Germany ಸಂಸ್ಥೆಗಳಿಗೆ ರಾಜ್ಯದಲ್ಲಿ ಹೂಡಿಕೆಗೆ ಸಚಿವ ಎಂ.ಬಿ.ಪಾಟೀಲ ಆಹ್ವಾನ
Team Udayavani, Dec 9, 2024, 6:38 AM IST
ಬೆಂಗಳೂರು: ರಾಜ್ಯದಲ್ಲಿ ಉದ್ದಿಮೆ ಸ್ಥಾಪನೆ ವಿಸ್ತರಣೆ ಮಾಡುವಂತೆ ಜರ್ಮನಿಯ ಕಂಪೆನಿಗಳಿಗೆ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರು ಆಹ್ವಾನ ನೀಡಿದರು.
ಜಾಗತಿಕ ಹೂಡಿಕೆದಾರರ ಸಮಾವೇಶ “ಇನ್ವೆಸ್ಟ್ ಕರ್ನಾಟಕ’ ಕ್ಕೆ ಹೂಡಿಕೆದಾರರನ್ನು ಆಹ್ವಾನಿಸಲು ರಾಜ್ಯದ ಉನ್ನತ ಮಟ್ಟದ ಅಧಿಕಾರಿಗಳ ನಿಯೋಗದ ಜತೆ ಜರ್ಮನಿ ಪ್ರವಾಸದಲ್ಲಿರುವ ಅವರು, ರಾಜ್ಯದಲ್ಲಿ ಉದ್ಯಮ ಸ್ಥಾಪನೆ, ಬಂಡವಾಳ ಹೂಡಿಕೆ ಮತ್ತು ತಯಾರಿಕೆ ಸಾಮರ್ಥ್ಯ ಹೆಚ್ಚಿಸುವುದರ ಪ್ರಯೋಜಗಳನ್ನು ಅಲ್ಲಿನ ಪ್ರಮುಖ ಉದ್ದಿಮೆಗಳು ಮತ್ತು ವಾಣಿಜ್ಯ ಸಂಘಟನೆಗೆ ಮನವರಿಕೆ ಮಾಡಿಕೊಟ್ಟರು.
ರಾಜ್ಯದಲ್ಲಿ ತಯಾರಿಕಾ ಘಟಕ ಸ್ಥಾಪಿಸಲು ಜರ್ಮನಿಯ ಇಂಡೆಕ್ಸ್ ವೆರ್ಕೆ ಮತ್ತು ತನ್ನ ತಯಾರಿಕಾ ಸಾಮರ್ಥ್ಯ ಹೆಚ್ಚಿಸುವುದಕ್ಕೆ ಮುಂದಾಗಲು ಬಾಷ್ ಕಂಪೆನಿಗೆ ಆಹ್ವಾನ ನೀಡಿದರು.
ಭಾರತದ ಮೆಷಿನ್ ಟೂಲ್ಸ್ ವಲಯದಲ್ಲಿ ಶೇ. 52ರಷ್ಟು ಮಾರುಕಟ್ಟೆ ಪಾಲು ಹೊಂದಿರುವ ಕರ್ನಾಟಕದಲ್ಲಿ ತನ್ನ ತಯಾರಿಕ ಘಟಕ ಆರಂಭಿಸಬೇಕು. ತುಮಕೂರು ಮೆಷಿನ್ ಟೂಲ್ ಪಾರ್ಕ್‌ನಲ್ಲಿ ಲಭ್ಯ ಇರುವ ಅವಕಾಶಗಳನ್ನು ಬಳಸಿಕೊಳ್ಳಬೇಕು ಎಂದು ಇಂಡೆಕ್ಸ್ ವೆರ್ಕೆ ಕಂಪೆನಿಗೆ ಮನವಿ ಮಾಡಿದರು.
ಜರ್ಮನಿಯ ಪ್ರಮುಖ ವಾಣಿಜ್ಯೋದ್ಯಮ ಸಂಘಟನೆಗಳಲ್ಲಿ ಒಂದಾಗಿರುವ 1,60,000 ಉದ್ದಿಮೆಗಳನ್ನು ಪ್ರತಿನಿ ಧಿಸುವ ಐಎಚ್‌ಕೆ ಸ್ಟುಟ್‌ಗಾರ್ಟ್ ಜತೆಗಿನ ಸಮಾಲೋಚನೆಯಲ್ಲಿ ಕರ್ನಾಟಕವು ಜಾಗತಿಕ ಬಂಡವಾಳ ಹೂಡಿಕೆಯ ಮೆಚ್ಚಿನ ತಾಣವಾಗಿರುವುದನ್ನು ಪ್ರಮುಖವಾಗಿ ಪ್ರಸ್ತಾವಿಸಿ, ರಾಜ್ಯದಲ್ಲಿ ವಹಿವಾಟು ಆರಂಭಿಸಲು ಲಭ್ಯ ಇರುವ ಪೂರಕ ವಾತಾವರಣವನ್ನು ಮನವರಿಕೆ ಮಾಡಿಕೊಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt.: ಅನರ್ಹ “ಬಿಪಿಎಲ್’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ
“ಕಾಂಗ್ರೆಸ್‌ನಲ್ಲಿ ದಲಿತ ಸಚಿವರಿಗೆ ಊಟದ ಸ್ವಾತಂತ್ರ್ಯವೂ ಇಲ್ಲ’
BJP: ಭಿನ್ನರನ್ನು ನಿಯಂತ್ರಿಸದಿದ್ದರೆ ಕಷ್ಟ: ಎಸ್.ಟಿ. ಸೋಮಶೇಖರ್
Karnataka: ಸರಕಾರ ಉತ್ತರಿಸಬೇಕಾದ ಪ್ರಶ್ನೆಗಳಿವೆ: ಬಿ.ಎಲ್. ಸಂತೋಷ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.