“ಭೂ ಒಡೆತನ’ ಯೋಜನೆ: ಅನುಷ್ಠಾನಕ್ಕೆ ಹೊಸ ಮಾರ್ಗಸೂಚಿ: ಶ್ರೀನಿವಾಸ ಪೂಜಾರಿ
Team Udayavani, Mar 26, 2022, 6:35 AM IST
ಬೆಂಗಳೂರು: ಭೂ ರಹಿತ ಎಸ್ಸಿ/ಎಸ್ಟಿ ವರ್ಗದ ಕೃಷಿ ಕಾರ್ಮಿಕ ಕುಟುಂಬಗಳಿಗೆ ಜಮೀನು ಕೊಡಲು ಡಾ| ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಅನುಷ್ಠಾನಗೊಳಿಸಲಾಗುತ್ತಿರುವ ಭೂ ಒಡೆತನ ಯೋಜನೆಯ ಅನುಷ್ಠಾನಕ್ಕೆ ಹೊಸ ಮಾರ್ಗಸೂಚಿ ಗಳನ್ನು ತರಲಾಗುವುದು ಎಂದು ಸಮಾಜ ಕಲ್ಯಾಣ ಹಾಗೂ ಹಿಂದು ಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ವೈ.ಎ. ನಾರಾಯಣಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಹಂಚಿಕೆಯಾದ ಜಮೀನು ದುರ್ಬಳಕೆ ಆಗುತ್ತಿದೆ, ವಂಚನೆ ನಡೆಯತ್ತಿದೆ. ಎಸ್ಸಿ, ಎಸ್ಟಿ ಜನಸಂಖ್ಯೆ ಹೆಚ್ಚಿರುವ ಕಡೆ ಕಡಿಮೆ ಭೂಮಿ ಹಂಚಿಕೆ ಆಗಿದೆ. ಜನಸಂಖ್ಯೆ ಕಡಿಮೆ ಇರುವ ಕಡೆ ಹೆಚ್ಚು ಭೂಮಿ ಹಂಚಿಕೆ ಆಗಿದೆ. ಮಂಜೂರಾದ ಜಮೀನು ಹಸ್ತಾಂತರ ಆಗಿರುವುದಿಲ್ಲ. ಇಂತಹ ಅನೇಕ ಸಮಸ್ಯೆಗಳಿವೆ. ಹಾಗಾಗಿ, ಭೂಒಡೆತನ ಯೋಜನೆ ಅನುಷ್ಠಾನಕ್ಕೆ ಹೊಸ ಮಾರ್ಗಸೂಚಿಗಳನ್ನು ತರಲಾಗುವುದು. ಜಮೀನು ದುರ್ಬಳಕೆ ಆಗಿದ್ದರೆ ಅಥವಾ ಅಕ್ರಮವೆಸಿದ್ದರೆ ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗುವುದು ಕೋಟ ಶ್ರೀನಿವಾಸ ಪೂಜಾರಿ ಮಾಹಿತಿ ನೀಡಿದರು.
ಪ್ರಕರಣಗಳ ತ್ವರಿತ ವಿಲೇವಾರಿ
ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆ-1989ರಡಿ ದಾಖಲಾದ ಪ್ರಕರಣಗಳ ವಿಲೇವಾರಿಗೆ ಕ್ರಮ ಗಳನ್ನು ಕೈಗೊಳ್ಳಲಾಗುತ್ತಿದೆ. 6 ತಿಂಗಳಿಗೊಮ್ಮೆ ಮುಖ್ಯಮಂತ್ರಿ ಯವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಪ್ರಗತಿ ಪರಿಶೀಲನೆ ನಡೆಸಲಾಗುತ್ತಿದೆ.
ಇದನ್ನೂ ಓದಿ:ಮಠಾಧೀಶರ ಬಗ್ಗೆ ಮಾತನಾಡುವ ಕ್ರಮ ಸರಿಯಲ್ಲ: ಆರ್. ಅಶೋಕ್
ಜಿಲ್ಲಾಧಿಕಾರಿಗಳು ಮಾತ್ರವಲ್ಲದೆ ಜಿಲ್ಲಾ ಉಸ್ತುವಾರಿ ಸಚಿವರೂ ಸಭೆ ನಡೆಸುವಂತೆ ಆದೇಶ ಹೊರಡಿಸಲಾಗಿದೆ. ಬಾಕಿ ಇರುವ ಪ್ರಕರಣಗಳನ್ನು ತ್ವರಿತವಾಗಿ ವಿಲೇವಾರಿ ಮಾಡಲು ಹೆಚ್ಚುವರಿ ಸರಕಾರಿ ಅಭಿಯೋಜಕರನ್ನು ನೇಮಕ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಕಾಂಗ್ರೆಸ್ ಸದಸ್ಯ ಯು.ಬಿ. ವೆಂಕಟೇಶ್ ಅವರ ಪ್ರಶ್ನೆಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉತ್ತರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.