ರೈತರಲ್ಲಿ ಧೈರ್ಯ ತುಂಬಲು ಅಧಿಕಾರಿಗಳಿಗೆ ಸಚಿವರ ಸೂಚನೆ
Team Udayavani, Dec 3, 2021, 10:00 PM IST
ಬೆಂಗಳೂರು: ಕ್ಷೇತ್ರ ಮಟ್ಟದಲ್ಲಿ ಬೆಳೆ ಹಾನಿ ಸಮೀಕ್ಷೆ ನಡೆಸುವಾಗ ಸರಕಾರ ಹಾಗೂ ಇಲಾಖೆ ನಿಮ್ಮ ಜತೆಗಿದೆ ಎಂಬ ಭಾವನೆಯನ್ನು ರೈತರಲ್ಲಿ ಮೂಡಿಸಿ ಅವರ ಆತ್ಮಸ್ಥೈರ್ಯ ಗಟ್ಟಿಗೊಳಿಸಲು ಅಧಿಕಾರಿಗಳು ಮುಂದಾಗಬೇಕೆಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಸೂಚಿಸಿದ್ದಾರೆ.
ಇತ್ತೀಚೆಗೆ ಸುರಿದ ಮಳೆಯಿಂದ ಆಗಿರುವ ಬೆಳೆಹಾನಿ ಬಗ್ಗೆ ಕೃಷಿ ಹಾಗೂ ಕಂದಾಯ ಇಲಾಖೆ ಜಂಟಿಯಾಗಿ ಸಮೀಕ್ಷೆ ನಡೆಸುವ ನಿಟ್ಟಿನಲ್ಲಿ ಕೃಷಿ ಇಲಾಖೆ ಅಧಿಕಾರಿಗಳೊಂದಿಗೆ ವೀಡಿಯೋ ಸಂವಾದ ನಡೆಸಿದ ಸಚಿವರು ಪ್ರಗತಿ ಪರಿಶೀಲಿಸಿದರು.
ಬೆಳೆ ನಷ್ಟದ ಸಮೀಕ್ಷೆ ನಡೆಸಿದ ದಿನವೇ ಬೆಳೆ ಪರಿಹಾರದ ಬಗ್ಗೆಯೂ ಆ್ಯಪ್‌ನಲ್ಲಿ ವಿವರಗಳನ್ನು ದಾಖಲಿಸಬೇಕು. ಜಿಲ್ಲಾಧಿಕಾರಿಗಳ ಜತೆ ಬೆಳೆ ವಿಮೆ ಕಂಪೆನಿಗಳ ಸಭೆ ನಡೆಸಿ ಆದಷ್ಟು ಬೇಗ ಪರಿಹಾರ ಮಂಜೂರು ಮಾಡಿಸುವಂತೆ ಮಾಡಬೇಕು ಎಂದರು.
ಇದನ್ನೂ ಓದಿ:ಸೂರಜ್ ರೇವಣ್ಣ ನಾಮಪಪತ್ರ ಪ್ರಶ್ನಿಸಿ ಅರ್ಜಿ: ಸರಕಾರ, ಆಯೋಗಕ್ಕೆ ನೋಟಿಸ್
ಸಬ್ಸಿಡಿ ಮಾಹಿತಿ ನೀಡಿ
ಈಗಾಗಲೇ ಕೇಂದ್ರ ಹಾಗೂ ರಾಜ್ಯ ಸರಕಾರದಿಂದ ರೈತರಿಗೆ ನೀಡುತ್ತಿರುವ ಇನ್ಪುಟ್ ಸಬ್ಸಿಡಿ ಬಗ್ಗೆ ಅಧಿಕಾರಿಗಳು ಮಾಧ್ಯಮಗಳ ಮೂಲಕ ಪ್ರಚಾರ ನೀಡಬೇಕು. ಹಿಂಗಾರು ಹಂಗಾಮಿಗೆ ರಸಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಕಾಳಸಂತೆಯಲ್ಲಿ ಕೃತಕ ಅಭಾವ ಸೃಷ್ಟಿಸುವವರ ಮೇಲೆ ನಿಗಾ ವಹಿಸಬೇಕು. ರೈತರು ಡಿಎಪಿಯನ್ನೇ ಅವಲಂಬಿಸದೆ ಕಾಂಪ್ಲೆಕ್ಸ್ ಗೊಬ್ಬರಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಅಧಿಕಾರಿಗಳು ಜಾಗೃತಿ ಮೂಡಿಸಬೇಕು ಎಂದು ಸಚಿವರು ಹೇಳಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.