಿತಗತಿಯಲ್ಲಿ ಕ್ರಮಗಳನ್ನು ಕೈಗೊಳ್ಳಲಾಗುವುದು. ಜಲ್ ಜೀವನ್ ಮಿಷನ್ ಯೋಜನೆಯಡಿ ಕಳೆದ ಮೂರು ವರ್ಷಗಳಲ್ಲಿ ಕೇಂದ್ರ ಮತ್ತು ರಾಜ್ಯದ ಅನುದಾನ ಸೇರಿ ಒಟ್ಟು 7,904 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗಿದೆ. 2024ರೊಳಗೆ ಗುರಿ ತಲುಪುವ ವಿಶ್ವಾಸವಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.