ಬಾದಾಮಿಯಲ್ಲಿ ಐಟಿಸಿ ಪಂಚತಾರಾ ಹೋಟೆಲ್ ಸ್ಥಾಪನೆಗೆ ಸಚಿವ ನಿರಾಣಿ ಸಲಹೆ
Team Udayavani, Oct 11, 2022, 11:27 AM IST
ಹೊಸದಿಲ್ಲಿ: ಐತಿಹಾಸಿಕ ಪ್ರವಾಸಿ ತಾಣ ಬಾದಾಮಿಯಲ್ಲಿ ಪಂಚತಾರಾ ಹೋಟೆಲ್ ಸ್ಥಾಪಿಸಲು ಐಟಿಸಿ ಮುಖ್ಯಸ್ಥರಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ ಆರ್. ನಿರಾಣಿ ಸಲಹೆ ನೀಡಿದ್ದಾರೆ.
ಜಾಗತಿಕ ಹೂಡಿಕೆದಾರ ಸಮಾವೇಶದ ರೋಡ್‌ಶೋ ಭಾಗವಾಗಿ ದಿಲ್ಲಿಯಲ್ಲಿ ಅ.11 ರ ಮಂಗಳವಾರ ಆಯೋಜಿಸಿದ್ದ ಸಭೆಯಲ್ಲಿ, ಐಟಿಸಿಯ ಸಿಎಂಡಿ ಸಂಜೀವ್ ಪುರಿ, ಕಂಪನಿಯ ಉಪಾಧ್ಯಕ್ಷ ಅನಿಲ್ ರಜಪುತ್ ಅವರನ್ನು ಸಚಿವರು ಭೇಟಿಯಾಗಿ ಈ ಕುರಿತು ಮಾತುಕತೆ ನಡೆಸಿದರು.
‘ಬಾದಾಮಿ, ಐಹೊಳೆ ಮತ್ತು ಪಟ್ಟದಕಲ್ಲು ರಾಜ್ಯದ ಪ್ರಮುಖ ಪ್ರವಾಸಿ ತಾಣಗಳಾಗಿದ್ದು, ಈ ಭಾಗದಲ್ಲಿ ಪಂಚತಾರಾ ಹೋಟೆಲ್ ಸ್ಥಾಪಿಸಿದರೆ ಪ್ರವಾಸಿಗರಿಗೆ ಅನುಕೂಲವಾಗುವುದು’ಎಂದು ಸಚಿವರು ಸಲಹೆ ನೀಡಿದರು.
‘ಹೋಟೆಲ್ ಸ್ಥಾಪನೆಯ ಸಾಧ್ಯತೆ ಬಗ್ಗೆ ಪರಿಶೀಲಿಸಿ, ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು,’ ಎಂದು ಐಟಿಸಿ ಮುಖ್ಯಸ್ಥ ಸಂಜೀವ್ ಪುರಿ ತಿಳಿಸಿದರು.
ಕರ್ನಾಟಕದಲ್ಲಿ ಹೂಡಿಕೆ ಹಾಗೂ ಉದ್ಯಮ ವಿಸ್ತರಣೆಗೆ ಇರುವ ಅವಕಾಶಗಳ ಮಾಹಿತಿ ನೀಡಿದ ಸಚಿವರು, ನವೆಂಬರ್ 2 ರಿಂದ 4ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಭೆಗೆ ಔಪಚಾರಿಕವಾಗಿ ಆಹ್ವಾನಿಸಿದರು.
ಸಭೆಯಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ರಮಣರೆಡ್ಡಿ, ಕೈಗಾರಿಕಾಭಿವೃದ್ಧಿ ಆಯುಕ್ತ ಗುಂಜನ್ ಕೃಷ್ಣ, ಐಕೆಎಫ್ ಮಂಡಳಿ ಸದಸ್ಯರು, ಎಫ್‌ಕೆಸಿಸಿ ಅಧ್ಯಕ್ಷ ಉಲ್ಲಾಸ್ ಕಾಮತ್ ಹಾಗೂ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ರಾಜ್ಯ ಸರಕಾರಿ ನೌಕರರ ಸಂಘ ಅಧ್ಯಕ್ಷ ಷಡಾಕ್ಷರಿ ಮರು ಆಯ್ಕೆ
Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.