ಬಿಜೆಪಿ 130ಕ್ಕಿಂತ ಅಧಿಕ ಸ್ಥಾನ ಗೆಲ್ಲಲಿದೆ : ಕಾರಜೋಳ
Team Udayavani, May 2, 2023, 12:57 PM IST
ಬಳ್ಳಾರಿ: ಈ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 130ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಸಚಿವ ಗೋವಿಂದ ಕಾರಜೋಳ ಹೇಳಿದರು.
ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಬಿಜೆಪಿಯಿಂದ ಮಂಗಳವಾರ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು,
ಪ್ರಪಂಚದಲ್ಲಿ ಆರ್ಥಿಕತೆಯಲ್ಲಿ ಭಾರತ ಐದನೇ ಸ್ಥಾನದಲ್ಲಿದೆ. ಕಳೆದ ಮೂರು ವರ್ಷದಲ್ಲಿ ಬಿಜೆಪಿ ಸರಕಾರ ಸಾಕಷ್ಟು ಅಭಿವೃದ್ಧಿ ಮಾಡಲಾಗಿದೆ. ರಾಜ್ಯದಲ್ಲಿ ಎಲ್ಲ ಸಮುದಾಯಗಳಿಗೆ ಮೀಸಲಾತಿ ಜಾರಿ ಮಾಡಿ ಅನುಕೂಲ ಮಾಡಿದೆ. ಅಖಂಡ ಬಳ್ಳಾರಿ ಜಿಲ್ಲೆಯಲ್ಲಿ 700 ಕೋಟಿ ರೂ. ವೆಚ್ಚದಲ್ಲಿ ಕಾಲುವೆ ರಿಪೇರಿ, ಸಣ್ಣ ಸಣ್ಣ ಅಣೆಕಟ್ಟುಗಳು ನಿರ್ಮಿಸಿ ಕೃಷಿಗೆ ಅನುಕೂಲ ಮಾಡಿದೆ. ಕಾಂಗ್ರೆಸ್ 60ವರ್ಷ ಅಡಳಿತ ಮಾಡಿದರೂ ಅಭಿವೃದ್ಧಿ ಮಾಡಲಿಲ್ಲ. ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ರವರಿಗೆ ಲೋಕಸಭಾ ಪ್ರವೇಶಿಸಲು ಬಿಡಲಿಲ್ಲ, ಭಾರತ ರತ್ನ ಕೂಡ ನೀಡದೆ ಕಡೆಗಣಿಸಿದರೂ. ಡಾ. ಜಗಜೀವನ್ ರಾವ್ ರವರನ್ನು ಕಾಂಗ್ರೆಸ್ ನಿಂದ ಹೊರಹಾಕಿದರು. ಮಾಜಿ ಸಂಸದ ಮಲ್ಲಿಕಾರ್ಜುನ ಖರ್ಗೆ, ಕೆ.ಎಚ್.ಮುನಿಯಪ್ಪ, ಕೆ. ಪರಮೇಶ್ವರ ರವನ್ನು ಕಾಂಗ್ರೆಸ್ ನವರು ಪಕ್ಷ ಸೋಲಿಸಿ ದಲಿತರನ್ನು ಬೆಳೆಯಲು ಬಿಡಲಿಲ್ಲ. ಕಾಂಗ್ರೆಸ್ ನೀತಿ ದೀನ ದಲಿತರನ್ನು ತುಳಿಯುವಂತ ಕೆಲಸ ಮಾಡುತ್ತಿದೆ. ಬಿಜೆಪಿ ಸಚಿವ ಸಂಪುಟದಲ್ಲಿ ದೀನದಲಿತರಿಗೆ ಹೆಚ್ಚಿನ ಸ್ಥಾನ ನೀಡಿದೆ ಎಂದರು.
ಎಸ್ ಸಿ, ಎಸ್ ಟಿ, ಸಮುದಾಯಕ್ಕೆ ಮೀಸಲಾತಿ ಹೆಚ್ಚಳಕ್ಜೆ ಕಳೆದ ನಾಲವತ್ತು ವರ್ಷಗಳಿಂದ ಹೋರಾಟ ನಡೆಸಿದರೂ ಕಾಂಗ್ರೆಸ್ ಮೀಸಲಾತಿ ಜಾರಿ ಮಾಡಲಿಲ್ಲ ಅದರೆ ಬಿಜೆಪಿ ಸರಕಾರ ಜಾರಿ ಮಾಡಿದೆ. ಈ ಸಾರಿ ಖಂಡಿತವಾಗಿ ಬಿಜೆಪಿ ಗೆಲ್ಲಲಿದೆ. ಮಾಜಿ ಸಿಎಂ ಸಿದ್ಧರಾಮಯ್ಯ ಐದು ವರ್ಷ ಆಡಳಿತ ನಡೆಸಿದರೂ ಶೂನ್ಯ ಸಾಧನೆ. ಕೆಂಪಣ್ಣ ಕಳೆದ ಇಪ್ಪತ್ತು ವರ್ಷಗಳಿಂದ ಯಾವುದೇ ಕಾಮಗಾರಿ ಮಾಡಿಲ್ಲ. ಯಾವುದಾದರೂ ಕಾಮಗಾರಿಯಲ್ಲಿ ಕಮಿಷನ್ ನೀಡಿದರೆ ಬಗ್ಗೆ ದಾಖಲೆಗಳು ಸಲ್ಲಿಸಿಲ್ಲ. ದಾಖಲೆ ನೀಡಿದರೆ ತನಿಖೆ ಸಂಸ್ಥೆಗಳ ಮೂಲಕ ಬಹಿರಂಗ ಪಡಿಸಲಾಗುವುದು. ಲೋಕಾಯುಕ್ತಗೆ ದಾಖಲೆ ಸಲ್ಲಿಸಿ ಕಮಿಷನ್ ಆರೋಪ ಸಾಬೀತು ಪಡಿಸಲಿ ಎಂದು ಸವಾಲು ಹಾಕಿದರು.
ಈ ಸಂದರ್ಭದಲ್ಲಿ ಮಾಜಿ ಸಂಸದ ಜಿತೇಂದ್ರ ರೆಡ್ಡಿ, ಎನ್. ವೈ. ಹನುಮಂತಪ್ಪ, ಕೆ.ಎಂ. ಮಹೇಶ್ವರ ಸ್ವಾಮಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Derogatary Term: ಸಿ.ಟಿ.ರವಿ ಪ್ರಕರಣಗಳು ಸಿಐಡಿ ತನಿಖೆಗೆ
A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ
ಮೇಲ್ಮನೆಗೆ ನಾನೇ ಫೈನಲ್, ನನ್ನ ಹಕ್ಕುಚ್ಯುತಿ ಬಗ್ಗೆ ಕಾನೂನು ತಜ್ಞರ ಜತೆ ಸಮಾಲೋಚಿಸಿ ಕ್ರಮ
Belekeri Mining Case: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಜೈಲು ಶಿಕ್ಷೆಗೆ ಹೈಕೋರ್ಟ್ ತಡೆ
Bus Service launch: ಮಂಗಳೂರು, ಕುಂದಾಪುರಕ್ಕೆ “ಅಂಬಾರಿ ಉತ್ಸವ’
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!
Derogatary Term: ಸಿ.ಟಿ.ರವಿ ಪ್ರಕರಣಗಳು ಸಿಐಡಿ ತನಿಖೆಗೆ
A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ
ಮೇಲ್ಮನೆಗೆ ನಾನೇ ಫೈನಲ್, ನನ್ನ ಹಕ್ಕುಚ್ಯುತಿ ಬಗ್ಗೆ ಕಾನೂನು ತಜ್ಞರ ಜತೆ ಸಮಾಲೋಚಿಸಿ ಕ್ರಮ
ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.