ಸಚಿವ ನಿತಿನ್ ಗಡ್ಕರಿ ಭೇಟಿ ಮಾಡಿದ ಡಿ.ಕೆ.ಶಿವಕುಮಾರ್
Team Udayavani, Sep 9, 2022, 10:15 PM IST
ಬೆಂಗಳೂರು: ಕನಕಪುರದಲ್ಲಿ ಹಾದುಹೋಗುವ ದಿಂಡಗಲ್-ಬೆಂಗಳೂರು ಮಾರ್ಗದ ರಾಷ್ಟ್ರೀಯ ಹೆದ್ದಾರಿ- 209ರಲ್ಲಿ ಸಂಚಾರದಟ್ಟಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅರ್ಕಾವತಿ ನದಿ ಉದ್ದಕ್ಕೂ ಇರುವ ಸೇತುವೆಗೆ ಹೊಂದಿಕೊಂಡಂತೆ ದ್ವಿಪಥ ಸೇತುವೆ ನಿರ್ಮಿಸಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಆಗ್ರಹಿಸಿದ್ದಾರೆ.
ಶುಕ್ರವಾರ ಸಂಸದ ಡಿ.ಕೆ.ಸುರೇಶ್, ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ಜತೆಗೆ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಅವರು, ರಾಷ್ಟ್ರೀಯ ಹೆದ್ದಾರಿ-209ರಲ್ಲಿ ಕಿ.ಮೀ. 419.550ರಿಂದ 424.100 ನಡುವೆ ಎಡಭಾಗದಲ್ಲಿ ದ್ವಿಪಥದ ಪರ್ಯಾಯ ಸೇತುವೆ ನಿರ್ಮಿಸಬೇಕು. ಇದಕ್ಕೆ 62.10 ಕೋಟಿ ರೂ. ಖರ್ಚಾಗಲಿದೆ ಎಂದು ಅಂದಾಜಿಸಲಾಗಿದೆ. ಇದರಿಂದ ಬೆಂಗಳೂರು- ದಿಂಡಗಲ್ ನಡುವೆ ಸಂಚರಿಸುವ ವಾಹನ ಸವಾರರಿಗೆ ಸಾಕಷ್ಟು ಅನುಕೂಲ ಆಗಲಿದೆ. ಈ ಕುರಿತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಬೇಕೆಂದು ಆಗ್ರಹಿಸಿದರು.
ಈಗಾಗಲೇ ಇರುವ ಸೇತುವೆಯು 1954ರಲ್ಲಿ ನಿರ್ಮಿಸಿದ್ದು, ಸಾಕಷ್ಟು ಶಿಥಿಲಗೊಂಡಿದೆ. ಈ ಮಧ್ಯೆ ಉದ್ದೇಶಿತ ಮಾರ್ಗದಲ್ಲಿ ಸಂಚಾರ ದಟ್ಟಣೆಯೂ ಹೆಚ್ಚಾಗಿದೆ. ಈ ಎರಡೂ ದೃಷ್ಟಿಯಿಂದ ಹಾಗೂ ಸ್ಥಳೀಯರ ಅನುಕೂಲಕ್ಕಾಗಿ ಈಗಿರುವ ಸೇತುವೆಗೆ ಹೊಂದಿಕೊಂಡಂತೆ ದ್ವಿಪಥ ಸೇತುವೆ ನಿರ್ಮಿಸಬೇಕು. ಯೋಜನೆ ಕುರಿತ ಅಂದಾಜು ವೆಚ್ಚ ಸೇರಿದಂತೆ ಪ್ರಸ್ತಾವನೆಯನ್ನು ಪ್ರಾಧಿಕಾರಕ್ಕೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!
CTRavi; ಯಾರು,ಯಾರನ್ನು,ಯಾವಾಗ ಖರೀದಿಸಲು ಪ್ರಯತ್ನಿಸಿದ್ದಾರೆ?: ಸಿಎಂಗೆ ಸಿ.ಟಿ.ರವಿ ಪ್ರಶ್ನೆ
Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.