ಕೆಎಂಎಫ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವ ಪ್ರಭು ಚೌವ್ಹಾಣ್
Team Udayavani, Jun 30, 2022, 8:31 PM IST
ಬೆಂಗಳೂರು: ಪಶು ಸಂಗೋಪನೆ ಸಚಿವ ಪ್ರಭು ಬಿ.ಚವ್ಹಾಣ್ ಅವರು ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳಕ್ಕೆ ಗುರುವಾರ ದಿಢೀರ್ ಭೇಟಿ ನೀಡಿ ಹಾಲು ಮತ್ತು ಹಾಲಿನ ವಿವಿಧ ಖಾದ್ಯಗಳ ಉತ್ಪನ್ನ ಘಟಕದಲ್ಲಿ ತಯಾರಿಸುವ ಸಿಹಿ ಮತ್ತು ತಿಂಡಿ ತಿನಿಸುಗಳನ್ನು ಪರಿಶೀಲನೆ ನಡೆಸಿದರು.
ಕೆಎಂಎಫ್ ಸಭಾಂಗಣದಲ್ಲಿ ಮಾತನಾಡಿದ ಅವರು, ಹಾಲು ಪೂರೈಸುವ ರೈತರಿಗೆ ಕೊಡುತ್ತಿರುವ ಪ್ರೋತ್ಸಾಹಧನವನ್ನು ವಿಲೇ ಮಾಡದೇ ಕೂಡಲೇ ಅವರ ಖಾತೆಗಳಿಗೆ ಜಮಾ ಮಾಡಬೇಕು ಎಂದು ತಾಕೀತು ಮಾಡಿದರು.
ನಂದಿನಿ ಉತ್ಪನ್ನಗಳ ಉತ್ಪಾದನೆಯನ್ನು ಹೆಚ್ಚಿಸಬೇಕು ಎಂದು ಸೂಚನೆ ನೀಡಿದ ಅವರು, ರೈತರಿಗೆ ಅನಾನುಕೂಲವಾಗದಂತೆ ಜಾಗೃತೆ ವಹಿಸಬೇಕು. ರೈತರಿಗೆ ತೊಂದರೆಯಾಗದಂತೆ ಹಾಲನ್ನು ಖರೀದಿ ಮಾಡಬೇಕು ಎಂದು ಇದೇ ವೇಳೆ ವ್ಯವಸ್ಥಾಪಕ ನಿರ್ದೇಶಕರಿಗೆ ಪ್ರಭು ಚವ್ಹಾಣ್ ಸೂಚನೆ ನೀಡಿದರು.
ದೇಶದಲ್ಲಿಯೇ ಸಹಕಾರಿ ವಲಯದಲ್ಲಿ ಎರಡನೇ ಸ್ಥಾನದಲ್ಲಿರುವ ಕೆಎಂಎಫ್ ರೈತರ ಆರ್ಥಿಕ ಅಭಿವೃದ್ಧಿಗೆ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದು, ಅಂತಹ ಯೋಜನೆಗಳನ್ನು ರೈತರಿಗೆ ತಲುಪಿಸುವಲ್ಲಿ ಶ್ರಮಿಸಬೇಕು ಎಂದು ಪ್ರಭು ಚವ್ಹಾಣ್ ತಾಕೀತು ಮಾಡಿದರು.
ಕೆಎಂಎಫ್ ಡೈರಿ ಘಟಕವನ್ನು ಉತ್ತಮವಾಗಿ ನಿರ್ವಹಣೆ ಮಾಡಿದ್ದೀರಿ. ಮುಂದೆಯೂ ಉತ್ತಮವಾಗಿ ನಿರ್ವಹಣೆ ಮಾಡಬೇಕು. ಸ್ವತ್ಛತೆಗೆ ಇನ್ನೂ ಹೆಚ್ಚಿನ ಆಧ್ಯತೆ ನೀಡಬೇಕೆಂದು ಪ್ರಭು ಚವ್ಹಾಣ್ ಅವರು ಸಲಹೆ ನೀಡಿದರು.
ಕೆಎಂಎಫ್ ಆವರಣದಲ್ಲಿರುವ ಹೈನುಗಾರಿಕೆ ಪಿತಾಮಹ ಕುರಿಯನ್ ಅವರ ಪ್ರತಿಮೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದರು. ಕೆಎಂಎಫ್ ಕೇಂದ್ರ ಕಚೇರಿಯಲ್ಲಿ ವಿವಿಧ ಖಾದ್ಯ ತಯಾರಿಕಾ ಘಟಕಗಳು ಹಾಗೂ ಕೇಂದ್ರಿಯ ಪ್ರಯೋಗಾಲಯಕ್ಕೆ ಭೇಟಿ ನೀಡಿ ತಪಾಸಣೆ ನಡೆಸಿದರು. ಈ ಸಂದರ್ಭದಲ್ಲಿ ವ್ಯವಸ್ಥಾಪಕ ನಿರ್ದೇಶಕ ಬಿ.ಸಿ.ಸತೀಶ್ ಸೇರಿದಂತೆ ಹಲವು ಅಧಿಕಾರಿಗಳು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
Waqf Property: ಬೀದರ್‌ನ ಬಹುಮನಿ ಕೋಟೆಗೂ ವಕ್ಫ್ ಮೊಹರು!
MUST WATCH
ಹೊಸ ಸೇರ್ಪಡೆ
Bantwal: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.